ರಾಮನಗರ: ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲ್ಲರ್ ಚಲಿಸುತ್ತಿದ್ದ ಕ್ಯಾಂಟರ್ಗೆ ಬೆಳ್ಳಂಬೆಳಗ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಹಲವು ಮಂದಿ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗೇಟ್ ಬಳಿ ನಡೆದಿದೆ.
ಅಪಘಾತದ ರಭಸಕ್ಕೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದ ಮಹೇಶ್ ಮತ್ತು ಕೃಷ್ಣ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಿರುಪತಿಯ ತಿಮ್ಮಪ್ಪನ ದರ್ಶನ ಪಡೆದು ವಾಪಸ್ಆಗುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮುಂದೆ ನಿಧಾನವಾಗಿ ಚಲಿಸುತ್ತಿದ್ದ ಕ್ಯಾಂಟರ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.
ಇನ್ನು ನಿದ್ದೆಯ ಮಂಪರಿನಲ್ಲಿ ಚಾಲಕ ವೇಗವಾಗಿ ಟಿಟಿ ಚಲಾಯಿಸಿ ಕ್ಯಾಂಟರ್ಗೆ ಡಿಕ್ಕಿಹೊಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)