NEWSನಮ್ಮಜಿಲ್ಲೆನಮ್ಮರಾಜ್ಯ

ವರ್ಗಾವಣೆಗೊಂಡ ಸಾರಿಗೆ ನೌಕರರನ್ನು ಸ್ವಸ್ಥಾನಕ್ಕೇ ನಿಯೋಜಿಸಲಾಗುವುದು : ಸಚಿವ ಶ್ರೀ ರಾಮುಲು

ಲಾಭ–ನಷ್ಟದ ಲೆಕ್ಕಾಚಾರವಿಲ್ಲ ಪ್ರತಿ ಗ್ರಾಮಕ್ಕೂ ಬಸ್ ಓಡಿಸುತ್ತೇವೆ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ರಾಜ್ಯದ ಪ್ರತಿ ಹಳ್ಳಿಗೂ ಬಸ್ ಸಂಪರ್ಕ ಕಲ್ಪಿಸಲು ರಾಜ್ಯ ಸರ್ಕಾರ ಶಕ್ತಿಮೀರಿ ಪ್ರಯತ್ನಿ ಸಲಿದೆ. ಹೀಗಾಗಿ ಲಾಭ–ನಷ್ಟದ ಲೆಕ್ಕಾಚಾರದ ಪ್ರಶ್ನೆಯೆ ಇಲ್ಲ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಲವು ಹಳ್ಳಿಗಳಿಗೆ ಸಾರಿಗೆ ಸಂಪರ್ಕ ಇಲ್ಲ ಎಂಬುದು ಮಾಧ್ಯಮದ ಮೂಲಕ ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳು ಶಾಲೆ–ಕಾಲೇಜುಗಳಿಗೆ ನಡೆದುಕೊಂಡೆ ಹೋಗಬೇಕಿದೆ. ಈ ಸಂಕಷ್ಟ ಇರುವುದು ಗೊತ್ತಾಗಿದೆ. ಈ ಬಗ್ಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಸಾರಿಗೆ ಸಂಪರ್ಕ ಕಲ್ಪಿಸಿ ಸಮಸ್ಯೆ ಪರಿಹರಿಸುವಂತೆಮುಖ್ಯ ಮಂತ್ರಿ ಸೂಚಿಸಿದ್ದಾರೆ ಎಂದರು.

ಮೊಳಕಾಲ್ಮುರು ಪಟ್ಟ ಣಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಬಸ್ ನಿಲ್ದಾ ಣ ಹಾಗೂ ಡಿಪೊಮಂಜೂರಾಗಿದೆ. ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.

ಮೊಳಕಾಲ್ಮುರು ಪಟ್ಟಣದಲ್ಲಿ ಮಿನಿ ವಿಧಾನಸೌಧ ನಿರ್ಮಾಣವಾಗುತ್ತಿದೆ. ತಾಲ್ಲೂಕು ಕಚೇರಿ ಶೀಘ್ರದಲ್ಲೇ ಸ್ಥಳಾಂತರ ಆಗಲಿದೆ. ಈ ಸ್ಥಳದಲ್ಲಿ ಹೈಟೆಕ್ ಬಸ್ ನಿಲ್ದಾ ಣಮಾಡಲಾಗುವುದು. ಡಿಪೊಗೆ ರಾಯಪುರದ ಕಡೆ ತೆರಳುವಮಾರ್ಗದಲ್ಲಿ ಸ್ಥ ಳ ಗುರುತಿಸಲಾಗಿದೆ. ನಾಯಕನಹಟ್ಟಿಗೂ ಕೆಎಸ್ಆರ್ಟಿಸಿ ಬಸ್ ಡಿಪೊ ಮಂಜೂರಾಗಿದ್ದು ಸ್ಥಳಕ್ಕೆ ಹುಡುಕಾಟ ನಡೆಯುತ್ತಿದೆ ಎಂದರು.

ಚಿತ್ರದುರ್ಗವೂ ಸೇರಿ ರಾಜ್ಯ ದ ಹಲವೆಡೆ ಖಾಸಗಿ ಬಸ್ ಹಾವಳಿ ಹೆಚ್ಚಾಗಿದೆ. ಲಾಭದಾಯಮಾರ್ಗಗಳನ್ನು ಖಾಸಗಿ ಬಸ್‌ಗಳು ಕಬಳಿಸಿವೆ. ಇದರಿಂದ ಸಾರಿಗೆ ನಿಗಮ ಸಂಕಷ್ಟಕ್ಕೆ ಸಿಲುಕಿವೆ. ಡೀಸೆಲ್‌ ಹೊರೆಯ ಕಾರಣಕ್ಕೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಸಿಎನ್‌ಜಿ ಇಂಧನ ಬಳಕೆ ಹೆಚ್ಚಿಸಿ ನಷ್ಟದ ಪ್ರಮಾಣವನ್ನು ತಪ್ಪಿಸಲು ಚರ್ಚಿಸಲಾಗಿದೆ ಎಂದು ಹೇಳಿದರು.

ವರ್ಗಾವಣೆಮಾಡಿರುವ ನೌಕರರನ್ನು ಸ್ವಸ್ಥಾನಕ್ಕೆ ನಿಯೋಜಿಸಲಾಗುವುದು: ಮುಷ್ಕರದ ಕಾರಣಕ್ಕೆ ಅನೇಕ ಸಿಬ್ಬಂ ದಿಯನ್ನು ಅಮಾನತು ಹಾಗೂ ವಜಾಮಾಡಲಾಗಿದೆ. ಇನ್ನೂ ಕೆಲವರನ್ನು ವರ್ಗಾವಣೆಮಾಡಲಾಗಿದೆ.

ಅಮಾನತು ಹಾಗೂ ವಜಾಮಾಡಿದವರನ್ನು ಕರ್ತವ್ಯಕ್ಕೆ ನಿಯೋಜಿಸುವ ಪ್ರಕ್ರಿಯೆ ನಡೆಯುತ್ತಿದೆ. ವರ್ಗಾವಣೆ ಮಾಡಿದವರನ್ನು ಸ್ವಸ್ಥಾನಕ್ಕೆ ನಿಯೋಜಿಸಲಾಗುತ್ತದೆ. ಸಿಬ್ಬಂದಿಯನ್ನು ವಿಶ್ವಾಸಕ್ಕೆ ಪಡೆದು ನಿಗಮಗಳನ್ನು ನಷ್ಟದಿಂದ ಪಾರುಮಾಡಲಾಗುವುದು ಎಂದರು.

ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಬಾರದು. ಆದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಬೆಲೆಯಲ್ಲಿ ಬದಲಾವಣೆ ಆಗುತ್ತಿದೆ. ರಾಜ್ಯಗಳು ತೆರಿಗೆ ಕಡಿಮೆಮಾಡಿ ಇಂಧನ ಬೆಲೆ ಇಳಿಸುವಂತೆ ಕಾಂಗ್ರೆಸ್ ಸಲಹೆ ನೀಡಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಹೀಗೆ ತೆರಿಗೆ ಕಡಿಮೆ ಮಾಡಿ ತೋರಿಸಲಿ ಎಂದು ಸವಾಲು ಹಾಕಿದರು.

ನಂಜನಗೂಡು ದೇಗುಲ ಧ್ವಂಸ ಮಾಡಬಾರದಿತ್ತು. ಸರ್ಕಾರದ ಗಮನಕ್ಕೆ ಬಾರದೇ ಇಂತಹ ಘಟನೆ ನಡೆದಿದೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯ ಫಲಿತಾಂಶಮುಂಬರುವ ವಿಧಾನಸಭಾ ಚುನಾವಣೆ ದಿಕ್ಸೂಚಿಯಂತೆ ಕಾಣುತ್ತಿದೆ. 2023ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. 150ಕ್ಕೂ ಹೆಚ್ಚು ಸ್ಥಾನ ಗಳಿಸುವ ಗುರಿ ಇದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರ ತಿಕ್ರಿಯೆ ನೀಡಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು