NEWSನಮ್ಮರಾಜ್ಯರಾಜಕೀಯ

ವಿರೋಧಿಗಳು ಎಷ್ಟೇ ಪ್ರಯತ್ನ ಮಾಡಿದರೂ ಸಿದ್ದರಾಮಯ್ಯನ ಸೋಲಿಸಲು ಸಾಧ್ಯವಿಲ್ಲ: ಶಾಸಕ ಯತೀಂದ್ರ ವಿಶ್ವಾಸ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವರುಣ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ. ಸಿದ್ದರಾಮಯ್ಯ ಅವರ ಗೆಲುವು ನಿಶ್ಚಿತ. ವಿರೋಧಿಗಳು ಎಷ್ಟೇ ಪ್ರಯತ್ನ ಮಾಡಿದರೂ ಸಿದ್ದರಾಮಯ್ಯನವರನ್ನ ಸೋಲಿಸಲು ಸಾಧ್ಯವಿಲ್ಲ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಇಂದಿನಿಂದ ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡುತ್ತಾರೆ. ಈಗಾಗಲೇ ಎರಡು ದಿನ ಪ್ರಚಾರ ಮಾಡ್ತೇನೆ ಎಂದು ಹೇಳಿದ್ದಾರೆ.

ಇಂದು ಕೆಲವು ಗ್ರಾಮಗಳಲ್ಲಿ ಪ್ರಚಾರ ಮಾಡಲಿದ್ದು. ದೊಡ್ಡ ಮಟ್ಟದ ಪ್ರಚಾರವೇನು ಮಾಡುತ್ತಿಲ್ಲ. ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಕ್ಷೇತ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

ಸಿದ್ದರಾಮಯ್ಯ ಸೋಲಿನ ಭಯದಿಂದ ಧವನ್ ರಾಕೇಶ್ ಕರೆ ತಂದು ಪ್ರಚಾರ ಮಾಡುತ್ತಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ, ಪ್ರತಾಪ್ ಸಿಂಹ ಅವರ ಮನೆಯವರನ್ನು ಎಲ್ಲಿಯೂ ಕರೆದುಕೊಂಡು ಹೋಗಿಲ್ವೇ ಎಂದು ಪ್ರಶ್ನಿಸಿದರು.

ಇನ್ನು ಧವನ್ ರಾಕೇಶ್ ನಾಮಪತ್ರ ಸಲ್ಲಿಸುವ ದಿನ ತಾತನಿಗೆ ಶುಭ ಕೋರಲು ಬಂದಿದ್ದ. ಧವನ್ ರಾಕೇಶ್ ಎಲ್ಲಿಯೂ ಸಹ ಪ್ರಚಾರಕ್ಕೆ ಬಂದಿಲ್ಲ. ನಮ್ಮ ಕುಟುಂಬ ಯಾವತ್ತೂ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿಲ್ಲ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರು ಸ್ಪರ್ಧೆ ಮಾಡಬಹುದು. ಆದರೆ, ಸಚಿವ ಸೋಮಣ್ಣನವರ ಕೊಡುಗೆ ವರುಣ ಕ್ಷೇತ್ರಕ್ಕೆ ಏನಿದೆ ಎಂದು ಸಿದ್ದರಾಮಯ್ಯ ಕೇಳಿದ್ದಾರೆ. ಅದಕ್ಕೆ ಉತ್ತರ ಕೊಡಲಿ ಎಂದ ಅವರು, ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ