VIJAYAPATHA.IN > ವಿಜಯಪಥ > NEWS > Crime > ಲಾರಿಗಳ ಮುಖಾಮುಖಿ ಡಿಕ್ಕಿಯಲ್ಲಿ 23 ವಲಸೆ ಕಾರ್ಮಿಕರು ಮೃತ
ಔರಯ: ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಾಗಿ 23 ವಲಸೆ ಕಾರ್ಮಿಕರು ಧಾರುಣವಾಗಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಔರಯದಲ್ಲಿ ನಡೆದಿದೆ.
ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ರಾಜಸ್ತಾನದಿಂದ ಉತ್ತರ ಪ್ರದೇಶದಕ್ಕೆ ಟ್ರಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ.
ಮುಂಜಾನೆ ಸುಮಾರು 3.30 ರ ವೇಳೆಗೆ ನಡೆದ ಅಪಘಾತದಲ್ಲಿ 23 ಮಂದಿ ಸಾವನ್ನಪ್ಪಿ, 15ರಿಂದ 20 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇವರೆಲ್ಲಾ ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ಮೂಲದವರೆಂದು ತಿಳಿದು ಬಂದಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
![](https://vijayapatha.in/wp-content/uploads/2024/02/QR-Code-VP-1-1-300x62.png)
Related
admin.savhn
Leave a reply