NEWSನಮ್ಮರಾಜ್ಯ

ಮೇ 3- ರಾಜ್ಯದಲ್ಲಿ 5 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ರಾಜ್ಯದಲ್ಲಿ ಹೊಸದಾಗಿ 5 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 606 ಏರಿಕೆಯಾಗಿದೆ.  ಇವುಗಳಲ್ಲಿ 25 ಜನರು ಮೃತಪಟ್ಟಿದ್ದು, 282 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ.

ಕಲಬುರಗಿ  ಮೂರು ಮತ್ತು ಬಾಗಲಕೋಟೆ ಎರಡು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 606 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 282 ಮಂದಿ ಗುಣಮುಖರಾಗಿದ್ದಾರೆ. ಇನ್ನು 299  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದುವರೆಗೂ 25 ಮಂದಿ ಮೃತಪಟ್ಟಿದ್ದಾರೆ.  ಈ ನಡುವೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 39,980 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 39,980 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,323 ಮಂದಿ ಮೃತಪಟ್ಟಿದ್ದಾರೆ. 10,819 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 34,85,936  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,44,812 ಜನರು ಮೃತಪಟ್ಟಿದ್ದಾರೆ. 11,24,484 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ