CrimeNEWSನಮ್ಮಜಿಲ್ಲೆ

ರಾಮನಗರ- KSRTC ಎಲೆಕ್ಟ್ರಿಕ್‌ ಬಸ್‌ ಬೊಲೆರೋಗೆ ಡಿಕ್ಕಿ : ಕಂಡಕ್ಟರ್‌ ಸಾವು, ನಾಲ್ವರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಫ್ಲೈವುಡ್ ತುಂಬಿಕೊಂಡು ಹೋಗುತ್ತಿದ್ದ ಬೊಲೆರೋ ವಾಹನವನ್ನು ಓವರ್‌ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್‌ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಕಂಡಕ್ಟರ್‌ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಬೆಂಗಳೂರು – ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಅವಘಡ ಸಂಭವಿಸಿದೆ.

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ವಿಜಯಪುರ ಬಳಿ ಫ್ಲೈವುಡ್ ತುಂಬಿದ್ದ ಬೊಲೆರೋ ವಾಹನವನ್ನು ಓವರ್‌ಟೇಕ್ ಮಾಡಲು ಹೋಗಿ ಈ ಅಪಘಾತ ನಡೆದಿದೆ.

ವೇಗವಾಗಿ ಬರುತ್ತಿದ್ದ ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಸರ್ವಿಸ್ ರಸ್ತೆ ಪಕ್ಕದ ಜಮೀನಿಗೆ ಹೋಗಿ ನಿಂತಿದೆ. ಅಲ್ಲದೆ ಬಸ್‌ ಮುಂದಿನ ಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸ್ಥಳಕ್ಕೆ ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ