CrimeNEWSಬೆಂಗಳೂರು

ಲಾರಿಗಳ ನಡುವೆ ಭೀಕರ ಅಪಘಾತ : ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಎರಡು ಲಾರಿಗಳ ನಡುವೆ ಸಂಭವಿಸಿದ  ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಈ ಘಟನೆಯಲ್ಲಿ ರಾಜಸ್ಥಾನ ಮೂಲದ ಚಾಲಕ ಅಬ್ಬಾಸ್ (39) ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಒಂದು ಲಾರಿ ಹುಮ್ನಾಬಾದ್ ಕಡೆಯಿಂದ ಕಲಬುರಗಿಗೆ ಬರುತ್ತಿತ್ತು. ಇನ್ನೊಂದು ಲಾರಿ ಜೇವರ್ಗಿಯಿಂದ ಹುಮ್ನಾಬಾದ್ ಕಡೆಗೆ ತೆರಳುತ್ತಿತ್ತು.

ಈ ವೇಳೆ ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ಅವಘಡದಿಂದ ಲಾರಿಗಳ ಮುಂಭಾಗ ಛಿದ್ರ ಛಿದ್ರವಾಗಿದೆ. ಅಲ್ಲದೆ ಲಾರಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ