VIJAYAPATHA.IN > ವಿಜಯಪಥ > NEWS > Crime > ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲ 17 ಆರೋಪಿಗಳ ಬಂಧನವ ಅವಧಿಯನ್ನು ಮತ್ತೆ ಒಂದು ದಿನ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಇಂದು ಡಿ ಗ್ಯಾಂಗ್‌ನ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಪೀಠ ನಟ ದರ್ಶನ್ ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗಳನ್ನು ಮತ್ತೆ ಒಂದು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದ್ದು, ಜಾಮೀನು ಯಾವಾಗ ಸಿಗಲಿದೆ ಎಂಬುದೇ ಆರೋಪಿಗಳಿಗೆ ತೀವ್ರ ಚಿಂತೆಯಾಗಿದೆ.
![](https://vijayapatha.in/wp-content/uploads/2024/02/QR-Code-VP-1-1-300x62.png)
Related
Deva
Leave a reply