Vijayapatha - ವಿಜಯಪಥ > NEWS > ಆರೋಗ್ಯ > ಮೂರು ಮೆಡಿಕಲ್ ಶಾಪ್ಗಳ ಮೇಲೆ ದಾಳಿ ಪ್ರಕರಣ ದಾಖಲು
ಹಾಸನ: ಕೊರೊನಾ ಸೋಂಕಿನ ವ್ಯಾಪಕತೆಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ಸ್‍ಗಳ ಅವಶ್ಯಕತೆ ಹೆಚ್ಚಾಗಿರುವ ಕಾರಣ ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಮೆಡಿಕಲ್ ಶಾಪ್ಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು 20 ಸಾವಿರ ರೂ. ದಂಡವಿಧಿಸಿದ್ದಾರೆ.
ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಆಹಾರ ಮತ್ತು ಸರಬರಾಜು ಇಲಾಖೆ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಜೊತೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಔಷಧಿ ಅಂಗಡಿಗಳನ್ನು ಪರಿಶೀಲಿಸಿ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಆಹಾರ ಮತ್ತು ಸರಬರಾಜು ಉಪ ನಿರ್ದೇಶಕಿ ಸವಿತಾ ತಿಳಿಸಿದ್ದಾರೆ.
ನಗರದ ಮೂರು ಮೆಡಿಕಲ್ ಶಾಪ್ಗಳ ಮೇಲೆ ಪ್ರಕರಣ ದಾಖಲಿಸಿ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
Editordev
Leave a reply