NEWSನಮ್ಮರಾಜ್ಯರಾಜಕೀಯ

ರಾಜ್ಯದಲ್ಲಿ ಇರೋದು ಜನತಾದಳದ ಮುಖ್ಯಮಂತ್ರಿ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಸವರಾಜ ಬೊಮ್ಮಾಯಿ ಜನತಾದಳದ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ . ಕುಮಾರಸ್ವಾಮಿ ಹೇಳಿದ್ದಾರೆ.

ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸಿಎಂ ಬೊಮ್ಮಾಯಿ ಅವರಿಗೆ ಅನುಭವವಿದೆ. ಬಿಜೆಪಿಯಿಂದ ಆಯ್ಕೆ ಆಗಿದ್ದರೂ ಜನತಾದಳದವರೇ ಮುಖ್ಯಮಂತ್ರಿಗಳು ಆಗಿದ್ದಾರೆ ಎಂಬ ಭಾವನೆ ನಮಗೆ ಇದೆ. ಈಗಲೂ ಬೊಮ್ಮಾಯಿ ನಮಗೆ ಸ್ನೇಹಿತರು, ಒಳ್ಳೆ ಹಿತೈಷಿಗಳು. ಅವರು ಉತ್ತಮವಾಗಿ ಕೆಲಸ ಮಾಡಲಿ ಎಂದು ಹೇಳಿ ಶುಭ ಹಾರೈಸುತ್ತೇನೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಯಡಿಯೂರಪ್ಪನವರಿಗೆ ಸರಿಯಾದ ಸಹಕಾರ ನೀಡಲಿಲ್ಲ. ಅವರಿಗೆ ಮಾಡಿದ ರೀತಿ ಬೊಮ್ಮಾಯಿ ಅವರಿಗೆ ಕೇಂದ್ರ ಅನ್ಯಾಯ ಮಾಡದೇ ಇರಲಿ. ಯಡಿಯೂರಪ್ಪರನ್ನು ಸಿಎಂ ಅಂತ ಭಾವನೆ ಮೂಡುವುದಕ್ಕೂ ಕೇಂದ್ರದ ನಾಯಕರು ಅವಕಾಶ ಕೊಡಲಿಲ್ಲ. ಬೊಮ್ಮಾಯಿ ಅವರನ್ನು ಈಗ ಇಕ್ಕಟ್ಟಿಗೆ ಸಿಲುಕಿಸುವ ಕೆಲಸಕ್ಕೆ ಕೇಂದ್ರ ಕೈ ಹಾಕಬಾರದು ಎಂದು ಸಲಹೆ ನೀಡಿದರು.

ಯಾರ ಹಿಡಿತಕ್ಕೂ ನೂತನ ಸಿಎಂ ಬೊಮ್ಮಾಯಿ ಅವರು ಒಳಗಾಗೋದು ಬೇಡ. ಹೀಗಾಗಿ ಕೇಂದ್ರ ಸರಿಯಾದ ಸಹಕಾರ, ಅನುದಾನವನ್ನು ಬೊಮ್ಮಾಯಿ ಅವರಿಗೆ ನೀಡಬೇಕು. ರಾಜ್ಯದ ಬೇಡಿಕೆ, ಇಲಾಖೆ ಹಣ, ಜಿಎಸ್‍ಟಿ ಹಣ ಸರಿಯಾಗಿ ರಾಜ್ಯಕ್ಕೆ ನೀಡಿ ಕೇಂದ್ರ ಅವರಿಗೆ ಸಹಕಾರ ನೀಡಲಿ ಎಂದು ಹೇಳಿದರು.

ಬಸವರಾಜ್ ಬೊಮ್ಮಾಯಿ ಅವರಿಗೆ ನೀರಾವರಿ ಸಚಿವರಾಗಿ ತುಂಬಾ ಅನುಭವ ಇದೆ. ಈ ಮೂರು ಯೋಜನೆ ಪರವಾಗಿ ರಾಜ್ಯದ ಪರವಾಗಿ ಕೇಂದ್ರ ನಿರ್ಧಾರ ಮಾಡಬೇಕು. ಕೇಂದ್ರ ಸರ್ಕಾರ ರಾಜ್ಯದ ಜನರ ಜತೆ ಚೆಲ್ಲಾಟ ಆಡುತ್ತಿದೆ. ಹೀಗಾಗಿ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ದೂರು ನೀಡುತ್ತಿದ್ದೇವೆ ಎಂದರು.

ಇಂದು ಮೊದಲ ಹಂತದಲ್ಲಿ ರಾಜ್ಯಪಾಲರಿಗೆ ಮನವಿ ಕೊಡುತ್ತೇವೆ. ಪ್ರಧಾನಿ ಅವರಿಗೂ ಪತ್ರವನ್ನು ಕಳಿಸುತ್ತೇವೆ. ಕೇಂದ್ರ ಸರ್ಕಾರದ ಸ್ಪಂದನೆ ಮೇಲೆ ಮುಂದಿನ ತೀರ್ಮಾನ ಮಾಡುತ್ತೇವೆ. ನಿರಂತರವಾಗಿ ನಮ್ಮ ಹೋರಾಟ ರಾಜ್ಯದ ನೀರಾವರಿ ಪರ ಇರುತ್ತೆ. ಯಾವುದೇ ಕಾರಣಕ್ಕೂ ಇದನ್ನು ನಿಲ್ಲಿಸುವುದಿಲ್ಲ ಎಂದರು.

ಇನ್ನು ನಾಡಿನ ನೀರಾವರಿ ವಿಚಾರದಲ್ಲಿ, ಉತ್ತರ ಕರ್ನಾಟಕ ಭಾಗಕ್ಕೆ ಮತ್ತು ಯುಕೆಪಿ ಯೋಜನೆಗೆ ದೇವೇಗೌಡ ಅವರ ಕೊಡುಗೆ ಅಪಾರ. ಯಾವುದೇ ಪಕ್ಷಗಳಿಂದ ಅದನ್ನು ಮಾಡಲು ಆಗಿಲ್ಲ. ರಾಷ್ಟ್ರೀಯ ಪಕ್ಷಗಳಿಂದ ಜನರಿಗೆ ಅನ್ಯಾಯ ಆಗುತ್ತಿದೆ. ಜನರಿಗೆ ಇದನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಮಾಜಿ ಸಚಿವ ಶಿವರಾಂ ಹೆಬ್ಬಾರ್ ಕಾರು ಅಪಘಾತ

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು