NEWSನಮ್ಮರಾಜ್ಯ

ರಾಜ್ಯದ  4ಸಾರಿಗೆ ನಿಗಮಗಳ ಶೇ.50  ಬಸ್‍ಗಳ ಸೇವೆ ಸ್ಥಗಿತ

ಅಂತಾರಾಜ್ಯ ಪ್ರಯಾಣ ಸೇವೆಯೂ ಅಸ್ತವ್ಯಸ್ತ l ಸಾರಿಗೆ ನಿಗಮಗಳಿಗೂ ನಷ್ಟತಂದ ಕೊರೊನಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವೈರಸ್ ಸಾರ್ವಜನಿಕರಲ್ಲಿ ಹರಡುವುದನ್ನು ತಡೆಗಟ್ಟಲುಬಿಎಂಟಿಸಿ, ಕೆಎಸ್‌ಆರ್‌ಟಿಸಿ,  ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಶೇ.50  ಬಸ್‍ಗಳ ಸೇವೆ ಸ್ಥಗಿತಗೊಳಿಸಲಾಗಿದೆ.

ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಗೆ ಸಂಚರಿಸುವ ವಿವಿಧ ಮಾರ್ಗಗಳ ಬಸ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ ಎಂದು   ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಪಿ. ರಾಜೇಂದ್ರ ಚೋಳನ್  ತಿಳಿಸಿದ್ದಾರೆ.

ಮುಂಬಯಿ, ಕಲಬುರ್ಗಿ, ಮಾರ್ಗದಲ್ಲಿ ಕಾರ್ಯಾಚರಣೆಯಲ್ಲಿರುವ ಎಲ್ಲಾ ಸಾರಿಗೆ, ವಿಜಯಪೂರ ಮಾರ್ಗದ ಮೂಲಕ ಮಾಹಾರಾಷ್ಟ್ರ ರಾಜ್ಯಕ್ಕೆ ಕಾರ್ಯಾಚರಣೆಯಾಗುವ ಎಲ್ಲಾ ಸಾರಿಗೆಗಳನ್ನು, ಕೊಲ್ಹಾಪೂರ, ಪೂಣೆ, ಗೋವಾ ಮಾರ್ಗದಲ್ಲಿ ಕಾರ್ಯಾಚರಣೆಯಲ್ಲಿರುವ ಸುಮಾರು ಶೇ.50 ಸಾರಿಗೆಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಬೆಂಗಳೂರು ಮಾರ್ಗದಲ್ಲಿ ಕಾರ್ಯಾಚರಣೆಯಲ್ಲಿರುವ ಸುಮಾರು 25% ವೇಗದೂತ ಮತ್ತು ಸುಮಾರು 50% ಪ್ರತಿಷ್ಟಿತ ಸಾರಿಗೆಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವುದರಿಂದ ಸಾರ್ವಜನಿಕ ಪ್ರಯಾಣಿಕರ ದಟ್ಟಣೆ ಕಡಿಮೆಯಾಗಿರುವುದರಿಂದ ಸಂಸ್ಥೆಯ ವ್ಯಾಪ್ತಿಯ 06 ಜಿಲ್ಲೆಗಳ ಒಟ್ಟು 09 ವಿಭಾಗಗಳಿಂದ ಕಾರ್ಯಾಚರಣೆಯಾಗುತ್ತಿರುವ ಸಾರಿಗೆಗಳಲ್ಲಿ ಮಾ. 19 ರಂದು 400 ಅನುಸೂಚಿಗಳನ್ನು ರದ್ದುಗೊಳಿಸಲಾಗಿದೆ. ಇದರಿಂದಾಗಿ ಸಂಸ್ಥೆಗೆ ಅಂದಾಜೂ ಒಂದುಕೋಟಿ ರೂಪಾಯಿ ಆದಾಯದಲ್ಲಿ ನಷ್ಟ ಉಂಟಾಗಿರುತ್ತದೆ.

ಸಂಚಿತವಾಗಿ ಮಾ. 11 ರಿಂದ 19ರ ವರೆಗೆ 2723 ಅನುಸೂಚಿಗಳನ್ನು ರದ್ದುಗೊಳಿಸಲಾಗಿದ್ದು, ಇದರಿಂದಾಗಿ ಸಂಸ್ಥೆಗೆ ಅಂದಾಜೂ ಏಳುಕೋಟಿ ರೂಪಾಯಿ ಆದಾಯದಲ್ಲಿ ನಷ್ಟ ಉಂಟಾಗಿರುತ್ತದೆ. ಪ್ರಸ್ತುತ ಪ್ರಯಾಣಿಕರ ಸಾಂಧ್ರತೆಯನ್ನು ಗಮನದಲ್ಲಿಟ್ಟುಕೊಂಡು ಅವಶ್ಯಕತೆಗನುಸಾರವಾಗಿ ಸಾರಿಗೆ ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ