NEWSನಮ್ಮಜಿಲ್ಲೆಮೈಸೂರು

ರಾಜಕೀಯ ಹಸ್ತಕ್ಷೇಪಕ್ಕೆ ಬ್ರೇಕ್ ಹಾಕಲು ಸಹಕಾರಿ ಕಾಯ್ದೆಗೆ ಶೀಘ್ರದಲ್ಲೇ ತಿದ್ದುಪಡಿ: ಸಚಿವ ಕೆ.ವೆಂಕಟೇಶ್

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ರೈತ, ದುರ್ಬಲರ ಆರ್ಥಿಕ ಸ್ವಾವಲಂಬನೆಗಾಗಿ ಸ್ಥಾಪನೆಯಾದ ಸಹಕಾರ ಸಂಘಗಳಲ್ಲಿ ರಾಜಕೀಯ ಹಸ್ತಕ್ಷೇಪ ಆರಂಭವಾಗಿರುವುದು ವಿಷಾದನೀಯ ಎಂದು ಪಶುಸಂಗೋಪನಾ ಮತ್ತು ರೇಷ್ಮೆ ಖಾತೆ ಸಚಿವ ಕೆ.ವಂಕಟೇಶ್ ಬೇಸರ ವ್ಯಕ್ತಪಡಿಸಿದರು.

ತಾಲೂಕಿನ ಚಿಟ್ಟೇನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಆಯೋಜಿಸಿದ್ದ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ರೈತರ, ದುರ್ಬಲರ ಬಗ್ಗೆ ಬದ್ದತೆ ಮತ್ತು ಕಾಳಜಿ ಇಟ್ಟುಕೊಂಡು ಆರಂಭವಾದ ಸಹಕಾರ ಸಂಘ ಆರಂಭವಾಗಿ ಅಂದಿನಿಂದಲೂ ರೈತರ ಜೀವನಾಡಿಯಾಗಿ ಕೆಲಸ ಮಾಡುತ್ತಿದೆ ಎಂದರು.

ಇನ್ನು ಇದರ ಏಳಿಗೆಗೆ ಅನೇಕ ಮಹನೀಯರು ಶ್ರಮಿಸಿ ಈ ಸಂಸ್ಥೆಯನ್ನು ಉತ್ತುಂಗಕ್ಕೆ ಕೊಂಡೊಯ್ದಿದ್ದಾರೆ. ಆದರೆ ಇತ್ತೀಚೆಗೆ ಈ ಸಂಘದಲ್ಲಿ ರಾಜಕೀಯ ಹಸ್ತಕ್ಷೇಪ ಆರಂಭವಾಗಿ ಈ ಸಂಸ್ಥೆಗಳನ್ನು ತಮ್ಮ ಸ್ವಂತ ಮನೆಯ ಆಸ್ತಿ ಎನ್ನುವಂತೆ ಮಾಡಿಕೊಂಡು ಕೆಲವರು ಆಳವಾಗಿ ಬೇರೂರಲು ಯತ್ನಿಸುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವ ಅಧಿಕಾರಿಗಳು ರೈತರ ಹಿತ ಕಾಯುವ ಬದಲಾಗಿ ಸಂಘವನ್ನು ದುರ್ಬಳಕೆ ಮಾಡಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಹಾಗಾಗಿ ಇವರು ಅಧಿಕಾರಿಗಳೋ, ರಾಜಕಾರಣಿಗಳೋ ಎಂದು ತಿಳಿಯದಾಗಿದೆ. ಹಾಗಾಗಿ ಈ ಕಾಯ್ದೆಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಸರ್ಕಾರ ಆಲೋಚಿಸಿದೆ ಎಂದರು.

ಇತಿಮಿತಿಯಲ್ಲಿ ಸಾಲ ಮಾಡಬೇಕು: ರೈತ ತಾನು ಮಾಡುವ ಸಾಲಕ್ಕೆ ಲೆಕ್ಕಪತ್ರ ಇಟ್ಟುಕೊಳ್ಳಬೇಕು ಖಾಸಗಿ ಸಂಸ್ಥೆಗಳು ಬಡ್ಡಿಯ ಆಸೆಗಾಗಿ ಹೇರಳವಾಗಿ ಸಾಲ ನೀಡುತ್ತಾರೆ. ಇವರ ಆಮಿಷಕ್ಕೆ ರೈತರು ಬಲಿಯಾಗಬಾರದು, ಸರ್ಕಾರ ಸಹಕಾರ ಸಂಘದ ಮೂಲಕ ನೀಡುವ ಸಾಲ ಪಡೆದು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು.

ಸಹಕಾರ ಸಂಘವು ರೈತರಿಗೆ 5 ಲಕ್ಷದ ವರೆಗೆ ಶೂನ್ಯ ಬಡ್ಡಿ, 15 ಲಕ್ಷದ ವರೆಗೆ ಶೇ.3% ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ ಹೀಗಿದ್ದರೂ ಖಾಸಗಿ ಬ್ಯಾಂಕುಗಗಳಲ್ಲಿ ಅಧಿಕ ಬಡ್ಡಿ ದರದಲ್ಲಿ ಸಾಲ ಪಡೆದು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಜಿಲ್ಲಾ ಸಹಕಾರ ಯೂನಿಯನ್ ಒಕ್ಕೂಟದ ಅಧ್ಯಕ್ಷ ಹೆಚ್.ವಿ.ರಾಜೀವ್ ಮಾತನಾಡಿ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿ ಕೆಲಸ ಮಾಡುತ್ತಾ ದೇಶದ ಆರ್ಥಿಕ ಪ್ರಗತಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿವೆ. ಆದ್ದರಿಂದ ಸಹಕಾರ ಸಂಘ ನೀಡುವ ಸಾಲ ಸೌಲಭ್ಯವನ್ನು ಪಡೆದು ರೈತರು ಸಕಾಲಕ್ಕೆ ಮರು ಪಾವತಿ ಮಾಡುವ ಮೂಲಕ ಸಹಕಾರ ಸಂಘವನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದರು.

ವಿಎಸಿಸಿಎನ್ ಮಾಜಿ ಅಧ್ಯಕ್ಷ ಬಿ.ಎಸ್.ರಾಮಚಂದ್ರ ಮಾತನಾಡಿ ಧರ್ಮಸ್ಥಳ ಸಹಕಾರ ಸಂಘ ಸೇರಿದಂತೆ ಅನೇಕ ಖಾಸಗಿ ಸಂಘ ಸಂಸ್ಥೆಗಳು 35 ರಿಂದ 40 % ಬಡ್ಡಿ ವಿಧಿಸಿ ಮಹಿಳೆಯರನ್ನು ಶೋಷಣೆ ಮಾಡುತ್ತಿವೆ. ಸರಕಾರ ಸಹಕಾರ ಸಂಘದಲ್ಲಿ ಶೂನ್ಯ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವಂತೆ ಆದೇಶಿಸಿದೆ ಆದರೂ ಕೆಲವು ಸಹಕಾರ ಸಂಘದ ಸಿಇಒಗಳು ಮಹಿಳೆಯರಿಗೆ ಹಾಗೂ ದುರ್ಬಲರಿಗೆ ಸಾಲ ಸೌಲಭ್ಯ ನೀಡುತ್ತಿಲ್ಲ ಇದರ ಬಗ್ಗೆ ಕ್ರಮ ವಹಿಸುವಂತೆ ಒತ್ತಾಯಿಸಿದರು.

ಚಿಕ್ಕಮಗಳೂರು ಸಹಕಾರ ಯೂನಿಯನ್ ಒಕ್ಕೂಟದ ಅಧ್ಯಕ್ಷ ಲಕ್ಕಪ್ಪ ಗೌಡ, ಮೈಮುಲ್ ವ್ಯವಸ್ಥಾಪಕ ನಿರ್ದೇಶಕ ವಿಜಯಕುಮಾರ್, ಎಂಸಿಡಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿನೋದ್ ಕುಮಾರ್, ಸಹಕಾರ ಸಂಘಗಳ ಉಪ ನಿಬಧಕ ಮಂಜುನಾಥ್, ಸಹಕಾರ ಅಭಿವೃದ್ಧಿ ಅಧಿಕಾರಿ ಜೆ.ಹಿತೇಂದ್ರ, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ವಿಶ್ವ ವಿದ್ಯಾಲಯದ ಸಹ ಪ್ರಾಧ್ಯಾಪಕಿ ಡಾ.ಆರ್.ಎಚ್.ಪವಿತ್ರ, ಕೆಐಸಿಎಂ ಪ್ರಾಂಶುಪಾಲ ಚಂದ್ರಶೇಖರ್, ಚಿಟ್ಟೇನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಟಿ.ಸುರೇಶ್, ಉಪಾಧ್ಯಕ್ಷ ರಾಮಚಂದ್ರ, ಮುಖಂಡರಾದ ಹಿಟ್ನಳ್ಳಿ ಪರಮೇಶ್, ಕೆ.ಕೆ.ಹರೀಶ್, ನಳಿನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು