NEWSನಮ್ಮಜಿಲ್ಲೆ

ಮೈಸೂರು ಜಿಲ್ಲೆಯಲ್ಲಿ 19ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೋವಿಡ್-19 ಪ್ರಕ ರಣದ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆಯಲ್ಲಿ ಬುಧವಾರ  2,619 ಜನರ ನಿಗಾ ವಹಿಸಲಾಗಿದೆ. ಈ ಪೈಕಿ 1,635 ಜನರನ್ನು ಗೃಹ ದಿಗ್ಬಂಧನದಲ್ಲಿ ಇರಿಸಲಾಗಿದೆ. ಈವರೆಗೆ 967 ಮಂದಿ 14 ದಿನಗಳ ಹೋಮ್ ಐಸೋಲೇಶನ್ ಅನ್ನು ಮುಕ್ತಾಯಗೊಳಿಸಿದ್ದಾರೆ.

ಇದುವರೆಗೆ ಒಟ್ಟು 130 ಜನರನ್ನು ಸ್ಯಾಂಪಲ್ ಪರೀಕ್ಷೆಗೆ ಒಳಪಡಿಸಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ 113 ಮಂದಿಗೆ ಕೊರೊನಾ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. 1 ರಿಜೆಕ್ಟ್ ಆಗಿದೆ. ಅದರಲ್ಲಿ 19 ಮಂದಿಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದು, ಅವರನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಮೈಸೂರು ಜಿಲ್ಲಾಡಳಿತ ಸಹಾಯವಾಣಿ ಸಂಖ್ಯೆ 1077 ಹಾಗೂ ಆರೋಗ್ಯ ಸಹಾಯವಾಣಿ ಸಂಖ್ಯೆ 108 ಕ್ಕೆ ಕರೆ ಮಾಡಬಹುದು.

ಸ್ಥೈರ್ಯ ತುಂಬಿದ  ಸಚಿವ ಸೋಮಣ್ಣ

ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ನಂಜನಗೂಡು ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್‌ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಇದರಿಂದ ಇಲ್ಲಿನ ಜನರು ಆತಂಕಗೊಂಡಿದ್ದಾರೆ. ಆದರೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಬುಧವಾರ ಈ ಪ್ರದೇಶಗಳಿಗೆ ತೆರಳಿ ಪರಿಸ್ಥಿತಿ ಅವಲೋಕನೆ ಮಾಡಿ, ಜನರು ಆತಂಕ ಪಡುವ ಅಗತ್ಯವಿಲ್ಲ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಕಡಕೊಳ ಕೈಗಾರಿಕಾ ಪ್ರದೇಶ, ಸಿಂಧುವಳ್ಳಿ ಗೇಟ್, ನಂಜನಗೂಡು ಟೌನ್, ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನ ಮುಂತಾದ ಸ್ಥಳಗಳಿಗೆ ಭೇಟಿ ನೀಡಿ ಜಿಲ್ಲಾಡಳಿತ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮವನ್ನು ಖುದ್ದಾಗಿ ಪರಿಶೀಲಿಸಿದರು. ಪರಿಶೀಲನೆ ಸಂದರ್ಭದಲ್ಲಿ ಸುರಕ್ಷಿತ ಕ್ರಮವಾಗಿ ಮಾಸ್ಕ್ ಧರಿಸಿದ್ದರು.‌ ಜಿಲ್ಲಾಧಿಕಾರಿಗಳು ಹಾಗೂ ವೈದ್ಯರ ಸಲಹೆಯಂತೆ ನಡೆದುಕೊಂಡರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ