NEWSನಮ್ಮರಾಜ್ಯರಾಜಕೀಯ

ರಾಜ್ಯ ಚುನಾವಣಾ ಆಯೋಗದ ಕೆಲಸಗಳಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಸ್ತಕ್ಷೇಪ: ಬ್ರಿಜೇಶ್ ಕಾಳಪ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಕೆಲಸ ಕಾರ್ಯಗಳಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಸ್ತಕ್ಷೇಪ ಮಾಡುತ್ತಿರುವ ಬಗ್ಗೆ ಸುಪ್ರಿಂಕೋರ್ಟ್ ಹಿರಿಯ ವಕೀಲ ವಕೀಲರು ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಮತ್ತು ಸಂವಹನ ಉಸ್ತುವಾರಿಗಳಾಗಿರುವ ಬ್ರಿಜೇಶ್ ಕಾಳಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬ್ರಿಜೇಶ್ ಕಾಳಪ್ಪ, ಶೋಭಾ ಕರಂದ್ಲಾಜೆ ಅವರು ತಮ್ಮ ಕಾರ್ಯಕರ್ತರಿಗೆ ಕಾಗದ ಬರೆದಿದ್ದು, ಯಾವ – ಯಾವ ಮತಗಟ್ಟೆಗಳನ್ನು ಸೂಕ್ಷ್ಣ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳು ಎಂದು ಘೋಷಿಸಬೇಕು. ಯಾವ ಭಾಗಗಳಲ್ಲಿ ಕೇಂದ್ರ ಸೇನಾಪಡೆಗಳು ಅಥವಾ ಅರೇ ಸೇನಾಪಡೆ ತುಕಡಿಗಳನ್ನು ನಿಯೋಜಿಸಬೇಕು ಎಂಬ ವಿವರವನ್ನು ಕೇಳಿರುವ ಬಗ್ಗೆ ಕಾಗದದಲ್ಲಿ ಉಲ್ಲೇಖಿಸಿದ್ದಾರೆ.

ಕೇಂದ್ರ ಸಚಿವರಾಗಿರುವ ಅವರು ಡಿಸಿ ಮತ್ತು ಎಸ್‌ಪಿ ಗಳನ್ನ ಸಂಪರ್ಕ ಮಾಡಿ ಈ ವಿವರವನ್ನ ಪಡೆಯಬೇಕು. ಅದನ್ನ ಬಿಟ್ಟು ತಮ್ಮ ಕಾರ್ಯಕರ್ತರಿಂದ ಈ ರೀತಿ ಮಾಹಿತಿ ಕಲೆ ಹಾಕುವುದು ಎಷ್ಟರ ಮಟ್ಟಿಗೆ ಸರಿ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ಸರ್ಕಾರ ಬಿಟ್ಟು ಬೇರೆ ಯಾವುದಾದರೂ ಸರ್ಕಾರ ಅಧಿಕಾರಕ್ಕೆ ಬರದಿದ್ದರೇ ರಾಜ್ಯದಲ್ಲಿ ಕೋಮುಗಲಭೆ, ಕೋಮುಘರ್ಷಣೆ ಆಗುವ ಸಾಧ್ಯತೆ ಇದೆ ಎಂದು ಹೇಳಿರುವುದು ರಾಜ್ಯದ ಜನರಿಗೆ ಬೆದರಿಕೆ ಹಾಕಿರುವ ರೀತಿ ಎಂದು ಕಿಡಿಕಾರಿದ್ದಾರೆ.

ಶೋಭಾ ಕರಂದ್ಲಾಜೆ  ಬರೆದ ಕಾಗದ ಪ್ರಜಾಪ್ರಭುತ್ವಕ್ಕೆ ಮಾರಕ ಹಾಗೂ ರಾಜಕೀಯ ವ್ಯವಸ್ಥೆಯಲ್ಲಿ ಏಕ ಪಕ್ಷಕ್ಕೆ ಅನುಕೂಲಗಳನ್ನ ಮಾಡಿ, ಬೇರೆ ಪಕ್ಷಗಳಿಗೆ ತೊಂದರೆಗಳನ್ನ ಉಂಟು ಮಾಡುವ ರೀತಿ ಕಾಣಿಸುತ್ತಿದೆ. ಒಂದು ರಾಜಕೀಯ ಪಕ್ಷ ಹಾಗೂ ಕೇಂದ್ರ ಗೃಹ ಸಚಿವರು ಈ ರೀತಿಯ ಬೆದರಿಕೆಯನ್ನ ಹಾಕುವುದು ಎಷ್ಟರ ಮಟ್ಟಿಗೆ ಸರಿ ಎಂದು ಬ್ರಿಜೇಶ್ ಕಾಳಪ್ಪ ಪ್ರಶ್ನಿಸಿದರು.

ಇನ್ನೂ, ಚುನಾವಣಾ ಸ್ಟಾರ್ ಪ್ರಚಾರಕರಾಗಿ ಆಪ್ ಪಕ್ಷದ ಪಂಜಾಜ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಭಗವಂತ್ ಮಾನ್ ಚುನಾವಣೆ ಪ್ರಚಾರ ವಿವರ: ಏಪ್ರಿಲ್ 30 ರಂದು ಚಂಡೀಗಢನಿಂದ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಚಿತ್ರದುರ್ಗದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಜಗದೀಶ್ ಪರವಾಗಿ ಬೃಹತ್ ಪ್ರಚಾರ ಮತ್ತು ಸಭೆಯನ್ನ ನಡೆಸಲಿದ್ದಾರೆ. ಚಿತ್ರದುರ್ಗದಿಂದ ಬೆಂಗಳೂರಿಗೆ ಪ್ರಯಾಣಿಸಿದ ಬಳಿಕ ಬೆಂಗಳೂರಿನ ಪುಲಕೇಶಿನಗರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಸುರೇಶ್ ರಾಥೋಡ್ ಪರವಾಗಿ ಬೃಹತ್ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ.

ಮೇ 1 ರಂದು ಬೆಂಗಳೂರಿನ ದಾಸರಹಳ್ಳಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಕೀರ್ತನ್ ಕುಮಾರ್ ಅವರಿಗೆ ಬೆಂಬಲಿಸಿ ಶ್ರೀಭಗವಂತ್ ಮಾನ್ ಅವರು ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಬೆಂಗಳೂರಿನಿಂದ ಬೀದರ್‌ಗೆ ತೆರಳಲಿದ್ದಾರೆ. ಬೀದರ್‌ ಜಿಲ್ಲೆಯ ಮನ್ನೆಖೇಳ್ಳಿಯಲ್ಲಿ ಬೃಹತ್ ಮಟ್ಟದ ಜನಸಭೆ ಕಾರ್ಯಕ್ರಮವನ್ನ ನಡೆಸಲಿದ್ದಾರೆ.

ಅಮ್ ಆದ್ಮಿ ಪಕ್ಷದ ಮಾಧ್ಯಮ ವಕ್ತಾರೆ ಉಷಾ ಮೋಹನ್ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?