Please assign a menu to the primary menu location under menu

NEWSಆರೋಗ್ಯನಮ್ಮರಾಜ್ಯ

ರಾತ್ರಿ 9 ಗಂಟೆಯಿಂದ ನಿಷೇಧಾಜ್ಞೆ ಜಾರಿ

ನಾಳೆ ಪಿಯು ಪರೀಕ್ಷೆ ಇಲ್ಲ l 9 ಜಿಲ್ಲೆಗಳಲ್ಲಿ KSRTC ಬಸ್‌ ನಿಲ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರುಭಾನುವಾರ ರಾತ್ರಿ 9 ಗಂಟೆಯಿಂದ ನಿಷೇಧಾಜ್ಞೆ ಜಾರಿ ಸರ್ಕಾರ ಆದೇಶ ಹೊರಡಿಸಿದೆ.

ಇಂದು ರಾತ್ರಿ 9 ಗಂಟೆಯ ಬಳಿಕ ಜನತಾ ಕರ್ಫ್ಯೂ ಅವಧಿ ಮುಕ್ತಾಯಗೊಂಡರೂ ಮುಂಜಾಗರೂಕತಾ ಕ್ರಮವಾಗಿ ಸೆಕ್ಷನ್‌ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಜನರು ಸಹಕರಿಸಬೇಕು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಕುರಿತಾಗಿ ಮಾಹಿತಿ ನೀಡಿದ್ದು, ರಾತ್ರಿ ಒಂಬತ್ತು ಗಂಟೆಯ ನಂತರ ಗುಂಪಾಗಿ ಜನರು ಸೇರಲು ಅವಕಾಶವಿಲ್ಲ.

ಜನತಾ ಕರ್ಫ್ಯೂ ಅವಧಿ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೊರಗಡೆ ಜಮಾಯಿಸುವ ಸಾಧ್ಯತೆ ಇರುವುದರಿಂದ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.

ರಾಜ್ಯದಲ್ಲಿ ಜನತಾ ಕರ್ಫ್ಯೂ ಮುಕ್ತಾಯಗೊಂಡರು ಸೋಮವಾರದಿಂದ ಒಂಬತ್ತು ಜಿಲ್ಲೆಗಳು ಲಾಕ್‌ಡೌನ್ ಆಗಲಿವೆ. ಮಾರ್ಚ್‌ 31ರವರೆಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಮೈಸೂರು, ಕಲಬುರಗಿ, ಧಾರವಾಡ, ಚಿಕ್ಕಬಳ್ಳಾಪುರ, ಕೊಡಗು ಮತ್ತು ಬೆಳಗಾವಿ ಸೇರಿದಂತೆ ಕೊರೊನಾ ಪ್ರಕರಣ ಕಂಡುಬಂದಿರುವ ಈ 9 ಜಿಲ್ಲೆಗಳಲ್ಲಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ.

ಈ ಒಂಬತ್ತು ಜಿಲ್ಲೆಗಳಲ್ಲಿ ವೈದ್ಯಕೀಯ, ಔಷಧ, ದಿನಸಿ, ಕೃಷಿ ಮೊದಲಾದ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.

ರಾಜ್ಯದಲ್ಲಿ ಕೊರೊನಾ  21 ಪ್ರಕರಣಗಳು ದೃಢಪಟ್ಟಿದ್ದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಕಂಡುಬಂದ ಶಂಕೆಯಲ್ಲಿ ಹಲವರ ಮೇಲೆ ನಿಗಾ ಇಡಲಾಗಿದೆ. ಕೊರೊನಾ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಸರ್ಕಾರ ಒಂಬತ್ತು ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡುವ ನಿರ್ಧಾರ ಕೈಗೊಂಡಿದೆ.

ಬೆಂಗಳೂರಿನಲ್ಲಿ ಶೇ.50ರಷ್ಟು ಬಸ್‌ ಸಂಚಾರ ಇರುತ್ತೆ

ನಾಳೆ (ಮಾ.23) ಬೆಂಗಳೂರಿನಲ್ಲಿ ಬಸ್‌ ಸಂಚಾರ ಇರಲಿದೆ. ಆದರೆ ಮೆಟ್ರೋ ರೈಲು ಸಂಚಾರವನ್ನು ಮಾ.31ರವರೆಗೆ ಸ್ಥಗಿತಮಾಡಲಾಗಿದೆ. ಆದರೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ತುಂಬಾತುಂಬ ವಿರಳವಾದರೆ ಸಂಪೂರ್ಣವಾಗಿ ನಿಲ್ಲಿಸುವುದಾಗಿ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಲಾಕ್‌ಡೌನ್‌ ಆಗಿರುವ 9 ಜಿಲ್ಲೆಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರವನ್ನು ಸಂಪೂರ್ಣವಾಗಿ ನಿಲ್ಲಿಸುವುದಾಗಿ ಸರ್ಕಾರ ಈಗಾಗಲೇ ತಿಳಿಸಿದೆ. ಇನ್ನು ಮಾರ್ಚ್‌ 31ರವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಕಟ್ಟೆಚ್ಚರ ವಹಿಸಿದ್ದು, ನಾಗರಿಕರು ಸರ್ಕಾರಕ್ಕೆ ಸ್ಪಂದಿಸುವುದು ಅಗತ್ಯವಾಗಿದೆ.

ಮಾಂಸ, ಮೀನು ಮಾರಾಟ ನಿಷೇಧ

ಇನ್ನು ದಿನ ನಿತ್ಯಬಳಕೆ ವಸ್ತುಗಳಾದ ಹಾಲು, ತರಕಾರಿ ಧಿನಸಿಗಳನ್ನು ಮುಕ್ತವಾಗಿ ಕೊಂಡುಕೊಳ್ಳಬಹುದು. ಆದರೆ ಮಾಂಸ ಮೀನು, ಕೋಳಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಾಗಿ ಅವಶ್ಯವಿದ್ದವರು ಮಾತ್ರ ಮನೆಯಿಂದ ಹೊರಗಡೆ ಹೋಗಿ. ಇಲ್ಲದಿದ್ದರೆ ನೆಮ್ಮದಿಯಿಂದ ಮನೆಯಲ್ಲೇ ಇರಿ. ವಯಸ್ಸಾದವರು ಮತ್ತು ಮಕ್ಕಳು ಮನೆಯಲ್ಲಿದ್ದರೆ ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅಗತ್ಯವಿದೆ.

ಪಿಯುಸಿ ಕೊನೆಯ ಪರೀಕ್ಷೆ ಮುಂದೂಡಿಕೆ

ಒಂಬತ್ತು ಜಿಲ್ಲೆಗಳಲ್ಲೂ ಸಂಪೂರ್ಣವಾಗಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರವನ್ನು ನಿಲ್ಲಿಸಿರುವುದರಿಂದ ಪರೀಕ್ಷಾರ್ಥಿಗಳು ಮತ್ತುಪರೀಕ್ಷೆ ನಿರೀಕ್ಷಕರು ಪರೀಕ್ಷೆ ಕೇಂದ್ರಗಳಿಗೆ ಬರುವುದು ಕಷ್ಟಸಾಧ್ಯವಾಗಿರುವುದರಿಂದ ಪಿಯು ಪರೀಕ್ಷೆಗಳನ್ನು ರಾಜ್ಯಾದ್ಯಂತ ಮುಂದಿನ ದಿನಾಂಕ ನಿಗದಿಪಡಿಸುವವರೆಗೂ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ