NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ರಾಜ್ಯಕ್ಕೆ ವಕ್ಕರಿಸಿದ್ದಾರೆ ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಸಿಎಂ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದರೆ.

ಕೃಷಿ ಇಲಾಖೆ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಸಹಿ ಮಾಡಿ ಷಡ್ಯಂತ್ರ ರೂಪಿಸಿ ರಾಜ್ಯಪಾಲರಿಗೆ ಸುಳ್ಳು ದೂರು ನೀಡಿದವರು ನಿಮ್ಮ ಬ್ರದರೋ ಎಂದು ಸಿದ್ದರಾಮಯ್ಯ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರನ್ನು ಕುಮಾರಸ್ವಾಮಿ ಹೆಸರೇಳದೆ  ವ್ಯಂಗ್ಯವಾಗಿ ಕೇಳಿದ್ದರು.

ಹೀಗಾಗಿ ಅದಕ್ಕೆ ತಿರುಗೇಟು ಕೊಟ್ಟಿರುವ ಎಚ್‌ಡಿಕೆ, ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ ಎಂದು ತಿವಿದಿದ್ದಾರೆ.

ಇನ್ನು ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ ‘ಎತ್ತುವಳಿ ಗಿರಾಕಿ’ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕದಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್‌ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ ಎಂದು ಪ್ರಶ್ನಿಸಿದ್ದಾರೆ.

ಇನ್ನು ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್’ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ ಎಂದು ಎಚ್‌ಡಿಕೆ ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು