NEWS

ರಾಜ್ಯದಲ್ಲಿ 511ಕ್ಕೇರಿದ ಕೊರೊನಾ ಸೋಂಕಿತ ಸಂಖ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಎಂಟು ಮಂದಿಗೆ ಕೊರೋನಾ ಪಾಸಿಟಿವ್‌ ಪ್ರಕರಣ ಸೋಮವಾರ ದೃಢಪಟ್ಟಿದೆ. ಈ ವೇಳೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 511ಕ್ಕೆ ಏರಿದೆ.

ರಾಜಧಾನಿಯಲ್ಲಿ 13 ವರ್ಷದ ಬಾಲಕನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈತ ಜ್ವರದ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದನು ಎಂದು ತಿಳಿದುಬಂದಿದೆ.

ಇದರ ಜತೆಗೆ ಮಂಡ್ಯದಲ್ಲಿ 1, ದಕ್ಷಿಣ ಕನ್ನಡದಲ್ಲಿ 2, ಬಾಗಲಕೋಟೆಯ ಜಮಖಂಡಿಯಲ್ಲಿ 2, ವಿಜಯಪುರದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ.

ಮುಂಬೈಗೆ ಪ್ರಯಾಣ ಬೆಳೆಸಿದ್ದ ಇತಿಹಾಸ ಹೊಂದಿದ್ದ ಮಂಡ್ಯದ ನಾಗಮಂಗಲದ 50 ವರ್ಷದ ವ್ಯಕ್ತಿ, 432 ರೋಗಿಯೊಂದಿಗೆ ಸಂಪರ್ಕ ಹೊಂದಿದ್ದ, ದಕ್ಷಿಣ ಕನ್ನಡ ಜಿಲ್ಲೆಯ 80 ವರ್ಷದ ಮಹಿಳೆ ಮತ್ತು 45 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.

ಬಾಗಲಕೋಟೆಯ ಜಮಖಂಡಿಯಲ್ಲಿ 32 ಮತ್ತು 21 ವರ್ಷದ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ವಿಜಯಪುರದ 45 ಹಾಗೂ 27 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇಲ್ಲಿಯವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆ ಆಗಿದ್ದು, ಈ ನಡುವೆ, ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾಗಿದ್ದ 50 ವರ್ಷದ ಬೆಂಗಳೂರು ನಿವಾಸಿ ಇಂದು ವಿಕ್ಟೋರಿಯಾ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಒಟ್ಟಾರೆ ಇಂದು ಒಂದು ಮಧ್ಯಾಹ್ನದ ವರೆಗೆ 8 ಮಂದಿಗೆ ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11ಗಂಟೆಗೆ ಪ್ರಧಾನಿ ಮೋದಿ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಲಾಕ್‌ಡೌನ್‌ ಅನ್ನು ಮೇ 15ರವರೆಗೆ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ