NEWSನಮ್ಮಜಿಲ್ಲೆ

ಮುಂದುವರಿದ ಕೊರೊನಾ ಅಟ್ಟಹಾಸಕ್ಕೆ 10 ಮಂದಿ ಬಲಿ

ಹೆಚ್ಚಾಗುತ್ತಿದೆ ಸೋಮಕಿತರ ಸಂಖ್ಯೆ l ಮರಣ ಮೃದಂಗ ಬಾರಿಸುತ್ತಿದೆ ಕೋವಿಡ್‌-19

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಕೊವಿಡ್-19ಗೆ ಮಂಗಳವಾರ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಇನ್ನು ಹೊಸ 13 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 260ಮಂದಿಗೆ ಸೋಂಕು ತಗುಲಿದ್ದು, ಎಲ್ಲೆಡೆ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರಿನ 76 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ವೈರಸ್‌ಗೆ ಬಲಿಯಾಗಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ ಸಂಜೆ ಮತ್ತೆ ಇಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ತನ್ನ ಮರಣ ಮೃದಂಗಕ್ಕೆ ಮುಂದಾಗುತ್ತಿದೆ. ಇದರಿಂದ ಜನರು ಎಚ್ಚರಿಕೆ ವಹಿಸಬೇಕಿದೆ.

ಬೆಳಗ್ಗೆ 11 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಂಜೆ ಮತ್ತೆ ಎರಡು ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಕಲಬುರಗಿಯ 55 ವರ್ಷದ ವೃದ್ಧ, ಬೆಂಗಳೂರು ನಗರದ 65 ವರ್ಷದ ಹಾಗೂ 76 ವರ್ಷದ ವೃದ್ಧರು, ವಿಜಯಪುರದ 69 ವರ್ಷದ ವೃದ್ಧ ಸೋಂಕಿಗೆ ಬಲಿಯಾಗಿದ್ದಾರೆ.

ಬಾಗಲಕೋಟೆಯ 43 ವರ್ಷದ ಪುರುಷ ಮತ್ತು 32 ವರ್ಷದ ಮಹಿಳೆ, ಚಿಕ್ಕಬಳ್ಳಾಪುರದ 65 ವರ್ಷದ ವೃದ್ಧ, ಬಾಗಲಕೋಟೆಯ 39 ವರ್ಷದ ಮಹಿಳೆ, ಬೆಂಗಳೂರು ನಗರದ 65 ವರ್ಷದ ವೃದ್ಧ, ಹಿಂದುಪುರದಿಂದ ದ್ವಿಚಕ್ರವಾಹನದಲ್ಲಿ ಪ್ರಯಾಣ ಮಾಡಿದ ಬೆಂಗಳೂರಿನ 26 ವರ್ಷದ ವ್ಯಕ್ತಿ, ಕಲಬುರಗಿಯ 10 ವರ್ಷದ ಬಾಲಕಿ, 51ವರ್ಷದ ವೃದ್ಧ, 35 ವರ್ಷದ ಮಹಿಳೆ, ವಿಜಯಪುರದ 69 ವರ್ಷದ ವೃದ್ಧ, ಬೆಳಗಾವಿಯ 33 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.

 

Leave a Reply

error: Content is protected !!
LATEST
ರೈಲ್ವೆ ನೌಕರರಿಗೆ ದಸರಾ ಹಬ್ಬದ ಬಂಪರ್: 78 ದಿನಗಳ ಸಂಬಳಕ್ಕೆ ಸಮನಾದ ಬೋನಸ್ ಘೋಷಣೆ ಅ.6ರಂದು ನಿವೃತ್ತ ನೌಕರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTC ತುಮಕೂರು: ಖಾಸಗಿ ಚಾಲಕರಿಗೆ ಮಣೆ ಹಾಕುವ ಡಿಸಿ, ಡಿಎಂಇ 20-30ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕರ ಕಡೆಗಣನೆ... ಕರ್ನಾಟಕ - ಆಂಧ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹೆಚ್ಚಿಸಿ: ಎರಡೂ ನಿಗಮಗಳ ಎಂಡಿಗಳಿಗೆ ಪ್ರಯಾಣಿಕರ ಒತ್ತಾಯ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ KSRTC ನಿವೃತ್ತ ನೌಕರರಿಗೆ ಹೆಚ್ಚಿನ ಪಿಂಚಣಿ ಅನುಷ್ಠಾನ ಶೀಘ್ರ ಜಾರಿಗೊಳಿಸಿ: ಕೇಂದ್ರದ ರಾಜ್ಯ ಕಾರ್ಮಿಕ ಸಚಿವರಿಗೆ ಸಂಸದ... ಬಿಸ್ಮಿಲ್ಲ ನಗರದ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಎಎಪಿ ಆಗ್ರಹ KSRTC ಹೊಳೆನರಸೀಪುರ ಘಟಕದ ನೌಕರರಿಗೆ ಕಿರುಕುಳ ಕೊಡುತ್ತಿರುವ DME- ದೂರು ನೀಡಿ 5 ತಿಂಗಳಾದರೂ ಸ್ಪಂದಿಸದ ಎಂಡಿ! BMTC ಚಾಲನಾ ಸಿಬ್ಬಂದಿಗಳಿಗೆ ಗನ್ ಲೈಸನ್ಸ್ ಪಡೆಯಲು ಅನುಮತಿ ನೀಡಬೇಕು: ಲಿಖಿತವಾಗಿ ಎಂಡಿಗೆ ಮನವಿ ಸಲ್ಲಿಸಿದ ನೌಕರ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತ ಕೆಂಪಣ್ಣ ಆಯೋಗದ ವರದಿ ತಕ್ಷಣ ಬಹಿರಂಗ ಪಡಿಸಿ, ಸದನದಲ್ಲಿ ಮಂಡಿಸಿ: ಎಎಪಿ ಒತ್...