ಮೈಸೂರು ಜಿಲ್ಲೆ ಬನ್ನೂರಿನ ವ್ಯಕ್ತಿಯಲ್ಲಿ ಕೊರೊನಾ
ನ್ಯೂಡೆಲ್ಲಿಯ ಜಮಾತ್ ಗೆ ಹೋಗಿ ಬಂದಿದ್ದ ವರ್ತಕ l ಹಲವು ಹಳ್ಳಿಗಳ ಜನರಲ್ಲಿ ಆತಂಕ
ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರು ಸಂತೇಮಾಳದ ದಿನಸಿ ಅಂಗಡಿಯೊಂದರ ವರ್ತಕರೊಬ್ಬರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ವರ್ತಕ ನ್ಯೂಡೆಲ್ಲಿಯ ಜಮಾತ್ ಗೆ ಹೋಗಿ ಬಂದಿದ್ದರು ಎಂದು ಹೇಳಲಾಗುತ್ತಿದ್ದು, ಅಲ್ಲಿಂದ ಬಂದ ಬಳಿಕ ಆರೋಗ್ಯ ಇಲಾಖೆ ಸಿಬ್ಬಂದಿ ಬಂದು ಕರೆದುಕೊಂಡು ಹೋಗುವವರೆಗೂ ಸಹಜವಾಗಿಯೇ ಓಡಾಡುವುದರ ಜತೆಗೆ, ಅಂಗಡಿಯಲ್ಲಿ ವ್ಯಾಪಾರವನ್ನೂ ಮಾಡಿಕೊಂಡಿದ್ದರು.
ಹೀಗಾಗಿ ಆ ವ್ಯಕ್ತಿಯ ಜತೆ ಸಂಪರ್ಕ ಹೊಂದಿದ್ದ ಸುತ್ತಮುತ್ತಲ ಗ್ರಾಮಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಜ್ವರ ಕೆಮ್ಮು, ಗಂಟಲೂ ನೋವು ಕಾಣಿಸಿಕೊಳ್ಳುತ್ತಿದ್ದರೆ ವೈದ್ಯರನ್ನು ಸಂಪರ್ಕಿಸಿ ಸ್ವ ಕಾಳಜಿ ಹೊಂದಬೇಕಿದೆ. ಈ ಹಿಂದೆ ಸಂಪರ್ಕ ಹೊಂದಿದೆ ವ್ಯಕ್ತಿಗಳು ಆರೋಗ್ಯವಾಗಿದ್ದರೆ ವೈದ್ಯರನ್ನು ಭೇಟಿ ಮಾಡುವ ಅಗತ್ಯವಿಲ್ಲ.
ಕೊರೊನಾ ಸೋಂಕು ದೃಢ
ನ್ಯೂಡೆಲ್ಲಿಯಿಂದ ಮಳವಳ್ಳಿ – ಬನ್ನೂರು ಮಾರ್ಗವಾಗಿ ಬಂದಿದ್ದ 10 ಮಂದಿಯಲ್ಲಿ ಈಗಾಗಲೇ ಐವರಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು. ಅವರ ಜತೆಗೆ ಮತ್ತೊಬ್ಬರಿಗೂ ಸೋಂಕು ಇರುವುದು ದೃಢಪಟ್ಟಿರುವುದರಿಂದ ಆತ ಬನ್ನೂರು ಸಂತೇಮಾಳದ ವರ್ತಕನೆಂದು ಜನರಲ್ಲಿ ಆತಂಕ ಮೂಡಿದೆ. ಈ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳು ಸೂಕ್ತ ಮಾಹಿತಿ ನೀಡಬೇಕಿದೆ.
ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರು ಅಗತ್ಯವಸ್ತುಗಳ ಖರೀದಿಗಾಗಿ ಓಡಾಡಿರುವ ಜಾಗ ಇದಾಗಿದ್ದು, ಈಗ ಗ್ರಾಮಗಳಿಗೂ ಸೋಂಕಿನ ಭಯ ಆವರಿಸಿದೆ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ಗ್ರಾಮಸ್ಥರ ಆತಂಕವನ್ನು ಹೋಗಲಾಡಿಸುವ ದೃಷ್ಟಿಯಲ್ಲಿ ಕ್ರಮಕೈಗೊಳ್ಳಬೇಕಿದೆ.
ಇಂದು ಕೊರೊನಾಗೆ ಇಬ್ಬರು ಬಲಿ
ಭಾರತದಲ್ಲಿ ಇಂದು ಇಬ್ಬರು ಮೃತಪಟ್ಟಿದ್ದು, 302 ಮಂದಿಯಲ್ಲಿ ಹೊಸದಾಗಿ ಸೋಂಕು ಹರಡಿರುವುದು ದೃಢಪಟ್ಟದೆ, 54 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಅದರಂತೆ ರಾಜ್ಯದಲ್ಲಿ ಈವರೆಗೆ ಕೊರೊನಾಗೆ ನಾಲ್ವರು ಬಲಿಯಾಗಿದ್ದು 136 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.
ಇನ್ನು ದೇಶದಲ್ಲಿ ಈವರೆಗೆ 3374 ಮಂದಿಯಲ್ಲಿ ಸೋಂಕಿದ್ದು, ಅವರಲ್ಲಿ 77 ಮಂದಿ ಮೃತಪಟ್ಟಿದ್ದಾರೆ, 267ಮಂದಿ ಗುಣಮುಖರಾಗಿದ್ದಾರೆ, ಇನ್ನೂ 3030 ಸೋಂಕಿತರಲ್ಲಿ ಆಸ್ಪತ್ರೆಯಲ್ಲೇ ಇರಿಸಿಕೊಂಡು ಸಿಕಿತ್ಸೆ ನೀಡಲಾಗುತ್ತಿದೆ.
ವಿಶ್ವಾದ್ಯಂತ 1203099 ಮಂದಿಗೆ ಸೋಂಕು
ವಿಶ್ವಾದ್ಯಂತ 1203099 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರಲ್ಲಿ 246893 ಸೋಂಕಿತರು ಗುಣಮುಖರಾಗಿದ್ದಾರೆ, ಇನ್ನು 64774 ಮಂದಿ ಮೃತಪಟ್ಟಿದ್ದಾರೆ.
Related
You Might Also Like
KSRTC: ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ- ಇಂದಿನಿಂದಲೇ ಜಾರಿ- ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಇಂದು ಆದೇಶ ಹೊರಡಿಸಿದ್ದಾರೆ. ಒಂಟಿ...
KSRTC: ಶೇ.15ರಷ್ಟು ಬಸ್ ಟಿಕೆಟ್ ದರ ಹೆಚ್ಚಳ- ಜ.5ರಿಂದ ಜಾರಿಗೆ ಸಚಿವ ಸಂಪುಟ ಸಭೆ ಅಸ್ತು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ನಿಗಮಗಳ 10 ವರ್ಷದ ಮನವಿಗೆ ಸ್ಪಂದಿಸಿದೆ....
KSRTCಗೆ ರಾಷ್ಟ್ರದ ಮಟ್ಟದ ಒಂಬತ್ತು ಪ್ರಶಸ್ತಿಗಳು- 3ರಾಜ್ಯಗಳಲ್ಲಿ ಪ್ರದಾನ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 9 ರಾಷ್ಟ್ರದ ಮಟ್ಟದ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಸಂಸ್ಥೆಗೆ 5 ಆಡ್ ವರ್ಲ್ಡ್ ಶೌಡೌನ್ ಚಿನ್ನದ ಪ್ರಶಸ್ತಿ, 2 ಗೌಕೇರ್...
KSRTC 4 ನಿಗಮಗಳ ನಷ್ಟ ಪರಿಹಾರಕ್ಕೆ ಬಸ್ ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದು, ಈ ಕುರಿತು ಸರಕಾರ ಚರ್ಚೆ...
KSRTC: ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಜ.6ರಂದು ಸಿಎಂ ಚಾಲನೆ
ಬೆಂಗಳೂರು: ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಬಹು ವರ್ಷಗಳ ಬೇಡಿಕೆಗಳಲ್ಲಿ ಒಂದಾದ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಅನುಷ್ಠಾನಕ್ಕೆ ಮುಹೂರ್ತ ನಿಗದಿಯಾಗಿದ್ದು, ಜ.6ರಂದು...
ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ 32 ಪತ್ರಕರ್ತರಿಗೆ ಪ್ರಶಸ್ತಿ
ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು...
ಕ್ಯಾನ್ಸರ್ ಗೆದ್ದ ಶಿವಣ್ಣ: ಡಬಲ್ ಪವರ್‌ನೊಂದಿಗೆ ಬರುತ್ತೇನೆ ಅಂದ ನಟ
ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಶಿವರಾಜ್ಕುಮಾರ್ ಅವರು ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. ಕ್ಯಾನ್ಸರ್ ಗೆದ್ದಿರುವ ಶಿವಣ್ಣ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರುವ ಜತೆಗೆ ದರ್ಶನವನ್ನೂ ಕೊಟ್ಟಿದ್ದಾರೆ....
ಹೊಸ ವರ್ಷದ ಸಂಭ್ರಮದಲ್ಲಿದ್ದ ಪ್ರಿಯಕರನಿಗೆ ಇರಿದ ಪ್ರೇಯಸಿ -ಅಷ್ಟಕ್ಕೂ ಆಗಿದ್ದೇನು?
ಹಾಸನ: ಹೊಸ ವರ್ಷದ ಸಂಭ್ರಮದಲ್ಲಿ ಸ್ನೇಹಿತರೊಟ್ಟಿಗೆ ಇದ್ದ ಪ್ರಿಯಕರನೊಂದಿಗೆ ಜಗಳ ಮಾಡಿದ ಪ್ರೇಯಸಿಯೊಬ್ಬಳು, ಏಕಾಏಕಿ ಚಾಕು ಇರಿದ ಘಟನೆ ನಗರದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಬಳಿ...
ಸಿಡ್ನಿಯಲ್ಲಿ 2025ರ ನೂತನ ವರ್ಷ ಸ್ವಾಗತಿಸಿದ ಮಿಲಿಯನ್‌ಗಿಂತಲೂ ಹೆಚ್ಚು ಜನರು
2025ರ ನೂತನ ವರ್ಷವನ್ನು ಅಧಿಕೃತವಾಗಿ ಹಲವು ದೇಶಗಳು ಈಗಾಗಲೇ ಸ್ವಾಗತಿಸಿವೆ. ಅದರ ಒಂದು ನೋಟ ಸಿಡ್ನಿಯು ಹೊಸ ವರ್ಷಕ್ಕೆ ಹಲೋ ಸ್ವಾಗತ ಎಂದು ಹೇಳಿ ಸಿಡ್ನಿ ಹಾರ್ಬರ್...
KSRTC: 4 ಸಾರಿಗೆ ನಿಗಮಗಳು 2,000 ಕೋಟಿ ರೂ. ಸಾಲ ಪಡೆಯಲು ಒಪ್ಪಿದ ಸರ್ಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ಆರ್ಥಿಕ ಮುಗ್ಗಟ್ಟು ಎದುರಾಗಿರುವ ಹಿನ್ನೆಲೆ ಸಾರಿಗೆ ಸಂಸ್ಥೆಗಳಿಗೆ ಹಣಕಾಸಿನ ಸಂಸ್ಥೆಗಳಿಂದ ಸಾಲ (Loan) ಪಡೆಯುವುದಕ್ಕೆ ಇಂದು ಸರ್ಕಾರ...
ವರ್ಲ್ಡ್ ಆಫ್ ರೆಕಾರ್ಡ್ಸ್: ವಿಶ್ವ ದಾಖಲೆ ಸೇರಿದ 1.9 ವರ್ಷದ ಜನ್ವಿತಾ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಉದ್ದೇಬೋರನಹಳ್ಳಿ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿರುವ ದಿವ್ಯ ಮತ್ತು ಲೋಹಿತ್ ಅವರ 1 ವರ್ಷ 9ತಿಂಗಳ ಮಗು ಜನ್ವಿತಾಳನ್ನು ಅಂತಾ ರಾಷ್ಟ್ರೀಯ ವರ್ಲ್ಡ್ ಆಫ್...