NEWSಕೃಷಿ

ರೈತರಿಂದ ನೇರವಾಗಿ ಹಣ್ಣು, ತರಕಾರಿ ಮಾರಾಟಕ್ಕೆ ಕೆ.ಎಂ.ಎಫ್. ಮಳಿಗೆಗಳ ಹತ್ತಿರ ಸ್ಥಳಾವಕಾಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೈತರಿಂದ ನೇರವಾಗಿ ಹಣ್ಣು, ತರಕಾರಿ ಮಾರಾಟ ಮಾಡಲು ಕೆ.ಎಂ.ಎಫ್. ಮಳಿಗೆಗಳ ಹತ್ತಿರ ಸ್ಥಳಾವಕಾಶ ಎಂದು ತೋಟಗಾರಿಕೆ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕ ಮಹಾಂತೇಶ್ ಮುರುಗೋಡ್ ತಿಳಿಸಿದ್ದಾರೆ.

ಕೋವಿಡ್-19 ಸೋಂಕು ತಡೆಯಲು ಲಾಕ್ ಡೌನ್ ಜಾರಿಯಿರುವುದರಿಂದ ರೈತರು ಬೆಳೆದ ಹಣ್ಣು, ತರಕಾರಿಗಳಿಗೆ ಸೂಕ್ತ ಮಾರುಕಟ್ಟೆ ಇಲ್ಲದ ಕಾರಣ ಹಣ್ಣು, ತರಕಾರಿಗಳು ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ.

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (ಕೆ.ಎಂ.ಎಫ್.) ಸಂಸ್ಥೆ ಬೆಂಗಳೂರು ಹಾಗೂ ಇತರೆ ಜಿಲ್ಲಾ ಕೇಂದ್ರಗಳ ಮಾರಾಟ ಮಳಿಗೆಗಳಲ್ಲಿ ರೈತರು ನೇರವಾಗಿ ಅವರ ಉತ್ಪನ್ನಗಳಾದ ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಿದರೆ ಉತ್ತಮ ಬೆಲೆ ದೊರಕುತ್ತದೆ. ಆದ್ದರಿಂದ ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲು ಅವಕಾಶ  ನೀಡುವಂತೆ ತೋಟಗಾರಿಕೆ ಇಲಾಖೆಯಿಂದ  ಮನವಿ ಮಾಡಲಾಗಿತ್ತು ಎಂದು ಹೇಳಿದರು.

ಕೆ.ಎಂ.ಎಫ್. ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಇತ್ತಿಚೆಗೆ ಜರುಗಿದ ಸಭೆಯಲ್ಲಿ ಕೋವಿಡ್-19 ರ ತುರ್ತು ಪರಿಸ್ಥಿತಿಯಲ್ಲಿ ರೈತರು ಬೆಳೆದ ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲು ನಂದಿನಿ ಮಳಿಗೆ/ ಶಾಪಿ/ ಪಾರ್ಲರ್/ ಪ್ರಾಂಚೈಸಿಗಳಲ್ಲಿ ಸ್ಥಳಾವಕಾಶ ಮಾಡಿಕೊಡಲು ಸಹಮತ ವ್ಯಕ್ತವಾದ ಹಿನ್ನೆಲೆ, ರೈತರು ತಮ್ಮ ಹಣ್ಣು ಮತ್ತು ತರಕಾರಿಗಳನ್ನು ಕರ್ನಾಟಕ ರಾಜ್ಯಾದ್ಯಂತ ಇರುವ ಕೆ.ಎಂ.ಎಫ್ ನ ಎಲ್ಲಾ 14 ಜಿಲ್ಲಾ ಹಾಲು ಒಕ್ಕೂಟಗಳ 1500ಕ್ಕೂ ಹೆಚ್ಚು ನಂದಿನಿ ಮಳಿಗೆ/ ಶಾಪಿ/ ಪಾರ್ಲರ್/ ಪ್ರಾಂಚೈಸಿಗಳ ಮುಂದೆ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲು ಬರುವ ರೈತರಿಗೆ ಕೆ.ಎಂ.ಎಫ್. ಹಾಗೂ ಒಕ್ಕೂಟಗಳ ವತಿಯಿಂದ ಉಚಿತವಾಗಿ ದಿನವಹಿ, ಕುಡಿಯುವ ನೀರು, ಮಜ್ಜಿಗೆ, ಸ್ಯಾನಿಟೈಜರ್, ಕೈಗವಚ ಮತ್ತು‌ ಮಾಸ್ಕ್ ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು