NEWSಕೃಷಿನಮ್ಮಜಿಲ್ಲೆ

ರಾಜಕಾರಣ ವ್ಯಾಪಾರವಾಗಿ ಸೇವೆ ಮಾಯ- ಸಂಕಷ್ಟದಲ್ಲಿ ಜನತೆ: ಜನಪ್ರತಿನಿಧಿಗಳ ವಿರುದ್ಧ ರೈತ ಮುಖಂಡರ ಆಕ್ರೋಶ

ನೀರಿಲ್ಲದೆ ಒಣಗಿರುವ ಕಬ್ಬಿಗೆ ತುಂತುರು ನೀರು ಬಿಟ್ಟು ಶೋಕಗೀತೆಯೊಂದಿಗೆ ಕಾರ್ಯಕ್ರಮ ಉದ್ಘಾಟನೆ 

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬರಗಾಲದಿಂದ ತತ್ತರಿಸಿರುವ ರೈತರ ಸಂಕಷ್ಟ ಆಲಿಸಲು ಯಾರು ಇಲ್ಲವಾಗಿದ್ದಾರೆ ಆದರೆ, ಅಧಿಕಾರ ಹಿಡಿಯಲು ಪೈಪೋಟಿ ನಡೆಸುತ್ತಿದ್ದಾರೆ. ರಾಜಕೀಯ ಕ್ಷೇತ್ರ ವ್ಯಾಪಾರಕ್ಕಿಂತಲೂ ಹೆಚ್ಚು ಲಾಭಗಳಿಸುವ ಕ್ಷೇತ್ರವಾಗಿದೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ.ರಾಜ್ಯ ಕಬ್ಬು ಬೆಳೆಗಾರ ಸಂಘ ನಗರದಲ್ಲಿ ಆಯೋಜಿಸಿದ ಬರಗಾಲದಲ್ಲಿ ಚುನಾವಣೆ- ರೈತರ ದಿಕ್ಸೂಚಿ ಚಿಂತನ ಮಂಥನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯಾಧ್ಯಕ್ಷ ರೈತರತ್ನ ಕುರುಬೂರು ಶಾಂತಕುಮಾರ್, ಪ್ರಾಕೃತಿಕ ಬದಲಾವಣೆಯಿಂದ ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ ಬರಗಾಲದ ನೀರಿನ ಸಮಸ್ಯೆಯಿಂದ ರೈತರ ಬೆಳೆಗಳು ಒಣಗುತ್ತಿವೆ ಕೊಳವೆ ಬಾವಿಗಳು ಹಿಂಗುತ್ತಿವೆ.

ರೈತರು ಈಗಲಾದರೂ ಹಳ್ಳಿಗಳಲ್ಲಿ ಗುಡಿಗೋಪುರ ಕಟ್ಟುವ ಚಿಂತನೆ ಕಡಿಮೆ ಮಾಡಿ ಕೆರೆ ಕಟ್ಟೆ ಹೂಳೆತುವ ಮೂಲಕ ಪುನರ್ಜೀವನ ಹಾಗೂ ಹೊಸದಾಗಿ ನಿರ್ಮಿಸುವ ಕೆಲಸದಲ್ಲಿ ರೈತರು ಶ್ರದ್ದೆ ವಹಿಸಿದ್ದರೆ ಮುಂದಿನ ವರ್ಷಗಳಲ್ಲಿ ಕೊಳವೆ ಬಾವಿಗಳು ಕೃಷಿ ಕ್ಷೇತ್ರ ಸಮೃದ್ಧಿಯಾಗಲು ಸಹಕಾರಿಯಾಗುತ್ತದೆ. ಇಂದಿನ ರಾಜಕಾರಣಿಗಳಿಗೆ ಇದೆಲ್ಲ ಕಾಣುವುದಿಲ ಅವರಿಗೆ ಬೇಕಾಗಿಲ್ಲ ಎಂದು ಕಿಡಿಕಾರಿದರು.

ಇನ್ನು ಕೇಂದ್ರ, ರಾಜ್ಯ ಸರ್ಕಾರಗಳು ರೈತರ ಪಾಲಿಗೆ ಮರಳುಗಾಡಿನ ಓಯಸ್ಸಿಸ್ ಇದ್ದಂತೆ ಎಂಬುದನ್ನು ಅರಿತುಕೊಳ್ಳಬೇಕು. ಬರಗಾಲದ ಬವಣೆಯಿಂದ ಕುಡಿಯುವ ನೀರು ದನಕರುಗಳಿಗೆ ಮೇವು ಸಿಗುತ್ತಿಲ್ಲ. ಕೊಳವೆ ಬಾವಿಗಳಲ್ಲಿ ನೀರು ಹಿಂಗಿ ಹೋಗಿ ಕಬ್ಬಿನ ಬೆಳೆ, ತೆಂಗಿನ ಮರ ಒಣಗುತ್ತಿದೆ ಇಂತಹ ರೈತರನ್ನ ಸಂಕಷ್ಟದಿಂದ ಪಾರು ಮಾಡಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ಅಧಿಕಾರಿಗಳು ಚುನಾವಣಾ ಗುಂಗಿನಲ್ಲಿ ತಲ್ಲಿನರಾಗಿದ್ದಾರೆ. ರೈತರ ಸಂಕಷ್ಟ ಅರಿತುಕೊಳ್ಳಲಿ ಎಂದು ಬರಗಾಲದ ಚುನಾವಣೆ ರೈತರ ದಿಕ್ಸೂಚಿ ಕಾರ್ಯಕ್ರಮ ಹಮಿಕೊಂಡಿದ್ದೇವೆ ಎಂದರು.

ಚುನಾವಣಾ ಪ್ರಣಾಳಿಕೆಯಲ್ಲಿ ರಾಜಕೀಯ ಪಕ್ಷಗಳು ಬರನಿವಾರಣೆ. ಕೃಷಿ ಕ್ಷೇತ್ರದ ರಕ್ಷಣೆ. ಕೆರೆಕಟ್ಟೆ ನದಿ ರಕ್ಷಣೆ. ಅರಣ್ಯ ಬೆಳೆಸುವ ಸಂರಕ್ಷಿಸುವ. ಯೋಜನೆಗಳ ಪ್ರಣಾಳಿಕೆಗಳಿಗೆ ಒತ್ತು ನೀಡಲಿ. ಚುನಾವಣಾ ಆಯೋಗ ನೋಟ ಮತದಾನಕ್ಕೆ ಗೌರವ ತರುವಂತಹ ಮಾನದಂಡ ನಿರ್ಮಿಸಲಿ ಎಂದು ಮನವಿ ಮಾಡಿದರು.

ಅತ್ತಹಳ್ಳಿ ದೇವರಾಜ್ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಮೇಕೆದಾಡು ನಿರ್ಮಾಣ ಮಾಡುವ ಪಾದಯಾತ್ರೆ ಮಾಡಿ ಕಾಂಗ್ರೆಸ್‌ನವರು ಈಗ ಹೊಸ ನಾಟಕ ಶುರುಮಾಡಿದ್ದಾರೆ. ಇದ್ದ ಕಾವೇತಿ ನೀರನ್ನು ತಮಿಳುನಾಡಿಗೆ ಹರಿಸಿ ಕಾವೇರಿ ಅಚ್ಚುಕಟ್ಟು ರೈತರನ್ನ ಬಲಿಕೊಟ್ಟಿದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರಗಾಲದಿಂದ ನರಳುತ್ತಿರುವ ರೈತರಿಗೆ ಭಿಕ್ಷಾ ರೂಪದ ಪರಿಹಾರ ನೀಡಿದ್ದಾರೆ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ. ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದು ವರ್ಷವಾದರೂ ಜಾರಿಯಾಗಲಿಲ್ಲ. ಈಗಾದರೆ ರೈತರ ಗತಿ ಏನು ಎನ್ನುವ ಪ್ರಶ್ನೆ ಕಾಡುತ್ತಿದೆ ಎಂದು ಆತಂಕ ವ್ಯಕ್ತಪಟಿಸಿದರು.

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ನಾರಾಯಣ ರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ದೆಹಲಿ ರೈತ ಚಳವಳಿಯ ಮೇಲೆ ಗೋಲಿಬಾರ್ ಮಾಡುತ್ತದೆ. ರೈತರನ್ನು ಕೊಲ್ಲುತ್ತದೆ. ಎಂ.ಎಸ್. ಸ್ವಾಮಿನಾಥನ್ ವರದಿ ಜಾರಿಗೆ ತರುವ ಭರವಸೆ ನೀಡಿ ಹುಸಿಗೊಳಿಸಿದೆ. ರೈತರ ಆದಾಯ ದ್ವಿಗುಣ ಮಾಡುವ ಭರವಸೆ ನೀಡಿ ಹುಸಿಗೂಳಿಸಿದೆ ಎಂದು ಕಿಡಿಕಾರಿದರು.

ಇನ್ನು ಬಂಡವಾಳ ಶಾಹಿಗಳ 14 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದು, ಸಂಕಷ್ಟದಲ್ಲಿರುವ ದೇಶದ ರೈತರ ಸಾಲ ಮನ್ನ ಮಾಡದೆ ನಿರ್ಲಕ್ಷತನ ತೋರುತ್ತಿದೆ. ಪ್ರವಾಹ ಹಾನಿ, ಅತಿವೃಷ್ಟಿ, ಮಳೆಹಾನಿ ಬರಗಾಲ ನಷ್ಟ ಪರಿಹಾರದ ಬಗ್ಗೆ ಯಾವುದೇ ಗಂಭೀರ ಗಮನ ಹರಿಸುತ್ತಿಲ್ಲ. ಈ ರೀತಿಯಲ್ಲಿ ಸರ್ಕಾರಗಳು ರೈತರನ್ನು ಶೋಷಣೆ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅರಿಸಿನ ಬೆಳೆಗಾರರ ಸಂಘದ ನಾಗಾರ್ಜುನ ಮಾತನಾಡಿ, ರೈತರು ಬೆಳೆಯುವ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚವನ್ನೇ ಕಡಿಮೆ ತೋರಿಸಿ ರೈತರನ್ನು ಸರ್ಕಾರ ವಂಚಿಸುತ್ತಿವೆ. ರೈತರು ಜಾಗ್ರತರಾಗದಿದ್ದರೆ ನಮ್ಮ ಸಮಾಧಿಯನ್ನು ನಾವೇ ಕಟ್ಟಿಕೊಳ್ಳಬೇಕಾಗುತ್ತದೆ ಎಂದರು.

ಪಿ.ಸೋಮಶೇಖರ್. ಎನ್.ಎಚ್. ದೇವಕುಮಾರ್, ಧರ್ಮರಾಜ್, ಕಮಲಮ್ಮ, ರೇವಣ್ಣ, ಶಿವಮೂರ್ತಿ, ಮಾದೇವಸ್ವಾಮಿ ಮಾತನಾಡಿದರು. ಕುರುಬೂರು ಸಿದ್ದೇಶ್, ವೆಂಕಟೇಶ್, ಪರಶಿವಮೂರ್ತಿ, ರಾಜೇಶ, ರಾಜು, ಕೆಂಡಗಣ್ಣಸ್ವಾಮಿ, ಕಿರಗಸೂರು ಶಂಕರ್, ಬರಡನಪುರ ನಾಗರಾಜ್ ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು