NEWSನಮ್ಮಜಿಲ್ಲೆನಮ್ಮರಾಜ್ಯ

ಮಾ.21ರಿಂದಲೇ ಸಾರಿಗೆ ನೌಕರರ ಮುಷ್ಕರ : ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ವಿಮರ್ಶೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಮಾರ್ಚ್‌ 21 (ಮಂಗಳವಾರ) ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಂಟಿ ಕ್ರಿಯಾಸಮಿತಿ ತಿಳಿಸಿದೆ.

ಕಾರ್ಮಿಕ ಜಂಟಿ ಕ್ರಿಯಾಸಮಿತಿಯ (ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್‌ ವರ್ಕರ್ಸ್‌ ಫೆಡರೇಷನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ (ಸಿ.ಐ.ಟಿ.ಯು), ಕೆಎಸ್‌ಆರ್‌ಟಿಸಿ & ಬಿಎಂಟಿಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್ ಮತ್ತು ಕೆಎಸ್‌ಆರ್‌ಟಸಿ ಪಜಾ ಮತ್ತು ಪಪಂ ನೌಕರರ ಸಂಘ ಹಾಗೂ ಕರಾರಸಾ ಸಂಸ್ಥೆ ಪಜಾ/ ಪಪಂಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ) ಪದಾಧಿಕಾರಿಗಳು ಈ ಸಂಬಂಧ ಮುಖ್ಯಮಂತ್ರಿಗಳಿಗೆ ಮನವಿ ನೀಡಿದ್ದಾರೆ.

ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳ ಬಗ್ಗೆ ತಮಗೆ ಹಲವಾರು ಪತ್ರಗಳನ್ನು ಈಗಾಗಲೆ ಬರೆದಿದ್ದೇವೆ. ತಾವು ಕೂಡ 21.02.2023 ರಂದು ಅಂಬಾರಿ ಉತ್ಸವ’ ಬಸ್ಸುಗಳ ಲೋಕಾರ್ಪಣೆ ಸಮಾರಂಭದಲ್ಲಿ ನಮ್ಮ ಮನವಿಗೆ ಉತ್ತರವಾಗಿ ನಮ್ಮ ಬೇಡಿಕೆಗಳ ಬಗ್ಗೆ ಸಹಾನುಭೂತಿ ಇದೆ ಎಂದು ಮತ್ತು ವಿಧಾನ ಮಂಡಲದ ಅಧಿವೇಶನ ಮುಗಿದ ನಂತರ, ಸಭೆ ನಡೆಸಿ ಇತ್ಯರ್ಥ ಪಡಿಸುವುದಾಗಿ ಭರವಸೆ ನೀಡಿದ್ದೀರಿ.

ನಂತರದ ದಿನಗಳಲ್ಲಿ ಸಾರಿಗೆ ನಿಗಮಗಳ ಆಡಳಿತ ವರ್ಗವು 27,02,2023 ರಂದು ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳ ಜತೆ ಈ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಿದರು. ಈ ಸಭೆಯಲ್ಲಿ ಯಾವುದೇ ನಿರ್ದಿಷ್ಟ ಪ್ರಸ್ತಾವನೆಗಳು ಬಾರದಿದ್ದ ಕಾರಣ 8.03.2023 ರಂದು, ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಇಲಾಖೆಯ ಸಚಿವ ಬಿ. ಶ್ರೀರಾಮುಲು ಅವರ ಅಧ್ಯಕ್ಷತೆಯಲ್ಲಿ ವಿಧಾನ ಸೌಧದಲ್ಲಿ ಸಭೆ ನಡೆಯಿತು. ಈ ಸಭೆಯು ವೇತನ ವಿಮರ್ಶೆಗೆ ಮಾತ್ರ ಸೀಮಿತವಾಗಿತ್ತು.

ಅಲ್ಲದೆ ಈ ಸಭೆಯಲ್ಲಿ ಸಚಿವರು ಸುಮಾರು 2 ಗಂಟೆಗಳ ಸುದೀರ್ಘ ಚರ್ಚೆಯ ನಂತರ ಸಮಸ್ತ ಸಾರಿಗೆ ನೌಕರರಿಗೂ ಮೂಲ ವೇತನದ ಶೇ. 10 ರಷ್ಟು ಹೆಚ್ಚಳವನ್ನು ನೀಡುವುದಾಗಿ ತಿಳಿಸಿದರು. ಇದಕ್ಕೆ ನಮ್ಮ ಸಮ್ಮತಿ ಇಲ್ಲದ ಕಾರಣ ತಮ್ಮೊಡನೆ ಮತ್ತೊಮ್ಮೆ ಸಭೆ ನಡೆಸಿ ಈ ಬೇಡಿಕೆಯನ್ನು ತೀರ್ಮಾನಿಸುವುದಾಗಿ ತಿಳಿಸಿದರು. ಆ ವೇಳೆ ಇನ್ನೆರಡು ದಿನಗಳಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಸಭೆ ಏರ್ಪಡಿಸುವುದಾಗಿ ಮಾಧ್ಯಮಗಳ ಮುಂದೆ ಘೋಷಿಸಿದರು.

ಸಹಜವಾಗಿಯೇ ರಾಜ್ಯಾದ್ಯಂತ ಇರುವ ಎಲ್ಲ ಸಾರಿಗೆ ನೌಕರರು ಇದೊಂದು ಸಕಾರಾತ್ಮಕ ಬೆಳವಣಿಗೆ ಎಂದು ಹಾಗೂ ರಾಜ್ಯ ಸರ್ಕಾರವು ತನ್ನ ಲಕ್ಷಾಂತರ ನೌಕರರ ಬೇಡಿಕೆಗಳನ್ನು ಉದಾರವಾಗಿ ಪರಿಗಣಿಸಿರುವ ಹಿನ್ನೆಲೆಯಲ್ಲಿ ಸಾರಿಗೆ ನೌಕರರಿಗೂ ಸರ್ಕಾರದಿಂದ ನ್ಯಾಯ ದೊರಕಬಹುದೆಂದು ಎದುರು ನೋಡುತ್ತಿದ್ದಾರೆ.

ಈ ಸಭೆ ನಡೆದು ಐದು ದಿನಗಳು ಕಳೆದರೂ ಸರ್ಕಾರದ ವತಿಯಿಂದ ಯಾವುದೇ ಸೂಚನೆಗಳು ಬರದಿರುವ ಕಾರಣ ಇಡಿ ಸಾರಿಗೆ ನೌಕರ ವರ್ಗ ಆತಂಕದಲ್ಲಿದೆ. ಇದಕ್ಕೆ ಕಾರಣಗಳು ಹಲವಾರು. 16ನೇ ವಿಧಾನ ಸಭೆಯ ಚುನಾವಣೆ ಪ್ರಕ್ರಿಯೆ ಆರಂಭದ ಹೊಸ್ತಿಲಿನಲ್ಲಿದೆ. ಇದರ ಬಗ್ಗೆ ಚುನಾವಣಾ ಆಯುಕ್ತರು ಕೂಡ ಈಗಾಗಲೇ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ಚುನಾವಣೆಯ ದಿನಾಂಕ ಪ್ರಕಟಣೆಯಾದರೆ ಸಾರಿಗೆ ನೌಕರರು ತಮ್ಮ ಬೇಡಿಕೆಗಳೆಲ್ಲಾ ಅನಿರ್ದಿಷ್ಟವಾಧಿಗೆ ನೆನೆಗುದಿಗೆ ಬೀಳಬಹುದೆಂಬ ಭೀತಿಯಲ್ಲಿದ್ದಾರೆ.

ಈಗಾಗಲೇ ಹಿಂದಿನ ವೇತನ ಹೆಚ್ಚಳದ ಅವಧಿಯ 39 ತಿ೦ಗಳುಗಳು ಕಳೆದಿದೆ. ಅಷ್ಟೇ ಅಲ್ಲದೆ ಬೆಲೆ ಏರಿಕೆಯಿಂದಲೂ ನೌಕರರು ತತ್ತರಿಸುತ್ತಿದ್ದಾರೆ. ಇವುಗಳ ಬಗ್ಗೆ ನೌಕರರು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಸಾರಿಗೆ ನಿಗಮಗಳ ಆಡಳಿತ ವರ್ಗದ ತಮ್ಮಿಂದ ಮುಂದಿನ ಕ್ರಮವನ್ನು ಎದುರು ನೋಡುತ್ತಿದ್ದಾರೆ. ಅದೇ ಸಂದರ್ಭದಲ್ಲಿ ನಿಗಮಗಳ ನೌಕರರು ಅತೃಪ್ತಿಯಿಂದ ಸರ್ಕಾರದ ವಿಳಂಬ ಧೋರಣೆ ವಿರುದ್ಧ ಅಸಮಾಧಾನವನ್ನು ವ್ಯಕ್ತ ಪಡಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಜಂಟಿ ಕ್ರಿಯಾ ಸಮಿಪಿಯು ಇಂದು (ಮಾ.13) ಸಭೆ ಸೇರಿ, ಸುದೀರ್ಘವಾಗಿ ಪರಿಸ್ಥಿತಿಯ ಅವಲೋಕನ ಮಾಡಿ, ಸರ್ಕಾರದ ಕಣ್ತೆರೆಸಲು ನಾಲ್ಕೂ ನಿಗಮಗಳ ಎಲ್ಲ ವರ್ಗಗಳ ನೌಕರರೂ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮಾ.21ರ ಬೆಳಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ತೊಡಗಬೇಕೆಂದು ಒಮ್ಮತದ ನಿರ್ಣಯಕ್ಕೆ ಬಂದಿದ್ದೇವೆ.

ಆದರಂತೆ ನಾವು ರಾಜ್ಯಾದ್ಯಂತ ಇರುವ ಸಾರಿಗೆ ನೌಕರರನ್ನು 21.03 2023 ಬೆಳಿಗ್ಗೆ 6 ಗಂಟೆಯಿಂದ ಶಾಂತಿಯುತವಾದ ಅನಿರ್ದಿಷ್ಟಾವಧಿ ಮುಷ್ಕರ ಮಾಡಬೇಕೆಂದು ಕರೆಕೊಡುತ್ತೇವೆ ಎಂದು ಸಿಎಂಗೆ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು