NEWSಕೃಷಿ

ರೈತರಿಗಾಗಿ ಸಿಎಂ ಬಿಎಸ್‌ವೈ ಭೇಟಿಯಾದ ಎಚ್.ಡಿ. ರೇವಣ್ಣ

ಕೂಲಿ ಕಾರ್ಮಿಕರಿಗೆ ಒಂದು ಕಂತಿನ ಸಹಾಯಧನವಾಗಿ ಪ್ರತಿ ಕುಟುಂಬಕ್ಕೆ 5,000 ರೂ. ಬಿಡುಗಡೆಗೆ ಮನವಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾಸನ: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಘೊಷಿಸಿರುವ ಹಿನ್ನೆಲೆಯಲ್ಲಿ  ಸಂಕಷ್ಟಕ್ಕೆ ಒಳಗಾಗಿರುವ ಜಿಲ್ಲೆಯ ಬಡವರು, ಬೀದಿ ಬದಿ ವ್ಯಾಪಾರಿಗಳು ಹಾಗೂ ರೈತರ ಸಂಕಷ್ಟ ಪರಿಹಾರಕ್ಕೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಕೋರಿ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಇಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಲಾಕ್ ಡೌನ್‍ನ್ನು ಮೇ 3 ರವರೆಗೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಾದ್ಯಂತ ಬೀದಿ ಬದಿ ವ್ಯಾಪಾರಿಗಳು, ಕೂಲಿ ಕಾರ್ಮಿಕರಿಗೆ ಒಂದು ಕಂತಿನ ಸಹಾಯಧನವಾಗಿ ಪ್ರತಿ ಕುಟುಂಬಕ್ಕೆ 5,000 ರೂ.ಗಳನ್ನು ಬಿಡುಗಡೆ ಮಾಡುವಂತೆ  ರೇವಣ್ಣ ಮನವಿ ಮಾಡಿದರು.

ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಇನ್ನೂ ಹೆಚ್ಚಿನ ಅನುದಾನವನ್ನು ನೀಡಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸಲು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರಲ್ಲದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ಒದಗಿಸಲಾದ ಟೆಸ್ಟಿಂಗ್ ಕಿಟ್ ಮತ್ತು ಪಿ.ಪಿ.ಇ ಮತ್ತು ಇತರೆ ಸಾಮಗ್ರಿಗಳನ್ನು ಹಾಸನ ಮೆಡಿಕಲ್ ಕಾಲೇಜಿಗೂ ನೀಡಬೇಕೆಂದು ಕೋರಿದ್ದಾರೆ.

ಮುಂಬೈ, ಬೆಂಗಳೂರು ಮತ್ತು ಇತರೆ ನಗರಗಳಿಂದ ಉದ್ಯೋಗ ಕಳೆದುಕೊಂಡು ತಮ್ಮ ತಮ್ಮ ಹಳ್ಳಿಗಳಿಗೆ ವಾಪಸಾಗಿರುವ ಸಾವಿರಾರು ಕಾರ್ಮಿಕರಿಗೆ ತಕ್ಷಣದಲ್ಲಿ ಪಡಿತರ ಚೀಟಿ ವಿತರಿಸಿ ಪಡಿತರ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರಲ್ಲದೆ, ಪ್ರಸ್ತುತ ಸರ್ಕಾರದಿಂದ ಪ್ರತಿ ವ್ಯಕ್ತಿಗೆ ಮಾಹೆಯಾನ ನೀಡುತ್ತಿರುವ 5 ಕೆ.ಜಿ ಅಕ್ಕಿಯನ್ನು 10 ಕೆ.ಜಿ. ಗಳಿಗೆ ಮತ್ತು 2 ಕೆ.ಜಿ. ಗೋಧಿಯನ್ನು 4 ಕೆ.ಜಿ.ಗೆ ಹೆಚ್ಚಿಸಲು ತುರ್ತು ಆದೇಶ ನೀಡಬೇಕೆಂದು  ಕೋರಿಕೆ ಸಲ್ಲಿಸಿದರು.

ರಾಜ್ಯದಲ್ಲಿ ಆಲೂಗೆಡ್ಡೆ ಬೆಳೆ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಮುಂಗಾರು ಹಂಗಾಮಿನಲ್ಲಿ ಹಾಸನ, ಚಿಕ್ಕಮಗಳೂರು, ಧಾರವಾಡ, ಬೆಳಗಾವಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹಾಗೂ ಹಿಂಗಾರು ಹಂಗಾಮಿನಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ.

ಆಲೂಗೆಡ್ಡೆ ಬೆಳೆಗೆ ಒಟ್ಟು ಉತ್ಪಾದನಾ ವೆಚ್ಚದಲ್ಲಿ ಬಿತ್ತನೆ ಬೀಜಕ್ಕೆ ಶೇ.30 ರಿಂದ 40 ರಷ್ಟು ವೆಚ್ಚವನ್ನು ವ್ಯಯಿಸಬೇಕಾಗಿರುತ್ತದೆ. ಆಲೂಗೆಡ್ಡೆ ಬೆಳೆಯು ಹಲವಾರು ರೋಗ ಮತ್ತು ಕೀಟಗಳಿಗೆ ತುತ್ತಾಗುವ ಬೆಳೆಯಾಗಿದ್ದು, ಅಂಗಮಾರಿ ರೋಗ, ದುಂಡಾಣು ರೋಗ, ನಂಜು ರೋಗ ಹಾಗೂ ನುಸಿ ಕೀಟ ಬಾಧೆ ಆಲೂಗೆಡ್ಡೆ ಬೆಳೆಗೆ ಹೆಚ್ಚಾಗಿ ಬಾಧಿಸುತ್ತಿವುದರಿಂದ ಬೆಳೆ ಹಾನಿಯಾಗುತ್ತಿರುವ ಕಾರಣ ಆಲೂಗೆಡ್ಡೆ ಬೆಳೆಗಾರರು ನಷ್ಟವನ್ನು ಅನುಭವಿಸುತ್ತಿರುತ್ತಾರೆ.

ಬೆಳೆನಷ್ಟದ ಜೊತೆಗೆ 2019-20ನೇ ಮುಂಗಾರು ಹಂಗಾಮಿನಲ್ಲಿ ಬಿದ್ದ ಅತಿಯಾದ ಮಳೆಯಿಂದಾಗಿ ಆಲೂಗೆಡ್ಡೆ ಬೆಳೆಯು ಹಾನಿಗೊಳಗಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುತ್ತಾರೆ. ಅಲ್ಲದೇ ಈ ಬೇಸಿಗೆ ಹಂಗಾಮಿನಲ್ಲಿ ರೈತರು ಬೆಳೆದ ತರಕಾರಿ ಬೆಳೆಗಳನ್ನು ಕೋವಿಡ್-19 ವೈರಸ್ ಸೋಂಕಿನಿಂದಾಗಿ ಇಡೀ ದೇಶವನ್ನೇ ಬಂದ್ ಮಾಡಲಾಗಿರುವುದರಿಂದ ಸರಿಯಾಗಿ ಮಾರುಕಟ್ಟೆ ಲಭ್ಯವಿಲ್ಲದೆ ಹಾಗೂ ಸಾಗಾಣಿಕೆ ತೊಂದರೆಗಳಿಂದಾಗಿ ಪ್ರಸಕ್ತ ವರ್ಷದಲ್ಲಿ ರೈತರು ತೀವ್ರತರವಾದ ನಷ್ಟ ಅನುಭವಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆಲೂಗೆಡ್ಡೆ ಬೆಳೆಗಾರರ ಮೇಲೆ ಬೀಳುವ ಆರ್ಥಿಕ ಹೊರೆಯನ್ನು ತಗ್ಗಿಸುವ ಉದ್ದೇಶದಿಂದ ಸರ್ಕಾರದ ವತಿಯಿಂದ ರಾಜಾದ್ಯಂತ ಆಲೂಗೆಡ್ಡೆ ಬೆಳೆ ಬೇಸಾಯದಲ್ಲಿ ತೊಡಗಿರುವ ರೈತರಿಗೆ ಶೇ. 50 ರಂತೆ ಬಿತ್ತನೇ ಬೀಜ ಮತ್ತು ಸಸ್ಯ ಸಂರಕ್ಷಣಾ ಔಷಧಿಗಳ ಖರೀದಿಗಾಗಿ ಸಹಾಯಧನ ಸೌಲಭ್ಯವನ್ನು ಒದಗಿಸುವಂತೆ ಕೇಳಿಕೊಂಡರು.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬೇಸಿಗೆಯಲ್ಲಿ ರಸವತ್ತಾದ ಕಬ್ಬನ್ನು ಹಿಂಡಿ ಕಬ್ಬಿನ ಹಾಲನ್ನು ತಯಾರಿಸುವ ಕಬ್ಬನ್ನು ಸುಮಾರು 3,600 ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದು, ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಈ ಕಬ್ಬನ್ನು ಕಟ್ಟಾವು ಮಾಡದೆ ಬಲಿತ್ತು ಒಣಗಿ ಹೋಗಿ ರೈತರು ಈ ಬೆಳೆಗೆ ಬೆಂಕಿ ಹೆಚ್ಚುವ ಪರಿಸ್ಥಿತಿ ಎದುರಾಗಿದೆ. ಕಬ್ಬು ಬೆಳೆಗೆ ಸರ್ಕಾರದಿಂದ ಪ್ರತಿ ಎಕರೆಗೆ ಕನಿಷ್ಠ 50,000 ರೂ.ಗಳನ್ನು ಪರಿಹಾರ ಘೋಷಿಸುವಂತೆ  ಮನವಿ ಮಾಡಿದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್