NEWSನಮ್ಮಜಿಲ್ಲೆರಾಜಕೀಯ

ರಸ್ತೆಗುಂಡಿ ತಂದ ಸಾವುನೋವು: ಸರ್ಕಾರ, ಬಿಬಿಎಂಪಿ ವಿರುದ್ಧ ನ.19ಕ್ಕೆ ಎಎಪಿಯಿಂದ ಬೃಹತ್‌ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಸ್ತೆ ಗುಂಡಿಗಳಿಗೆ ವಾಹನ ಸವಾರರು ಬಲಿಯಾಗುತ್ತಿರುವ ಪ್ರಕರಣಗಳು ಏರಿಕೆಯಾಗುತ್ತಿದ್ದರೂ ಈ ಕುರಿತು ನಿರ್ಲಕ್ಷ್ಯ ವಹಿಸಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇದೇ ನ.19ರ ಶನಿವಾರ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ, “ಇತ್ತೀಚಿನ ದಿನಗಳಲ್ಲಿ ರಸ್ತೆಗುಂಡಿಗಳಿಂದಾಗಿ ಅಪಘಾತಗಳು, ಗಾಯಗಳು, ಸಾವುಗಳು ಸಾಮಾನ್ಯ ಎಂಬಂತಾಗಿವೆ. ಇದಕ್ಕೆ ಸರ್ಕಾರದ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರವೇ ಕಾರಣ ಎಂದು ಕಿಡಿಕಾರಿದರು.

ಇನ್ನು ಇವರ ಆಟಾಟೋಪಕ್ಕೆ ಅಮಾಯಕ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಗುಂಡಿಗಳಿಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಈ ಸರ್ಕಾರಕ್ಕೆ ಇಲ್ಲ. ಜನವಿರೋಧಿಯಾಗಿರುವ ಈ ಲಜ್ಜೆಗೇಡಿ ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿ ಬೃಹತ್‌ ಪ್ರತಿಭಟನೆ ನಡೆಸಿ, ನಂತರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದೆ. ಈ ಮೂಲಕ ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿದೆ ಎಂದು ಹೇಳಿದರು.

ರಸ್ತೆ ಗುಂಡಿಗೆ ಬಲಿಯಾದವರ ಕುಟುಂಬದವರ ಅನೇಕ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ, ನ್ಯಾಯಕ್ಕಾಗಿ ಸರ್ಕಾರವನ್ನು ಆಗ್ರಹಿಸಲಿದ್ದಾರೆ. ಸಾಮಾಜಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ನಾಗರಿಕ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನಮ್ಮ ಈ ಜನಪರ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡುತ್ತಿದ್ದೇವೆ.

ಬೆಂಗಳೂರಿನ ಸಮಸ್ತ ಜನತೆ, ಅದರಲ್ಲೂ ವಿಶೇಷವಾಗಿ ವಾಹನ ಸವಾರರು ಹಾಗೂ ಯುವಜನತೆ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು. ಉತ್ತಮ ರಸ್ತೆ ಪಡೆಯುವುದು ಎಲ್ಲರ ಹಕ್ಕಾಗಿದ್ದು, ಇದಕ್ಕಾಗಿ ಜನರು ಒಂದುಗೂಡಬೇಕು ಎಂದು ಮನವಿ ಮಾಡಿದರು.

ಬೆಂಗಳೂರು ನಗರ ಎಎಪಿ ಸಂಘಟನಾ ಕಾರ್ಯದರ್ಶಿ ಸುರೇಶ್‌ ರಾಥೋಡ್‌ ಮಾತನಾಡಿ, “ರಸ್ತೆಗುಂಡಿಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವುದು ಹಾಗಿರಲಿ, ರಸ್ತೆಗುಂಡಿಗಳಿಂದ ಕೈಕಾಲು ಮುರಿದುಕೊಂಡವರಿಗೆ ಹಾಗೂ ಬಲಿಯಾದವರ ಕುಟುಂಬದವರಿಗೆ ಪರಿಹಾರ ನೀಡಲೂ ಬಿಜೆಪಿ ಸರ್ಕಾರ ಮೀನಮೇಷ ಎಣಿಸುತ್ತಿದೆ.

ಮುಖ್ಯಮಂತ್ರಿ, ಸಚಿವರು, ಶಾಸಕರು, ಅಧಿಕಾರಿಗಳು ಯಾರೂ ಕೂಡ ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರುತ್ತಿಲ್ಲ. ಹೈಕೋರ್ಟ್‌ ಪದೇಪದೇ ಛೀಮಾರಿ ಹಾಕಿದರೂ ತಲೆಕೆಡಿಸಿಕೊಳ್ಳದಷ್ಟು ಈ ಬಿಜೆಪಿ ಸರ್ಕಾರ ಹಾಗೂ ಬಿಬಿಎಂಪಿ ಭಂಡತನ ಮೆರೆಯುತ್ತಿದೆ. ಪದೇಪದೆ ಡೆಡ್‌ಲೈನ್‌ ಮುಂದಕ್ಕೆ ಹಾಕುವ ಮೂಲಕ ಬೆಂಗಳೂರಿಗರನ್ನು ವಂಚಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಸದಸ್ಯರಾದ ಸುಹಾಸಿನಿ ಮತ್ತು ಉಷಾ ಮೋಹನ್‌ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ