ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆಯೊಂದು ಬಂದಿರುವ ಬಗ್ಗೆ ಎಫ್‌ಐಆರ್ ದಾಖಲಾಗಿದೆ.
ತುರ್ತು ಕರೆಗೆ ಇರುವ 112 ಸಂಖ್ಯೆಗೆ ವ್ಯಕ್ತಿಯೊಬ್ಬ ಕರೆ ಹಾಗೂ ಸಂದೇಶವನ್ನು ಕಳುಹಿಸಿದ್ದಾನೆ. ಇದರಲ್ಲಿ “ಸಿಎಂ ಯೋಗಿ ಅವರನ್ನು ಶೀಘ್ರದಲ್ಲಿ ಕೊಲೆ ಮಾಡುತ್ತೇನೆ” ಎಂದು ಬರೆದಿದ್ದಾನೆ. ಈ ಬಗ್ಗೆ ಪೊಲೀಸರು ಎಚ್ಚೆತ್ತುಕೊಂಡು ತನಿಖೆ ಆರಂಭಿಸಿದ್ದಾರೆ.
ಕರೆ ಮಾಡಿದ್ದವನನ್ನು ರಿಹಾನ್ ಎಂದು ಗುರುತಿಸಲಾಗಿದ್ದು,ಈತನ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಪೊಲೀಸರು ಈತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈತನ ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿ ವಾಟ್ಸಾಪ್ ಡಿಪಿ ನೋಡಿದ್ದಾರೆ. ಅದರಲ್ಲಿ ಅಲ್ಲಾ ಎಂದು ಬರೆದಿರುವ ಫೋಟೋವೊಂದು ಇದೆ ಎಂದು ಪೊಲೀಸರು ಹೇಳಿದ್ದಾರೆ.
ತಮ್ಮ ಸರಕಾರದ ಅಡಿಯಲ್ಲಿ ಉತ್ತರಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸಿದೆ ಮತ್ತು ರಾಜ್ಯವು ಈಗ ಮಹಾ ಉತ್ಸವಗಳಿಂದ ಗುರುತಿಸಲ್ಪಟ್ಟಿದೆಯೇ ಹೊರತು ಮಾಫಿಯಾಕ್ಕಾಗಿ ಅಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.
ಏ.26 ರಂದು ಯೋಗಿ ಆದಿತ್ಯನಾಥ್ ಚುನಾವಣಾ ಪ್ರಚಾರದ ಅಂಗವಾಗಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಬಿಗಿ ಭದ್ರತೆ ಕೈಗೊಳ್ಳುವ ಬಗ್ಗೆ ಪೊಲೀಸರು ಸಜ್ಜಾಗಿದ್ದಾರೆ.