ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ ಮಂಡಳಿಗಳಲ್ಲಿ ಗುತ್ತಿಗೆ ಹೊರಗುತ್ತಿಗೆ ಮತ್ತು ದಿನಗೂಲಿ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ವೇತನ ತಡೆಹಿಡಿಯ ಬಾರದು ಎಂದು ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.
vijayapatha.in - ವಿಜಯಪಥ.ಇನ್ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ. ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ.
ಕಳೆದ ಮಾರ್ಚ್‌ನಿಂದ ಉಂಟಾದ ಲಾಕ್ ಡೌನ್ ಅವಧಿಯ ವೇತನ ತಡೆ ಹಿಡಿಯುವಂತಿಲ್ಲ ಎಂದು ಆರ್ಥಿಕ ಇಲಾಖೆಯ ಉಪಕಾರ್ಯದರ್ಶಿ ಎಚ್. ಶೋಭಾ ಸುತ್ತೋಲೆ ಹೊರಡಿಸಿದ್ದಾರೆ.
ಮಾರ್ಚ್ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಲಾಕ್ ಡೌನ್ ಜಾರಿಯಲ್ಲಿತ್ತು ಈ ಅವಧಿಯಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಕೆಲವು ನೌಕರರು ಕರ್ತವ್ಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ.
ಇದೇ ಕಾರಣಕ್ಕೆ ಕೆಲವು ಇಲಾಖೆಗಳಲ್ಲಿ ಗೈರಾದ ಅವಧಿಯಲ್ಲಿ ವೇತನ ಪಾವತಿ ನಿರಾಕರಿಸಲಾಗಿದೆ. ಅದನ್ನು ಗಮನಿಸಿದ ರಾಜ್ಯ ಸರಕಾರ ಇದೀಗ ಸುತ್ತೋಲೆ ಹೊರಡಿಸಿ ಕೇಂದ್ರ ಸರ್ಕಾರದ ಅಧಿಕೃತ ಜ್ಞಾಪನ ಪತ್ರದ ಪ್ರಕಾರ ವೇತನ ತಡೆ ಹಿಡಿಯದೆ ಪಾವತಿಸಬೇಕೆಂದು ನಿರ್ದೇಶನ ನೀಡಿದೆ.
ಇದಕ್ಕೂ ಮೊದಲು ರಾಜ್ಯದ ವಿವಿಧೆಡೆ ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪರಿಶೀಲಿಸಿದ ಸರ್ಕಾರ ಎಲ್ಲರಿಗೂ ವೇತನ ನೀಡುವಂತೆ ಆದೇಶ ಹೊರಡಿಸಿದ್ದು, ಇದರಿಂದ ನೌಕರರು ಸಂತಸ ವ್ಯಕ್ತಪಡಿಸಿದ್ದಾರೆ.