ನಮ್ಮಜಿಲ್ಲೆ

ಮಾಸ್ಕ್, ಸ್ಯಾನಿಟೈಸರ್‍ಗಳ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳ ಕೃತಕ ಅಭಾವ ಸೃಷ್ಟಿಸಿ ನಿಗದಿತ ದರಕ್ಕಿಂತ ಅಧಿಕ ಬೆಲೆಗೆ ಮಾರಾಟ ಮಾಡುವುದನ್ನು ಪತ್ತೆಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ನಿರ್ದೇಶಿಸಿದ ಹಿನ್ನೆಲೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಜಂಟಿಯಾಗಿ ಕೆಲವು ಔಷಧ ಅಂಗಡಿಗಳ ತಪಾಸಣೆ ನಡೆಸಿ ದಂಡ ವಿಧಿಸಿ ಕ್ರಮ ಕೈಗೊಂಡಿದೆ.

ಜಿಲ್ಲೆಯ ಔಷಧಿ ವ್ಯಾಪಾರಿಗಳು ತಮ್ಮ ಅಂಗಡಿ/ಗೋದಾಮಿನಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್ ವಸ್ತುಗಳ ಕೃತಕ ಅಭಾವ ಸೃಷ್ಟಿಸುವಂತಿಲ್ಲ ಮತ್ತು ನಿಗಧಿತ ದರದಲ್ಲೇ ಮಾರಾಟ ಮಾಡಲು ಸೂಚಿಸಿದೆ. ತಪ್ಪಿದ್ದಲ್ಲಿ ನಿಯಮ ಉಲ್ಲಂಘಿಸುವ ಔಷಧಿ ವ್ಯಾಪಾರಿಗಳ ವಿರುದ್ಧ ಅಗತ್ಯ ವಸ್ತುಗಳ ಮತ್ತು ಪೊಟ್ಟಣ ಸಾಮಗ್ರಿಗಳ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದಾಗಿ ಜಿಲ್ಲೆಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು   ತಿಳಿಸಿಸಿದ್ದಾರೆ.

Leave a Reply

error: Content is protected !!