CrimeNEWSನಮ್ಮಜಿಲ್ಲೆನಮ್ಮರಾಜ್ಯ

ರೈತ ಮುಖಂಡ ಕೋಡಿಹಳ್ಳಿ ವಿರುದ್ಧ ಮಾನಹಾನಿಕರ ಸುದ್ದಿ ಬಿತ್ತರಿಸಿದ ಪವರ್ ಟಿವಿಗೆ ಎದುರಾಯ್ತು ಸಂಕಷ್ಟ..!

ಚಂದನ್ ಶರ್ಮಾ, ರಾಕೇಶ್ ಶೆಟ್ಟಿ ಸೇರಿ ಮೂವರಿಗೆ ಸಮನ್ಸ್‌ ಜಾರಿ ಮಾಡಿದ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಮಾನಹಾನಿಕರವಾಗಿ ಆಧಾರರಹಿತ ಸುದ್ದಿ ಪ್ರಕಟಿಸಿದ ಪವರ್ ಟಿವಿ ಸುದ್ದಿ ಸಂಸ್ಥೆಗೆ ಸಂಕಷ್ಟ ಎದುರಾಗಿದೆ.

ಆಕ್ಷೇಪಾರ್ಹ ಸುದ್ದಿ ಪ್ರಕಟಿಸಿದ್ದಾರೆ ಎಂಬ ಆರೋಪದ ಮೇರೆಗೆ ಸಲ್ಲಿಸಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ವಿಚಾರಣೆಗೆ ಎತ್ತಿಕೊಂಡ ಬೆಂಗಳೂರಿನ ನ್ಯಾಯಾಲಯ, ಪವರ್ ಟಿವಿ ಮುಖ್ಯಸ್ಥರು, ನಿರೂಪಕ ಚಂದನ್ ಶರ್ಮಾ ಮತ್ತಿತರರ ವಿರುದ್ದ ನೋಟಿಸ್‌ ಜಾರಿ ಮಾಡಿದೆ.

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶರಾದ ಬಿ.ಸಿ. ಚಂದ್ರಶೇಖರ್, ಆರೋಪಿಗಳಾದ ಪವರ್ ಟಿವಿ ಎಂಡಿ ರಾಕೇಶ್ ಸಂಜೀವ ಶೆಟ್ಟಿ, ಡಿ.ಎಲ್. ಮಧು ಹಾಗೂ ಚಂದನ್ ಶರ್ಮಾ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ.

2021ರ ಏಪ್ರಿಲ್‌ನಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಿದ್ದ ವೇಳೆ ಆ ಮುಷ್ಕರವನ್ನು ನಿಲ್ಲಿಸಲು ಹಾಗೂ ರೈತರ ಹೋರಾಟ ಮುಕ್ತಾಯಗೊಳಿಸಲು ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್ ಅವರು ಕೋಟ್ಯಂತರ ರೂ. ಕೇಳಿದ್ದರು ಎಂದು ಆರೋಪಿಸಿ ವರದಿ ಮಾಡಲಾಗಿತ್ತು.

ದೂರನ್ನು ಪರಾಮರ್ಶೆಗೆ ಒಳಪಡಿಸಿದ ನ್ಯಾಯಾಲಯ, ಖಾಸಗಿ ದೂರನ್ನು ಕ್ರಿಮಿನಲ್ ದೂರನ್ನಾಗಿ ಪರಿವರ್ತಿಸಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್‌ ಅವರ ಪರವಾಗಿ ಹಿರಿಯ ನ್ಯಾಯವಾದಿ ಎಸ್. ಬಾಲನ್ ವಾದಿಸಿದ್ದರು.

ನಮಗೆ ಮಾನಹಾನಿಕರವಾಗುವಂತ ಸುದ್ದಿಯನ್ನು ಅಂದು ಬಿತ್ತರಿಸಿದ್ದರ ವಿರುದ್ಧ ನಾವು ಕೋರ್ಟ್‌ ಮೆಟ್ಟಿಲೇರಿದ್ದು, ಬರುವ ಆಗಸ್ಟ್‌ ತಿಂಗಳಲ್ಲಿ ಮತ್ತೆ ಪ್ರಕರಣದ ವಿಚಾರಣೆ ಬರಲಿದ್ದು ಅಂದು 25 ಕೋಟಿ ರೂ.ಗಳವರೆಗೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಇದೇ ವೇಳೆ ವಿಜಯಪಥಕ್ಕೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ