Please assign a menu to the primary menu location under menu

ಆರೋಗ್ಯ

ಯೋಜನೆ ಅನುಷ್ಠಾನಕ್ಕೆ ಶ್ರಮಿಸಿ: ಸಿಇಒ ಪರಮೇಶ್

ವಿಜಯಪಥ ಸಮಗ್ರ ಸುದ್ದಿ

ಹಾಸನ: ಎಚ್.ಐ.ವಿ. ಪೀಡಿತರು, ಸೋಂಕಿತರು ಮತ್ತು ತೃತೀಯ ಲಿಂಗಿಗಳಿಗೆ ಇರುವ ಯೋಜನೆಗಳನ್ನು ಸಂಬಂಧಿಸಿದ ಇಲಾಖೆಗಳು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಶ್ರಮಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಎ. ಪರಮೇಶ್   ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳಿಗೆ ಸಾಮಾಜಿಕ ಸವಲತ್ತುಗಳ ಕುರಿತು ಸಮನ್ವಯ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿರುವ ಎಚ್.ಐ.ವಿ. ಪಾಸಿಟಿವಿ ಇರುವ ಸಮುದಾಯ, ಮಹಿಳಾ  ಲೈಂಗಿಕ ಕಾರ್ಯಕರ್ತೆಯರ ಸಮಿತಿ, ತೃತೀಯ ಲಿಂಗಿಗಳ ಸಮುದಾಯದವರು ಸಭೆಗಳನ್ನು ನಡೆಸಲು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಕಚೇರಿಗಾಗಿ ಕೊಠಡಿ ಸೌಲಭ್ಯ ಕಲ್ಪಿಸುವಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರು ಕ್ರಮವಹಿಸಬೇಕೆಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಎಚ್.ಐ.ವಿ. ಬಾದಿತರು ಮತ್ತು ಸೋಂಕಿತರಿಗೆ, ತೃತೀಯ ಲಿಂಗಿಗಳಿಗೆ ಇರುವ ಯೋಜನೆಗಳ ಬಗ್ಗೆ ಆಯಾ ಸಮುದಾಯದ ಅರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ ಸೌಲಭ್ಯ ಪಡೆಯುವಂತೆ ಅರಿವು ಮೂಡಿಸಿರೆಂದು ಹೇಳಿದರಲ್ಲದೆ, ಫಲಾನುಭವಿಗಳಿರುವ ಪ್ರದೇಶಗಳಲ್ಲೇ ಸ್ಥಳವಿದ್ದರೆ ಅಲ್ಲಿಯೇ ವಸತಿ ಯೋಜನೆಯಡಿ ಸೌಲಭ್ಯ ಕಲ್ಪಿಸಿರೆಂದು ಸಂಬಂಧಿತ ಅಧಿಕಾರಿಗಳಿಗೆ ಜಿಪಂ  ಸಿಇಒ  ಬಿ.ಎ. ಪರಮೇಶ್ ಹೇಳಿದರು.

ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ನಾಗೇಶ್ ಆರಾಧ್ಯ  ಮಾತನಾಡಿ, ಜಿಲ್ಲೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯ್ತಿಗಳ ಸಹಕಾರದಿಂದ ಇವರೆಗೂ 100 ಹಳ್ಳಿಗಳಲ್ಲಿ 18 ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗಿದೆ. 2019ರಲ್ಲಿ ಶಿಬಿರಗಳಲ್ಲಿ 1494 ಜನರಲ್ಲಿ ಎಚ್.ಐ.ವಿ., ತಪಾಸಣೆಯನ್ನು ಮಾಡಲಾಗಿದ್ದು, ಕೇವಲ 4 ಎಚ್.ಐ.ವಿ. ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಮಾಹಿತಿ ನೀಡಿದರು.

ಸಾಮಾನ್ಯವಾಗಿ 100 ಜನರಲ್ಲಿ ಎಚ್.ಐ.ವಿ. ತಪಾಸಣೆ ಮಾಡಿದರೆ ಪಾಸಿಟಿವ್ ಇರುವ ಪ್ರಕರಣಗಳು 0.5% ಮತ್ತು ಗರ್ಭಿಣಿ ಮಹಿಳೆಯರಲ್ಲಿ 0.03% ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಜಿಲ್ಲೆಯು ಎಚ್.ಐ.ವಿ. ಪಾಸಿಟಿವ್ ಪ್ರಕರಣಗಳು ಬಹುತೇಕ ಕಡಿಮೆಯಾಗಿವೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ಕುಮಾರ್, ಆರ್.ಸಿ.ಎಚ್. ಅಧಿಕಾರಿ ಡಾ. ಕಾಂತರಾಜ್, ಎಚ್.ಆರ್.ಟಿ. ಆರೋಗ್ಯಾಧಿಕಾರಿ ಡಾ. ಪೂರ್ಣಿಮಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರಾದ ಸವಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪಾಪಬೋವಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಯ ಸದಸ್ಯರು  ಇದ್ದರು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ