NEWSನಮ್ಮಜಿಲ್ಲೆಸಂಸ್ಕೃತಿ

ವಿದ್ಯಾರ್ಥಿ ಜೀವನದಿಂದಲೇ ಕನ್ನಡ ಭಾಷೆ, ಸಾಹಿತ್ಯ, ನೆಲ, ಜಲ ಪ್ರೀತಿಸಿ : ನಿವೃತ್ತ ಅಧ್ಯಾಪಕ ಶಿವಣ್ಣ ಇಂದ್ವಾಡಿ ಕರೆ

ವಿಜಯಪಥ ಸಮಗ್ರ ಸುದ್ದಿ

ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ವಿದ್ಯಾರ್ಥಿ ಜೀವನದಿಂದಲೇ ಕನ್ನಡ ಭಾಷೆ, ಸಾಹಿತ್ಯ, ನೆಲ, ಜಲವನ್ನು ಪ್ರೀತಿಸಿ ಎಂದು ಸಾಹಿತಿ ಹಾಗೂ ನಿವೃತ್ತ ಅಧ್ಯಾಪಕ ಶಿವಣ್ಣ ಇಂದ್ವಾಡಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಹನೂರು ಪಟ್ಟಣದ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿದ್ದ ಜನಪದ ವಿದ್ವಾಂಸ ಡಾ. ಕೃಷ್ಣಮೂರ್ತಿ ಹನೂರು ಅವರ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯಾವುದೇ ಶಿಕ್ಷಣ ಪದವಿ ಪಡೆಯದೆ ನಮ್ಮ ಜನಪದರು ಮಲೆ ಮಹದೇಶ್ವರ, ಮಂಟೇಸ್ವಾಮಿ ಮತ್ತು ಬಿಳಿಗಿರಿರಂಗನ ಕಾವ್ಯಗಳನ್ನು ಕಟ್ಟಿದ್ದಾರೆ. ನಮ್ಮ ಗ್ರಾಮೀಣ ಭಾಗದಲ್ಲಿರುವ ಅಜ್ಜ ಅಜ್ಜಿಯಂದಿರಲ್ಲಿ ಭಾಷಿಕ ಜ್ಞಾನ ಸಾಕಷ್ಟು ಅಡಗಿದ್ದು ಅವರು ನಿಧನರಾದರೆ ಗ್ರಂಥಾಲಯವೇ ನಾಶವಾದ ರೀತಿ ಎಂದು ವಿಷಾದ ವ್ಯಕ್ತಪಡಿಸಿದರು.

ಪರಸ್ಪರ ಸಂಬಂಧ ಬೆಳೆಸುವ ಮಕ್ಕಳ ಕಥೆ, ಲಾಲಿಪದ, ಹೊಲಗದ್ದೆಗಳಲ್ಲಿ ಹಾಡುವ ಜಾನಪದ ಹಾಡುಗಳು ಇಂದು ಮರೆಯಾಗುತ್ತಿವೆ. ಆಧುನಿಕ ಜಗತ್ತಿನಲ್ಲಿ ಎಲ್ಲರ ಜೀವನ ಯಾಂತ್ರಿಕವಾಗಿದ್ದರಿಂದ ನಮ್ಮ ಪ್ರೀತಿ, ಬಾಂಧವ್ಯ ಸಂಬಂಧಗಳಿಂದ ಎಲ್ಲರನ್ನು ದೂರ ಉಳಿಯುವಂತೆ ಮಾಡುತ್ತಿವೆ. ಇಂತಹ ಪರಿಸರದಲ್ಲಿ ನಾವು ಬದುಕುತ್ತಿರುವುದು ದುರಂತವೆ ಸರಿ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ವಿದ್ಯಾರ್ಥಿ ಜೀವನದಿಂದಲೇ ಕನ್ನಡ ನೆಲ, ಜಲ ಸಾಹಿತ್ಯ ಪರಿಸರವನ್ನೂ ಪ್ರೀತಿಸಿ ನಮ್ಮ ಬದುಕಿಗೆ ಏನು ಬೇಕೋ ಅದನ್ನು ಮಾತ್ರ ಅಳವಡಿಸಿಕೊಳ್ಳಿ ಎಂದು ಸಲಹೆ ನೀಡಿದರು

ಇದೇ ವೇಳೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶೈಲೇಶ್ ಕುಮಾರ್ ಮಾತನಾಡಿ, ಕನ್ನಡ ಭಾಷೆ ಶುದ್ಧ, ವೈಜ್ಞಾನಿಕ ಮತ್ತು ಯಾವುದೇ ಸಂದರ್ಭದಲ್ಲಿಯೂ ಎಲ್ಲರಿಗೂ ಹೊಂದಿಕೊಳ್ಳುವ ಭಾಷೆಯಾಗಿದೆ ಪ್ರತಿಯೊಬ್ಬರೂ ಬಾಲ್ಯದಿಂದಲೇ ಕನ್ನಡವನ್ನು ಪ್ರೀತಿಸಿ, ಬೆಳೆಸಿ ಕನ್ನಡದ ಹೊಸ ಹೊಸ ಪದಗಳನ್ನು ಕಲಿಯುವ ಪ್ರಯೋಗ ಮಾಡಿ ಅದರಲ್ಲೂ ಚಾಮರಾಜನಗರದ ಕನ್ನಡವನ್ನು ಸಹಜವಾಗಿ ಬೆಳೆಸಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹನೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಲ್ಲೇಶ್ ಮಹಾಲಿಂಕಟ್ಟೆ, ಕಾರ್ಯದರ್ಶಿ ಅಭಿಲಾಷ್ ಗೌಡ, ವಿವೇಕಾನಂದ ಕಾಲೇಜು ಪ್ರಾಂಶುಪಾಲ ಮಧುಸೂದನ್, ಸಂಚಾಲಕ ರಾಜೇಂದ್ರ ಹಾಗೂ ಕಾಲೇಜು ವಿದ್ಯಾರ್ಥಿಗಳು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು