NEWSಕೃಷಿನಮ್ಮಜಿಲ್ಲೆ

ರೈತರ ಬಳಿಯೇ ಉತ್ಪನ್ನ ಖರೀದಿಗೆ ಕ್ರಮ

ಬೆಳೆಗಾರರಿಗೆ ತೊದರೆ ಆಗದಂತೆ ಎಚ್ಚರಿಕೆ l ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ : ಬಹುತೇಕ ಮಾರುಕಟ್ಟೆಗಳು ಹೊರ ರಾಜ್ಯದಲ್ಲಿ ಇರುವದರಿಂದ ಸ್ಥಳೀಯ ರೈತರ ಕೃಷಿ ಉತ್ಪನ್ನಗಳ ಖರೀದಿಗೆ ಕ್ರಮಕೈಗೊಳ್ಳುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಕೋವಿಡ್ ಕುರಿತು ಕೃಷಿ ಹಾಗೂ ಇತರೆ ಇಲಾಖೆಯ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಸರಕಾರ ರೈತರ ಪರವಾಗಿದ್ದು, ಸಮಾಜದ ಒಳಿತಿಗಾಗಿ ಸಾಮಾಜಿಕ ಕರ್ಫ್ಯೂ ಹೇರಲಾಗಿದೆ. ಮುಂಗಾರು ಆರಂಭಗೊಳ್ಳುವುದರಲ್ಲಿ ರೈತರಿಗೆ ಬೇಕಾದ ಬಿತ್ತನೆ ಬೀಜ, ಗೊಬ್ಬರಗಳ ತೊಂದರೆ ನಿವಾರಿಸಲಾಗುವುದೆಂದು ತಿಳಿಸಿದರು.

ಲಾಕ್‍ಡೌನ್‍ನಿಂದ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿರುವದಿಲ್ಲ. ಉತ್ಪನ್ನ ಸಾಗಾಟಗಾರರಿಗೆ ಗ್ರೀನ್ ಪಾಸ್ ನೀಡಲಾಗುತ್ತಿದೆ. ಹೊರ ರಾಜ್ಯಕ್ಕೆ ಕಳುಹಿಸುವವರಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಪರವಾನಿಗೆ ನೀಡಲಾಗುತ್ತಿದೆ. ಕಳೆದೆರಡು ದಿನಗಳಿಂದ ಸಾಗಾಣಿಕೆ ಆಗುತ್ತಿದೆ. ರಾಜ್ಯದಲ್ಲಿ ಏಪ್ರೀಲ್ 14 ರವರೆಗೆ 8 ಲಕ್ಷ ಲೀಟರ್ ಹಾಲು ವಿತರಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಕೃಷಿ ಚಟುವಟಿಕೆಗಳ ಅಭಿವೃದ್ದಿಗೆ 10 ಕೋಟಿ ರೂ.ಗಳ ಅನುದಾನವನ್ನು ಕೃಷಿ ಸಚಿವರಲ್ಲಿ ಬೇಡಿಕೆ ಇಟ್ಟರು. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ 1 ಸಾವಿರ ಹಾಗೂ ಬಡವರಿಗಾಗಿ ಹಾಲು ವಿತರಿಸಲು ಜಿಲ್ಲಾವಾರು ಬೇಡಿಕೆಗೆ ಅನುಸಾರ ಹಂಚಿಕೆ ಮಾಡಲು ಸಚಿವರಿಗೆ ತಿಳಿಸಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಮಾತನಾಡಿ, ರೈತರ ಉತ್ಪನ್ನಗಳು ಹಾಪ್‍ಕಾಮ್ಸ್‍ನಿಂದ ಹೆಚ್ಚಿನ ಖರೀದಿಯಾಗಬೇಕು. ಮುಧೋಳ ಮತ್ತು ಬಾಗಲಕೋಟೆಯಲ್ಲಿಯು ಖರೀದಿ ಕೇಂದ್ರ ಪ್ರಾರಂಭಿಸಬೇಕು. ದ್ರಾಕ್ಷಿ ಮತ್ತು ದಾಳಿಂಬೆ ಹಾಳಾಗದಂತೆ ನೋಡಿಕೊಳ್ಳಬೇಕು. ಕಳದೆರಡು ದಿನದಿಂದ ರೈತನೋಬ್ಬನ ಉತ್ತಮ ಬೆಳೆಯನ್ನು ಸಾಗಾಟವಾಗಿದೆ. ಮೌಲ್ಯವರ್ದನೆಗೆ ಕ್ರಮಕೈಗೊಳ್ಳುವಂತೆ ಸಚಿವರಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ ಕೃಷಿ ಮತ್ತು ತೋಟಗಾರಿಕೆ ಅಧಿಕಾರಿ ಹಾಗೂ ಸಿಬ್ಬಂದಿಯ ಕ್ಷೇತ್ರ ಪ್ರವಾಸ ಮಾಡಿಸಿ ತಾಲೂಕುವಾರು ಬೆಳೆ, ರೈತರ ಸಂಪರ್ಕ ಹಾಗೂ ಮೊಬೈಲ್ ಸಂಖ್ಯೆಯ ಪಟ್ಟಿಯನ್ನು ಮಾಡಲಾಗಿದೆ. ರೈತರ ಕಲ್ಲಂಗಡಿ ಹಾನಿಯಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರವಾಸವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡು ಕ್ರಮಕೈಗೊಳ್ಳಲಾಗಿದೆ ಎಂದರು. ರೈತರ ಉತ್ಪನ್ನಗಳನ್ನು ಮಾರಾಟ ಮಾಡಲು ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಪ್ರಭುರಾಜ ಹಿರೇಮಠ ಮಾತನಾಡಿ, ಏಪ್ರೀಲ್ 15 ವರೆಗೆ 15 ಸಾವಿರ ಟನ್ ವಿವಿಧ ಬೆಳೆವಾರು ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಕಲ್ಲಂಗಡಿ ದರ ಕುಸಿದಿದ್ದು, 600 ಹೆಕ್ಟೇರ್‌ಗಳಲ್ಲಿ ಕಲ್ಲಂಗಡಿ ಬೆಳೆಯಲಾಗಿದೆ. ಏಪ್ರೀಲ್ 13 ವರೆಗೆ 13 ಸಾವಿರ ಟನ್ ಆಗಲಿದೆ. ಮತ್ತು ದಾಳಿಂಬೆ 836 ಟನ್ ಲಭ್ಯವಿದ್ದು, ಮಾರುಕಟ್ಟೆಗೆ ಲಿಂಕ್ ಮಾಡಲು ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದರು.

ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕರಾದ ವೀರಣ್ಣ ಚರಂತಿಮಠ, ಮುರುಗೇಶ ನಿರಾಣಿ, ಸಿದ್ದು ಸವದಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ