ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ನಾಮಪತ್ರಸಲ್ಲಿಕೆ ಕಾರ್ಯ ಜೋರಾಗಿದೆ.
ಈ ಮಧ್ಯೆ ಭಾರಿ ಕುತೂಹಲಕ್ಕೆ ಕಾರಣವಾಗಿರುವ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿ ಸಚಿವ ವಿ.ಸೋಮಣ್ಣ ಕಣಕ್ಕಿಳಿದಿದ್ದು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಸೋಮಣ್ಣ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಗಣಪತಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ ನಂಜನಗೂಡು ತಾ.ಪಂ. ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಸಚಿವ ವಿ.ಸೋಮಣ್ಣಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದರಾದ ವಿ.ಶ್ರೀನಿವಾಸ್ ಪ್ರಸಾದ್, ಪ್ರತಾಪ್ ಸಿಂಹ ಸಾಥ್ ನೀಡಿದರು.
ಬಳಿಕ ಸಿಎಂ ಬೊಮ್ಮಾಯಿ ಸಚಿವ ವಿ.ಸೋಮಣ್ಣ ಪರ ಪ್ರಚಾರದಲ್ಲಿ ತೊಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸೋಮಣ್ಣ ಅಂದರೇ ವಿಕ್ಟರಿ ಸೋಮಣ್ಣ ಎಂದರು.
ಇನ್ನು ವರುಣಾದಲ್ಲಿ ಸೋಮಣ್ಣ ಪರ ಜನರ ಬೆಂಬಲ ಸಿಗುತ್ತಿದೆ. ಅವರು ಗೆದ್ದೇ ಗೆಲ್ಲುತ್ತಾರೆ. ವರುಣಾ ಕ್ಷೇತ್ರ ವರ್ಣಮಯವಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.