NEWSಕೃಷಿದೇಶ-ವಿದೇಶನಮ್ಮರಾಜ್ಯ

ರೈತ ಪರ ಖಾಸಗಿ ಮಸೂದೆ ಮಂಡಿಸಲು ಮಂಡ್ಯ ಸಂಸದ ಎಚ್‌ಡಿಕೆಗೆ ರೈತ ಮುಖಂಡರ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದ ಒತ್ತಾಯದ ಬಗ್ಗೆ ಸಂಸತ್‌ನಲ್ಲಿ ಖಾಸಗಿ ಮಸೂದೆ ಮಂಡಿಸಲು ಮಂಡ್ಯ ಸಂಸದ ಎಚ್.ಡಿ.ಕುಮಾರಸ್ವಾಮಿಯವರ ಅನುಪಸ್ಥಿತಿಯಲ್ಲಿ ಅವರ ಕಚೇರಿಗೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಿಯೋಗ ಮನವಿ ಪತ್ರ ಸಲ್ಲಿಸಿದೆ.

ಈ ಬಗ್ಗೆ ಮಂಡ್ಯದಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್‌, ದೆಹಲಿಯಲ್ಲಿ ರೈತರು ಕೃಷಿ ಕಾನೂನುಗಳ ವಿರುದ್ಧ ಮತ್ತು ಎಂಎಸ್‌ಪಿ ಗ್ಯಾರಂಟಿ ಕಾನೂನನ್ನು ಜಾರಿಗೆ ತರಲು ಐತಿಹಾಸಿಕ ಚಳವಳಿಯನ್ನು ನಡೆಸಿದ ಪರಿಣಾಮ ಕೇಂದ್ರ ಸರ್ಕಾರ 3 ಕೃಷಿ ಕಾನೂನುಗಳನ್ನು ಹಿಂಪಡೆದು ಎಂಎಸ್‌ಪಿ ಗ್ಯಾರಂಟಿ ಕಾನೂನು ಮಾಡಲು ಸಮಿತಿ ರಚನೆ ಮಾಡುವುದಾಗಿ ಘೋಷಿಸಿತ್ತು.

ಈಗ ಎಂಎಸ್‌ಪಿ ಖಾತರಿ ಕಾನೂನನ್ನು ಜಾರಿಗೆ ತರಲು ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದೇವೆ, ಆದರೆ ಕೇಂದ್ರ ಸರ್ಕಾರ ಕಿವುಡಾಗಿದೆ. ಹೀಗಾಗಿ ತಾಳ್ಮೆಯ ಮಿತಿಗಳನ್ನು ದಾಟಿದ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಫೆಬ್ರವರಿ 13 ರಂದು “ದೆಹಲಿ ಚಲೋ ರ‍್ಯಾಲಿ ಘೋಷಿಸಿದ್ದೆವು. ಇಡೀ ದೇಶದ ರೈತರಿಗೆ ಎಂಎಸ್‌ಪಿ ದರದಲ್ಲಿ ಎಲ್ಲ ಬೆಳೆಗಳನ್ನು ಖರೀದಿಸಲು ಖಾತರಿ ಕಾನೂನು ರೂಪಿಸಬೇಕು ಮತ್ತು ಡಾ.ಸ್ವಾಮಿನಾಥನ್ ಆಯೋಗದ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಬೆಲೆಗಳನ್ನು ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದೆವು.

ಧಾರವಾಡ ಬೆಳಗಾವಿ ಜಿಲ್ಲೆಯ ರೈತರು ಸೋಮವಾರ (ಜುಲೈ 8ರಂದು) ಬೆಳಗಾವಿಯಲ್ಲಿ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ರೈತರ ವಿವಿಧ ಬೇಡಿಕೆಗಳ ಈಡೇರಿಸಲು ಧ್ವನಿಯಾಗಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.

ಅಲ್ಲದೆ ರೈತರು ಮತ್ತು ಕೂಲಿಕಾರರನ್ನು ಸಂಪೂರ್ಣ ಸಾಲದಿಂದ ಮುಕ್ತಗೊಳಿಸಬೇಕು. ಭಾರತವು ವಿಶ್ವ ವ್ಯಾಪಾರ ಒಪ್ಪಂದ ಸಂಸ್ಥೆಯಿಂದ ಹೊರಬರಬೇಕು ಮತ್ತು ಎಲ್ಲ ಮುಕ್ತ ವ್ಯಾಪಾರ ಒಪ್ಪಂದಗಳನ್ನು ನಿಷೇಧಿಸಬೇಕು. 60 ವರ್ಷ ತುಂಬಿದ ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಫಸಲ್ ಬಿಮಾ ಯೋಜನೆಯಲ್ಲಿ ತಿದ್ದುಪಡಿಗಳನ್ನು ಮಾಡಬೇಕು.

ನಕಲಿ ಬಿತ್ತನೆ ಬೀಜಗಳು, ಕೀಟನಾಶಕಗಳು ಮತ್ತು ರಸಗೊಬ್ಬರಗಳನ್ನು ತಯಾರಿಸುವ ಕಂಪನಿಗಳಿಗೆ ಕಠಿಣ ಶಿಕ್ಷೆ ಮತ್ತು ದಂಡವನ್ನು ವಿಧಿಸಲು ನಿಬಂಧನೆಗಳನ್ನು ಮಾಡಬೇಕು ಮತ್ತು ಬೀಜಗಳ ಗುಣಮಟ್ಟವನ್ನು ಸುಧಾರಿಸಬೇಕು. ಬರ, ಅತಿವೃಷ್ಟಿ, ಮಳೆ ಹಾನಿ, ಪ್ರವಾಹ ಹಾನಿ ಪ್ರಕೃತಿ ವಿಕೋಪದಡಿ ಪರಿಹಾರ ನೀಡುವ ಎನ್‌ಡಿಆರ್‌ಎಫ್ ಮಾನದಂಡ ತಿದ್ದುಪಡಿ ಮಾಡಬೇಕು, ವೈಜ್ಞಾನಿಕವಾಗಿ ಪರಿಹಾರ ನಿಗದಿ ಮಾಡಬೇಕು. ಕಬ್ಬಿನ ಎಫ್‌ಆರ್‌ಪಿ ದರವನ್ನು ರೈತರ ಹೊಲದಲ್ಲಿನ ದರ ಎಂದು ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದೇವು.

ಇದಕ್ಕೆ ಸ್ಪಂದಿಸಬೇಕಾದ ಸರ್ಕಾರ ಏನನ್ನು ಮಾಡಲಿಲ್ಲ. ಆದರೆ ಹರಿಯಾಣದಲ್ಲಿ ನಡೆಯುತ್ತಿದ್ದ ರೈತರ ಆಂದೋಲನ-2ರ ವೇಳೆ ಗುಂಡು ಹಾರಿಸಿ ರೈತರಿಗೆ ಪೊಲೀಸ್ ಅಧಿಕಾರಿಗಳು ಚಿತ್ರಹಿಂಸೆ ನೀಡಿದರು. ಈಗ ಆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜತೆಗೆ ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಚಳವಳಿ ನಡೆಯುತ್ತಿದೆ.

ಕೇಂದ್ರ ಸರ್ಕಾರದ ಸಚಿವರ ಜತೆ 4 ಸುತ್ತಿನ ಮಾತುಕತೆ ನಡೆಸಿದರೂ ಆ ಎಲ್ಲ ಮಾತುಕತೆಗಳು ಅತಂತ್ರವಾಗಿಯೇ ಉಳಿದಿವೆ. ದೇಶದ ರಾಜಧಾನಿ ದೆಹಲಿಗೆ ತಮ್ಮ ಬೇಡಿಕೆಗಳ ಮೇಲೆ ಶಾಂತಿಯುತವಾಗಿ ಪ್ರತಿಭಟಿಸಲು ಹೊರಟಿದ್ದ ರೈತರ ಮೇಲೆ ಹರಿಯಾಣದ ಬಿಜೆಪಿ ಸರ್ಕಾರ ಗುಂಡು ಹಾರಿಸಿತು, ಪೆಲೆಟ್ ಗನ್ ಮತ್ತು ವಿಷಕಾರಿ ಅನಿಲಗಳನ್ನು ಪ್ರಯೋಗಿಸಿತು. ಹರಿಯಾಣ ಪೊಲೀಸರು ನಡೆಸಿದ ಈ ಹಿಂಸಾಚಾರದಲ್ಲಿ, ಒಬ್ಬ ರೈತ ಶುಭಾಕರನ್ ಸಿಂಗ್ ತಲೆಗೆ ಗುಂಡು ಹಾರಿಸಿ ಹುತಾತ್ಮರಾದರು,5 ರೈತರು ದೃಷ್ಟಿ ಕಳೆದುಕೊಂಡರು ಮತ್ತು 433 ರೈತರು ಗಾಯಗೊಂಡರು. ಆದರೂ ಚಳವಳಿ ಮುಂದುವರೆದಿದೆ.

ಲೋಕಸಭೆ ಚುನಾವಣೆ ಮುನ್ನ ನಿಮ್ಮ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ರೈತರು ಮತ್ತು ಕಾರ್ಮಿಕರ ಸಮಸ್ಯೆಗಳನ್ನು ಸೇರಿಸಿತ್ತು. ಈ ಕಾರಣ ರೈತರು ಸಾರ್ವಜನಿಕರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಸಂಸದರಾಗಿ ಆಯ್ಕೆ ಮಾಡಿ ಕಳುಹಿಸಿದ್ದಾರೆ. ಆದ್ದರಿಂದ ಎಲ್ಲ ವಿಷಯಗಳ ಬಗ್ಗೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಖಾಸಗಿ ಮಸೂದೆಗಳನ್ನು ಮಂಡಿಸುವುದು ನಿಮ್ಮ ಜವಾಬ್ದಾರಿಯಾಗಿದೆ.

ರೈತರು ಮತ್ತು ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಖಾಸಗಿ ಮಸೂದೆಗಳನ್ನು ನೀವು ಗಂಭೀರವಾಗಿ ಮಂಡಿಸದಿದ್ದರೆ ನಿಮ್ಮ ಮತ್ತು ಬಿಜೆಪಿಯ ಅಭಿಪ್ರಾಯಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ನಾವು ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ದಕ್ಷಿಣ ಭಾರತ ಸಂಚಾಲಕ ರಾಜ್ಯ ರೈತ ಸಂಘಟನೆಗಳು ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಎಚ್‌.ಸಿ. ಮಂಜುನಾಥ್ ಕನ್ನಡ ಸಂಘಟನೆ, ಪುರ ಬಿ. ಮಹದೇವಪ್ಪ, ಟೌನ್ ಮಹೇಶ್, ಚೋಟ್ಟನಹಳ್ಳಿ ಶಂಕರೇಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಲಕ್ಷ್ಮಿಪುರ ವೆಂಕಟೇಶ್, ಕಿರಗಸೂರು ಶಂಕರ, ಬರಡನಪುರ ನಾಗರಾಜ್, ನೀಲಕಂಠಪ್ಪ ಇತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು