NEWSದೇಶ-ವಿದೇಶ

ರಾಷ್ಟ್ರಪತಿ ಭವನಕ್ಕೂ ನುಗ್ಗಿದ ವಿಶ್ವಮಾರಿ ಕೊರೊನಾ ?

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಾಷ್ಟ್ರಪತಿ ಭವನಕ್ಕೂ ಕೊರೊನಾ ಮಹಾಮಾರಿ ದಾಳಿ ಇಟ್ಟಿದ್ದು, ಒಬ್ಬರಲ್ಲಿ ಸೋಂಕು ಪಾಸಿಟಿವ್‌ ಇರುವುದು ತಿಳಿದು ಬಂದಿದೆ.

ಇದರಿಂದ ರಾಷ್ಟ್ರಪತಿ ಭವನದಲ್ಲಿ ಕೆಲಸ ಮಾಡುತ್ತಿದ್ದ 125 ಕುಟುಂಬಗಳನ್ನು ಕ್ವಾರಂಟೈನ್ ಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ರಾಷ್ಟ್ರಪತಿ ಭವನದಲ್ಲಿ ಸ್ವಚ್ಛತೆ ನೌಕರನಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ ಎಂದು ಮೂಲಗಳು ತಿಳಿಸಿವೆ. ಈ ವ್ಯಕ್ತಿಯ ತಾಯಿ ಈ ಹಿಂದೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು. ಹೀಗಾಗಿ ಅವರ ಮನೆಯನ್ನು ಕಳೆದ ಶನಿವಾರದಿಂದ ಸೀಲ್ ಮಾಡಲಾಗಿದ್ದು, ಇಡೀ ಕುಟುಂಬವನ್ನು ಕ್ವಾರಂಟೈನ್ ನಲ್ಲಿಡಲಾಗಿದೆ.

ಅದೇ ದಿನ ಆ ಸಿಬ್ಬಂದಿಯ ಅಕ್ಕಪಕ್ಕದ 30 ಮನೆಗಳ ನಿವಾಸಿಗಳನ್ನು ತೀವ್ರ ಕ್ವಾರಂಟೈನ್ ನಲ್ಲಿರಿಸಿ ಸರ್ಕಾರದಿಂದಲೇ ಆಹಾರ ಪೂರೈಸಲಾಗುತ್ತಿದೆ. ಇತ್ತೀಚಿನ ಬೆಳವಣಿಗೆಯ ನಂತರ ಮತ್ತೆ 95 ಕುಟುಂಬಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು, ಯಾರೊಬ್ಬರನ್ನೂ ಮನೆಯಿಂದ ಹೊರಬರದಂತೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ.

ನೌಕರನ ಮನೆಯ ಅಕ್ಕಪಕ್ಕದಲ್ಲಿರುವ ನಿವಾಸಿಗಳಷ್ಟೇ ಅಲ್ಲದೇ ರಾಷ್ಟ್ರಪತಿ ಭವನದಲ್ಲಿರುವ 125 ಕುಟುಂಬಗಳ ಸುಮಾರು 500 ಮಂದಿಯೂ ಕೂಡ ಈಗ ಸ್ವ ನಿರ್ಬಂಧದಲ್ಲಿದ್ದಾರೆ. ಆದರೆ ಈ ಕುರಿತು ರಾಷ್ಟ್ರಪತಿ ಭವನದಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ