NEWSನಮ್ಮಜಿಲ್ಲೆ

ರೇಷ್ಮೆ ಗೂಡಿನ ಮಾರುಕಟ್ಟೆ ವ್ಯಾಪಾರ ವಹಿವಾಟು ಇಂದಿನಿಂದ ಬಂದ್‌

ಮುಂದಿನ ಆದೇಶದ ವರೆಗೂ ಮಾರುಕಟ್ಟೆ ತೆರೆಯದಂತೆ ರಾಮನಗರ ಡಿಸಿ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಮಾ.25ರಿಂದ ಮುಂದಿನ ಆದೇಶದ ವರೆಗೆ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ, ರಾಮನಗರ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳಲ್ಲಿ ವ್ಯಾಪಾರ ವಹಿವಾಟುಗಳನ್ನು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ  ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷೆ ಎಂ.ಎಸ್. ಅರ್ಚನಾ  ಆದೇಶ ಹೊರಡಿಸಿದ್ದಾರೆ.

ರಾಮಗನರ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಗೆ ಪ್ರತಿದಿನ 2000 ರಿಂದ 3000 ಜನರು ಗೂಡಿನ ಮಾರಾಟಕ್ಕಾಗಿ ಮತ್ತು ಗೂಡು ಖರೀದಿಗಾಗಿ ಜನರು ಆಗಮಿಸುತ್ತಿದ್ದಾರೆ. ಕೊರೊನಾ ವೈರಸ್ ಹರಡದಂತೆ ಮುಂಜಾಗೃತ ಕ್ರಮವಾಗಿ ಮಾರುಕಟ್ಟೆ ಒಳ ಹಾಗೂ ಹೊರ ಆವರಣವನ್ನು ಬ್ಲೀಚಿಂಗ್ ಪೌಡರ್ ದೋಳಿಕರಿಸಿ, ಸ್ವಚ್ಛತೆಯನ್ನು ಕಾಪಾಡಲಾಗುತ್ತಿದೆ ಎಂದರು.

ಪ್ರತಿ ಎರಡು ದಿನಗಳಿಗೊಮ್ಮೆ ಪ್ರತಿ ಘಟಕವನ್ನು ಸ್ವಚ್ಛಗೊಳಿಸಿ ಸೋಂಕು ನಿವಾರಕದಿಂದ ಸೋಂಕು ನಿವಾರಣೆ ಮಾಡಲಾಗುತ್ತಿದೆ. ಈ ಮಾರುಕಟ್ಟೆಗೆ ರೇಷ್ಮೆಗೂಡಿನ ವಹಿವಾಟಿಗಾಗಿ ಬರುವರೈತರು ಹಾಗೂ ರೀಲರ್‌ಗಳಿಗೆ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಸಹ ನಿರ್ಲಕ್ಷ್ಯ ವನ್ನು ತೋರುತ್ತಿರುವುದು ಗಮನಿಸಲಾಗಿದೆ ಎಂದು ತಿಳಿಸಿದ್ದಾರೆ.

ಸೋಂಕು ಪೀಡಿತ ಜಿಲ್ಲೆಗಳಿಂದ ರೈತರು ಗೂಡು ತರುತ್ತಿರುತ್ತಾರೆ. ಇಂತವರು ಮಾರುಕಟ್ಟೆ ಗೂಡಿನ ವಹಿವಾಟಿಗಾಗಿ ಆಗಮಿಸುತ್ತಿರುವುದರಿಂದ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮಾರುಕಟ್ಟೆಯ ಗೂಡಿನ ವಹಿವಾಟನ್ನು ತಾತ್ಕಾಲಿಕವಾಗಿ ಸ್ಥಳಿತಗೊಳಿಸಲಾಗಿದೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...