NEWSಕೃಷಿನಮ್ಮರಾಜ್ಯ

ಮೈಸೂರಿನ ಎಪಿಎಂಸಿ ರೌಂಡ್ಸ್ ಹಾಕಿದ ಸಚಿವರು

ರೈತರು, ವರ್ತಕರ ಅಹವಾಲು ಆಲಿಸಿದ ಉಸ್ತುವಾರಿ ಸಚಿವ ಸೋಮಶೇಖರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು:  ಎಪಿಎಂಸಿಗೆ ಭೇಟಿ ನೀಡಿ ರೈತರು ಹಾಗೂ ವರ್ತಕರ ಅಹವಾಲನ್ನು ಜಿಲ್ಲಾ ಉಸ್ತುವಾರಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಆಲಿಸಿದರು.

ಶನಿವಾರ ಮುಂಜಾನೆಯೇ ನಗರ ಪ್ರದಕ್ಷಿಣೆ ಹಾಕಿದ ಸಚಿವರು, ಕೊರೊನಾ ಸೋಂಕು ನಿವಾರಕ ಟನಲ್ ನಲ್ಲೆ ಆಗಮಿಸಿ ಎಲ್ಲರೂ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂಬ ಸಂದೇಶ ನೀಡಿದರು.

ಎಪಿಎಂಸಿಗೆ ಭೇಟಿ ನೀಡಿ ಕೈಗೊಳ್ಳಲಾದ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬಳಿಕ ವರ್ತಕರಿಂದಲೇ ಕೈಗೊಳ್ಳಲಾಗಿರುವ ವ್ಯವಸ್ಥೆ ಸಮರ್ಪಕವಾಗಿದೆಯೇ ಎಂದು ಖುದ್ದು ತಿಳಿದುಕೊಂಡರು. ಎಲ್ಲ ಸಮಸ್ಯೆಗಳಿಗೂ ತಕ್ಷಣವೇ ಸ್ಪಂದನೆ ಸಿಗಲಿದೆ, ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.

ತರಕಾರಿಗಳನ್ನು ಮಾರುಕಟ್ಟೆಗೆ ಸಾಗಿಸುವ ವೇಳೆ ಚೆಕ್ ಪೋಸ್ಟ್ ಸೇರಿದಂತೆ ಎಲ್ಲೂ ಯಾವುದೇ ತೊಂದರೆಯಾಗಿಲ್ಲವೇ? ಸೂಕ್ತ ಬೆಲೆ ಸಿಗುತ್ತಿದೆಯೇ ಎಂದು ರೈತರನ್ನು ಪ್ರಶ್ನಿಸಿದ ಸಚಿವರು, ಸಮಸ್ಯೆ ಇದ್ದರೆ ತಕ್ಷಣ ಗಮನಕ್ಕೆ ತರುವಂತೆ ಸೂಚಿಸಿದರು.

ಶೀಘ್ರ ಕೋಲ್ಡ್ ಸ್ಟೋರೇಜ್

ಎಲ್ಲ ಎಪಿಎಂಸಿ ಗೆ ಭೇಟಿ ನೀಡಿದಂತೆ ಇಲ್ಲೂ ಭೇಟಿ ನೀಡಿ ಪರಿಶೀಲಿಸುತ್ತಿದ್ದೇನೆ. ಸಮಸ್ಯೆಗಳ ಪರಿಹಾರವೇ ನನ್ನ ಮೊದಲ ಆದ್ಯತೆ. ಪೊಲೀಸರಿಂದ ಸೇರಿ ಯಾರಿಂದಲೂ ಸಮಸ್ಯೆ ಆಗಬಾರದು ಎಂಬುದು ಮುಖ್ಯಮಂತ್ರಿಗಳ ಉದ್ದೇಶ ಸಹ. ಹೀಗಾಗಿ ಖುದ್ದು ನಾನೇ ಭೇಟಿ ಮಾಡಿ ಸಮಸ್ಯೆಗೆ ಪರಿಹಾರ ಸೂಚಿಸುತ್ತಿದ್ದೇನೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.

ಎಪಿಎಂಸಿಗೆ ಕೋಲ್ಡ್ ಸ್ಟೋರೇಜ್ ಸಿಸ್ಟಮ್ ಅಳವಡಿಸಬೇಕಿದೆ. ಆ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಪಡೆದು ಕ್ರಮ‌ ಕೈಗೊಳ್ಳುತ್ತೇನೆ. ಕೋಲ್ಡ್ ಸ್ಟೋರೆಜ್ ಇದ್ದರೆ ತರಕಾರಿ ಇಟ್ಟು ಮಾರಲು ರೈತರಿಗೆ ಅನುಕೂಲ ಆಗಲಿದೆ. ಇದರಿಂದ ತರಕಾರಿ ಕೊಳೆಯುವಿಕೆಗೆ ಬ್ರೇಕ್ ಬೀಳಲಿದೆ ಎಂದು ತಿಳಿಸಿದರು.

ರೈತರಿಗೆ ಸರಿಯಾದ ಬೆಂಬಲ ಬೆಲೆ ಸಿಗದೆ ತರಕಾರಿ ನಾಶಪಡಿಸುತ್ತಿರುವ ವಿಚಾರ, ಅದನ್ನು ಸರ್ಕಾರದಿಂದಲೇ ಖರೀದಿ ಮಾಡುವ ಬಗ್ಗೆ ಯೋಚನೆ ಮಾಡುತ್ತೇವೆ. ಕೆಲವೆಡೆ ಈಗಾಗಲೇ ಆ ಕೆಲಸ‌ ಆಗುತ್ತಿದೆ. ರೈತರಿಂದ ಪಡೆದು ಹಾಪ್ ಕಾಮ್ಸ್ ಮೂಲಕ ಮಾರಾಟದ ಬಗ್ಗೆ ಚಿಂತನೆ ಇದೆ. ಜನಪ್ರತಿನಿಧಿಗಳು ಅಧಿಕಾರಿಗಳ ಬಳಿ ಈ ಬಗ್ಗೆ ಚರ್ಚಿಸಿ ಕ್ರಮ‌ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ