Please assign a menu to the primary menu location under menu

NEWSನಮ್ಮರಾಜ್ಯ

ಲಂಚ ಪಡೆದ ಸಾರಿಗೆ ಅಧಿಕಾರಿಗಳ ಅಮಾನತು

2,350 ರೂ. ನಗದು ವಶ  l ಇಬ್ಬರು ಬ್ರೇಕ್ ಇನ್ಸ್ ಪೆಕ್ಟರ್ ಗಳು ಅಮಾನತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರ ಜಿಲ್ಲೆಯ ಆನೇಕಲ್ ತಾಲೂಕು, ಅತ್ತಿಬೆಲೆ ಚೆಕ್ ಪೋಸ್ಟ್ ನಲ್ಲಿ ನಿನ್ನೆ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್ ಪೆಕ್ಟರ್ ಗಳನ್ನು ಜಿಲ್ಲಾಧಿಕಾರಿ ಜಿ .ಎನ್ . ಶಿವಮೂರ್ತಿ ಅಮಾನತು ಮಾಡಿದ್ದಾರೆ.

ಚೆಕ್ ಪೋಸ್ಟ್ ಮೂಲಕ ಹಾದು ಹೋಗುವ ಎಲ್ಲಾ ಸಾರ್ವಜನಿಕರನ್ನು ತಪಾಸಣೆ ಮಾಡುವುದು ಹಾಗೂ ಚೆಕ್ ಪೋಸ್ಟ್‍ಗಳಲ್ಲಿ ಜೀವನಾವಶ್ಯಕ ವಸ್ತುಗಳಾದ ಹಾಲು, ಪಡಿತರ ದವಸ ಧಾನ್ಯಗಳು ಹಣ್ಣು ಮತ್ತು ತರಕಾರಿ, ಪೆಟ್ರೋಲ್, ಡೀಸೆಲ್, ಮತ್ತು ಔಷಧಿಗಳನ್ನು ಮಾತ್ರ ಸಾಗಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಮಾರುಕಟ್ಟೆಗೆ ಸಾಗಿಸುತ್ತಿದ್ದ ವಾಹನವನ್ನು ತಡೆಗಟ್ಟಿ ವಾಹನ ಚಾಲಕರಿಂದ ಹಣವನ್ನು ವಸೂಲಿ ಮಾಡುತ್ತಿರುವುದನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ಪೊಲೀಸ್ ಅಧೀಕ್ಷಕರು ಹಾಗೂ ಬೆಂಗಳೂರು ನಗರ ಸಹಾಯಕ ಪೊಲೀಸ್ ಅಧೀಕ್ಷಕರು ಪರಿಶೀಲಿಸಿ ನೌಕರರ ವಿರುದ್ದ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬ್ರೇಕ್ ಇನ್ಸ್ ಪೆಕ್ಟರ್‍ಗಳಾದ ಟಿ. ಕೆ ಜಯಣ್ಣ ಹಾಗೂ ಕರಿಯಪ್ಪ ಸೇರಿದಂತೆ ಇವರೊಂದಿಗೆ ಶಾಮೀಲಾಗಿದ್ದ ಮಾಜಿ ಹೋಮ್ ಗಾರ್ಡ್ ವಿವೇಕ್ ಅವರನ್ನು ಚಾಲಕರಿಂದ ಲಂಚ ಪಡೆದ ಹಿನ್ನೆಲೆ ಅಪರ ಪೊಲೀಸ್ ಅಧೀಕ್ಷಕ ಸಜಿತ್ ಅವರು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಈ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕರಿಯಪ್ಪ ಅವರಿಂದ 1250 ರೂ. ಜಯಣ್ಣ ಅವರಿಂದ 1100 ರೂ.  ಹಾಗೂ ವಿವೇಕ್ ಅವರಿಂದ  800 ರೂ.  ಹಾಗೂ ಚೆಕ್ ಪೋಸ್ಟ್ ಕಚೇರಿಯಲ್ಲಿ  12350 ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು  ಮಾಹಿತಿ ನೀಡಿದ್ದಾರೆ.

Leave a Reply

error: Content is protected !!
LATEST
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ 2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್ KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?