NEWSನಮ್ಮರಾಜ್ಯ

ಮೇ 4ರ ಸಂಜೆ ವೇಳೆಗೆ ರಾಜ್ಯದಲ್ಲಿ 37 ಕೊರೊನಾ ಸೋಂಕು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ರಾಜ್ಯದಲ್ಲಿ ಹೊಸದಾಗಿ 37 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 651 ಏರಿಕೆಯಾಗಿದೆ.

ಇವುಗಳಲ್ಲಿ 27 ಜನರು ಮೃತಪಟ್ಟಿದ್ದು, 321 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ. ದಾವಣಗೆರೆಯಲ್ಲಿ22 , ಬೀದರ್‌ 7,  ಕಲಬುರಗಿ  ಮತ್ತು ಮಂಡ್ಯದಲ್ಲಿ ತಲಾ ಎರಡು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರು, ಹಾವೇರಿ, ಚಿಕ್ಕಬಳ್ಳಾಪುರ, ವಿಜಯಪುರದಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ.  ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 642 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 321 ಮಂದಿ ಗುಣಮುಖರಾಗಿದ್ದಾರೆ. ಇನ್ನು 303  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದುವರೆಗೂ 27 ಮಂದಿ ಮೃತಪಟ್ಟಿದ್ದಾರೆ.  ಈ ನಡುವೆ ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 42,679  ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 42,679 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,396 ಮಂದಿ ಮೃತಪಟ್ಟಿದ್ದಾರೆ. 11,782 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 35,81,871 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,48,555 ಜನರು ಮೃತಪಟ್ಟಿದ್ದಾರೆ. 11,59,500 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ..

Leave a Reply

error: Content is protected !!
LATEST
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್ KSRTC: ₹185 ಟಿಕೆಟ್‌ ಕೊಟ್ಟು ₹200 ಕೇಳಿದ ಕಂಡಕ್ಟರ್‌ - ದೂರು ಕೊಟ್ಟ ಪ್ರಯಾಣಿಕ ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು - ಪ್ರಯಾಣಿಕರು ಸೇಫ್ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.25.5 ವೇತನ ಹೆಚ್ಚಳ ಬಹುತೇಕ ಖಚಿತ