NEWSನಮ್ಮಜಿಲ್ಲೆ

ಮೈಸೂರು ಜಿಲ್ಲೆಯನ್ನು ಕೊರೊನಾ ಮುಕ್ತವಾಗಿಸುವುದೇ ಗುರಿ

ಟಾಸ್ಕ್‌ಫೋರ್ಸ್ ಅಧಿಕಾರಿಗಳ ಸಭೆಯಲ್ಲಿ ಸಚಿವ ಸೋಮಶೇಖರ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಂಜನಗೂಡು ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹತೋಟಿಗೆ ಬರುತ್ತಿವೆ. ಕೊರೊನಾ ಮುಕ್ತ ಮೈಸೂರು ಹಾಗೂ ನಂಜನಗೂಡನ್ನು ಮಾಡುವುದು ನಮ್ಮ ಗುರಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

ನಂಜನಗೂಡು ಮಿನಿವಿಧಾನಸೌಧದಲ್ಲಿ ಟಾಸ್ಕ್‌ಫೋರ್ಸ್ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿವರು, ಸ್ಥಳೀಯ ಶಾಸಕ ಹರ್ಷವರ್ಧನ್, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಜಿಲ್ಲಾ ವರಿಷ್ಠಾದಿಕಾರಿ ರಿಷ್ಯಂತ್ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಕೊರೊನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಇನ್ನು ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು.

ಕೊರೊನಾ ಸೋಂಕು ವಿರುದ್ಧ ಹೋರಾಡಲು ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಸೇರಿದಂತೆ ಅಧಿಕಾರಿ ವರ್ಗದವರ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ವಿ.ಸ್ನೇಹ ಸೇರಿದಂತೆ ಸ್ಥಳಿಯ ಅಧಿಕಾರಿಗಳು ಇದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...