NEWSಕೃಷಿ

ರೈತರಿಂದ ಹಣ್ಣು, ತರಕಾರಿ ನೇರ ಖರೀದಿ

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ರೈತರು ತಮ್ಮ ತೋಟದಲ್ಲಿ ಬೆಳೆದಿರುವ ಟೊಮ್ಯಾಟೋ, ಸೋರೆಕಾಯಿ, ಕುಂಬಳಕಾಯಿ, ನುಗ್ಗೆಕಾಯಿ, ಇತರೆ ಎಲ್ಲಾ ತರಕಾರಿಗಳನ್ನು ಜಿಲ್ಲಾ ತೋಟಗಾರಿಕೆ, ಹಾಪ್‌ಕಾಮ್ಸ್ ಹಾಗೂ ಹನಿಮಿತ್ರ ಸಂಸ್ಥೆಯಿಂದ ನೇರವಾಗಿ ಖರೀದಿಸಿ ಗ್ರಾಹಕರ ಮನೆ-ಮನೆಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಬುಧವಾರ ತುಮಕೂರಿನ ಪ್ರವಾಸಿ ಮಂದಿರದಲ್ಲಿ ಹಣ್ಣು, ತರಕಾರಿಗಳ ಮಾರಾಟದ  ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು.

ತುಮಕೂರು ಫುಡ್‌ಪಾರ್ಕ್ ವತಿಯಿಂದ ದಿನಬಿಟ್ಟು ದಿನ 100-150 ಟನ್‌ಗಳಷ್ಟು ಟಮೋಟೋಗಳನ್ನು ಖರೀದಿಸಿ ಸಂಸ್ಕರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ರೈತರು ಬೆಳೆದಿರುವ ಎಲ್ಲಾ ಹಣ್ಣು, ತರಕಾರಿಗಳನ್ನು ರೈತರ ತೋಟಗಳಿಂದಲೇ ನೇರವಾಗಿ ಖರೀದಿ ಮಾಡಿ ತಾಜಾ ಹಣ್ಣು ಮತ್ತು ತರಕಾರಿಗಳನ್ನು ನಗರ ಮತ್ತು ಗ್ರಾಮೀಣ ಭಾಗದ ಗ್ರಾಹಕರ ಮನೆ ಬಾಗಿಲಿಗೆ ರಿಯಾಯತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಹಣ್ಣು, ತರಕಾರಿ ಬೆಳೆದಿರುವ ಜಿಲ್ಲೆಯ ರೈತರು ಹಾಗೂ ಗ್ರಾಹಕರು ಈ ಟೋಲ್‌ಫ್ರೀ ದೂ.ವಾ.ಸಂ.0816-2275189 ಹಾಗೂ 2970310ಗೆ ಸಂಪರ್ಕಿಸಿ ಮಾರಾಟ ಹಾಗೂ ಖರೀದಿಯನ್ನು ಮಾಡಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಮಟ್ಟದಲ್ಲಿ ರೈತರು ಮತ್ತು ಗ್ರಾಹಕರು ತೋಟಗಾರಿಕೆ ಉಪನಿರ್ದೇಶಕರು ಹಾಗೂ ಎಲ್ಲಾ ತಾಲೂಕುಗಳ ತೋಟಗಾರಿಕೆ ಇಲಾಖೆಗಳ ಹಿರಿಯ ಸಹಾಯಕ ನಿರ್ದೇಶಕರು ನೋಡೆಲ್ ಅಧಿಕಾರಿಗಳಾಗಿದ್ದು, ಇವರನ್ನು ಸಂಪರ್ಕಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಸಚಿವರು ಮನವಿ ಮಾಡಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾಕಲ್ಯಾಣ್, ಉಪವಿಭಾಗಾಧಿಕಾರಿ ಅಜಯ್, ತೋಟಗಾರಿಕೆ ಇಲಾಖೆ ಜಂಟಿನಿರ್ದೇಶಕರಾದ ರಘು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಿಕಾ ಹಾಗೂ ಹನಿಮಿತ್ರ ಸಂಸ್ಥೆಯ ಮುಖ್ಯಸ್ಥರಾಗಿರುವ ನೀಲೇಶ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ