CrimeNEWSಬೆಂಗಳೂರು

ವೇಗವಾಗಿ ಬಂದ ಬಸ್‌ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ಪಕ್ಕದ ರಸ್ತೆಗೆ ಹಾರಿ ಕಾರಿಗೆ ಡಿಕ್ಕಿ : ಸ್ಥಳದಲ್ಲೇ ಐವರು ಮೃತ, 8 ಮಂದಿಗೆ ತೀವ್ರ ಗಾಯ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ವೇಗವಾಗಿ ಬಂದ ಖಾಸಗಿ ಬಸ್ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ಪಕ್ಕದ ರಸ್ತೆಗೆ ಹಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, 8ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿರುವ ಧಾರುಣ ಘಟನೆ ಹಿರೇಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದಿದೆ.

ಗೋವಿಂದ ನಾಯಕ (58), ತಿಪ್ಪಮ್ಮ, (52), ದಿನೇಶ್ (12), ಪಿಂಕಿ (15) ಹಾಗೂ ಕುಣಿಗಲ್ ತಾಲೂಕಿನ ನಿವಾಸಿ ಕಾರು ಚಾಲಕ ರಾಜೇಶ್ ಎಂಬುವರು ಮೃತಪಟ್ಟಿದ್ದು, ಮೃತ ಗೋವಿಂದ ನಾಯಕ ಅವರು ಮೂಲತಃ ಚಳ್ಳಕೆರೆ ತಾಲೂಕಿನ ನಿವಾಸಿಯಾಗಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿ ಪತ್ನಿ ಜತೆ ವಾಸವಿದ್ದರು.

ಶಿರಾ ಕಡೆಯಿಂದ ಬೆಂಗಳೂರು ಮಾರ್ಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕದಿಂದ ಹಾರಿ ಬೆಂಗಳೂರು ಕಡೆಯಿಂದ ಜಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದವರ ಪೈಕಿ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ.

ಬಸ್‌ನಲ್ಲಿ ಸುಮಾರು 30 ಮಂದಿ ಪ್ರಯಾಣಿಸುತ್ತಿದ್ದು, ಈ ಪೈಕಿ ಶ್ರೀಕಂಠಪ್ಪ, ಮಂಜುನಾಥ್, ಬುಡ್ಡಮ್ಮ, ಭಾಗ್ಯಮ್ಮ ಸೇರಿದಂತೆ 8ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿಗೆ ಡಿಕ್ಕಿ ಹೊಡೆದ ನಂತರ ಬಸ್ ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರಕ್ಕೆ ಅಪ್ಪಳಿಸಿ ನಿಂತಿದೆ.

ರಸ್ತೆ ವಿಭಜಕ ಹಾರಿ ಬಸ್ ಅಪ್ಪಳಿಸಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗ ಸಹ ಜಖಂಗೊಂಡಿದೆ. ಘಟನೆಯ ಸುದ್ದಿ ತಿಳಿದ ಕೂಡಲೇ ಕ್ಯಾತ್ಸಂದ್ರ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಹೊರ ತೆಗೆದು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಸಾಗಿಸಿದರು.

ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಕೆಲಹೊತ್ತು ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಕಾರ್ಯಪ್ರವೃತ್ತರಾಗಿ ಅಪಘಾತಕ್ಕೀಡಾಗಿದ್ದ ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಘಟನೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಶ್ರೀನಿವಾಸ್ ಹಾಗೂ ಕ್ಯಾತ್ಸಂದ್ರ ಸಿಪಿಐ ಚನ್ನೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್