NEWSಕೃಷಿ

ಲಾಕ್‍ಡೌನ್ ನಂತರ ರೈತರಿಗೆ ನೂತನ ಪ್ಯಾಕೇಜ್ ನಿರೀಕ್ಷೆ

ಕೋವಿಡ್ ನಿಯಂತ್ರಣ ಜಿಲ್ಲಾಡಳಿತಕ್ಕೆ ಅಭಿನಂದನೆ l ಸಂಸದ ಶಿವಕುಮಾರ ಉದಾಸಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕೋವಿಡ್ ಲಾಕ್‍ಡೌನ್‍ನಿಂದ ತೊಂದರೆಗೊಳಗಾದ ರೈತಾಪಿ ಜನರಿಗೆ ಹೊಸ ಪ್ಯಾಕೇಜ್ ಘೋಷಣೆ ಕುರಿತಂತೆ ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗಮನ ಸೆಳೆಯಲಾಗಿದೆ. ಮೇ 3ರ ನಂತರ ನೂತನ ಪ್ಯಾಕೇಜ್ ಘೋಷಣೆ ನಿರೀಕ್ಷಿಸಲಾಗಿದೆ ಎಂದು ಸಂಸದ ಶಿವಕುಮಾರ ಉದಾಸಿ  ತಿಳಿಸಿದರು.

ಹಾವೇರಿ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಗೋವಿನಜೋಳ ಬೆಂಬಲಬೆಲೆಯಡಿ ಖರೀದಿಮಾಡುವ ಕುರಿತಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಗೋವಿನಜೋಳ ಹೆಚ್ಚು ಬೆಳೆಯುವ ರಾಜ್ಯದ ಹಾವೇರಿ, ದಾವಣಗೆರೆ, ಗದಗ, ಧಾರವಾಡ, ಶಿವಮೊಗ್ಗ ಜಿಲ್ಲೆಗಳ ರೈತರಿಂದ ಬೆಂಬಲಬೆಲೆಯಡಿ ಖರೀದಿಗೆ ವಿಶೇಷ ಪ್ಯಾಕೇಜ್‍ಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಲಾಕ್‍ಡೌನ್ ಅವಧಿಯಲ್ಲಿ ಉದ್ಯೋಗ ಅರಸಿ ಬೇರೆ ರಾಜ್ಯ ಮತ್ತು ಜಿಲ್ಲೆಗಳಿಂದ ಹಾವೇರಿ ಜಿಲ್ಲೆಯಲ್ಲಿ   ಉಳಿದಿರುವ ಕಾರ್ಮಿಕರು ಹಾಗೂ ಹಾವೇರಿ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಉಳಿದುಕೊಂಡಿರುವ ಕಾರ್ಮಿಕರು ತಮ್ಮ ತಮ್ಮ ಸ್ವಂತ ಗ್ರಾಮಕ್ಕೆ ತೆರಳುವ ಅಪೇಕ್ಷೆ ಹೊಂದಿದ್ದಾರೆ. ಮೇ 3ರ ನಂತರ ಸಾಮಾಜಿಕ ಅಂತರ ಕಾಯ್ದುಕೊಂಡು ಅವರವರ ಗ್ರಾಮಗಳಿಗೆ ಕಳುಹಿಸುವ ಕುರಿತಂತೆ ಚರ್ಚಿಸಲಾಗುತ್ತದೆ.  ರೈಲು, ಬಸ್ಸುಗಳಲ್ಲಿ ಸಾಮಾಜಿಕ ಅಂತರದಲ್ಲಿ ಆಸನ ವ್ಯವಸ್ಥೆಮಾಡಿ ಅವರವರ ಊರಿಗೆ ಕಳುಹಿಸುವುದು, ತಮ್ಮ ಗ್ರಾಮ ತಲುಪಿದ ಮೇಲೆ ನಿಯಮಾನುಸಾರ ಗೃಹಪ್ರತ್ಯೇಕತೆಯಲ್ಲಿ ಇರಿಸುವ ಕುರಿತಂತೆ ತೀರ್ಮಾನಿಸಲಾಗುವುದು ಎಂದು ಹೇಳಿದರು.

ರೈತರ ಸಾಲದ ಕಂತುಗಳನ್ನು ಮೂರು ತಿಂಗಳು ಮುಂದೂಡುವ ಕುರಿತಂತೆ ಈಗಾಗಲೇ ಚಚಿಸಲಾಗಿದೆ. ಲಾಕ್‍ಡೌನ್‍ನಿಂದ ಮೆಣಸಿನಕಾಯಿ ವ್ಯಾಪಾರಿಗಳು, ದಲ್ಲಾಳಿಗಳಿಗೆ ಉಂಟಾಗಿರುವ ತೊಂದರೆ ಕುರಿತಂತೆ ಈಗಾಗಲೇ ಚರ್ಚಿಸಲಾಗಿದೆ. ಬ್ಯಾಂಕ್‍ಗಳೊಂದಿಗೆ ಚರ್ಚಿಸಿ ಓಓಡಿ ನೀಡುವಂತೆ ಸಲಹೆ ಮಾಡಲಾಗಿದೆ. ಬ್ಯಾಡಗಿ ಮಾರುಕಟ್ಟೆಗೆ ಹೊರರಾಜ್ಯಗಳಿಂದ ಬರುವ ಚಾಲಕರು, ಹಮಾಲರಿಗೆ ವೈದ್ಯಕೀಯ ತಪಾಸಣೆಯನ್ನು ತೀವ್ರಗೊಳಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ,  ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಜಿಲ್ಲಾ ಪಂಚಾಯತ್ ಸದಸ್ಯ ಸಿದ್ಧರಾಜ ಕಲಕೋಟಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ