Please assign a menu to the primary menu location under menu

ದೇಶ-ವಿದೇಶ

ರಾಮನಗರದ ಇಬ್ಬರು ಶಂಕಿತರ ಕೊರೊನಾ ವರದಿ ನೆಗೆಟೀವ್: ಜಿಲ್ಲಾಧಿಕಾರಿ ಮಾಹಿತಿ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಜಿಲ್ಲೆಯಲ್ಲಿ ಕರೋನಾ ವೈರಸ್ ಶಂಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರ ಪರೀಕ್ಷಾ ವರದಿ ಬಂದಿದ್ದು, ಇಬ್ಬರದ್ದೂ ನೆಗೆಟೀವ್ ಆಗಿದೆ. ಹೀಗಾಗಿ ನಗರದ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದರು.

ಚನ್ನಪಟ್ಟಣದ 22 ವರ್ಷದ ಯುವತಿ ಜರ್ಮನಿಯಿಂದ 4 ದಿನಗಳ ಹಿಂದೆ ರಾಮನಗರಕ್ಕೆ ಬಂದಿದ್ದರು. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಗಂಟಲಿನ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ಇಂದು ಬಂದಿದ್ದು ನೆಗೆಟೀವ್ ಆಗಿದೆ ಎಂದರು.

ಹಾಗೆಯೇ, ಇತ್ತೀಚೆಗೆ ಇಂಡೋನೇಷಿಯಾ ಮತ್ತು ಬಾಲಿಗೆ ಭೇಟಿ ನೀಡಿ ಮಾಗಡಿಗೆ ಮರಳಿದ್ದ 33 ವರ್ಷದ ಯುವಕ ಅವರು ಜ್ವರ ಮತ್ತು ಕೆಮ್ಮಿನಿಂದ ಮಾಗಡಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ವರದಿ ಸಹ ನೆಗೆಟೀವ್ ಆಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್‌ BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ