ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಶಾಲಾ ವಿದ್ಯಾರ್ಥಿಗಳ ಮೇಲೆ ನುಗ್ಗಿದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಬಳಿ ನಡೆದಿದೆ.
ಇಷ್ಟಾದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಕೆಲ ವಿದ್ಯಾರ್ಥಗಳು ಗಾಯಗೊಂಡಿ ಆ ಗಾಯಗೊಂಡ ವಿದ್ಯಾರ್ಥಿಗಳನ್ನು ಕಬ್ಬಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.
ಗುರುವಾರ ಬೆಳಗ್ಗೆ ಎಂದಿನಂತೆ ಸೋಮಹಳ್ಳಿ ಗ್ರಾಮದಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಡೆಗೆ ಕೊಡಗಾಪುರ ಗ್ರಾಮದ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಏಕಾಏಕಿ ವಿದ್ಯಾರ್ಥಿಗಳಿದ್ದ ಕಡೆಗೆ ನುಗ್ಗಿದ ಪರಿಣಾಮ ತಪ್ಪಿಸಿಕೊಳ್ಳಲು ವಿದ್ಯಾರ್ಥಿಗಳು ಓಡಿದ್ದಾರೆ.
ಈ ವೇಳೆ ಒಬ್ಬ ವಿದ್ಯಾರ್ಥಿಗೆ ತಲೆ ಮತ್ತು ಮುಖದ ಭಾಗಕ್ಕೆ ತೀವ್ರತರವಾದ ಗಾಯವಾಗಿದ್ದು, ಕೂಡಲೇ ಕಬ್ಬಹಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ವಿದ್ಯಾರ್ಥಿಗಳ ಈ ಸ್ಥಿತಿಗೆ ಕಾರಣವಾದ ಬಸ್ ಚಾಲಕನ ವಿರುದ್ಧ ಪೋಷಕರು ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)