ವಲಸೆ ಕಾರ್ಮಿಕರು ಜಿಲ್ಲೆಯೊಳಗೆ ಬಾರದಂತೆ ಎಚ್ಚರವಹಿಸಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರವೀಂದ್ರ ಸಲಹೆ
ಬೆಂಗಳೂರು ಗ್ರಾಮಾಂತರ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆ, ವಲಸೆ ಕಾರ್ಮಿಕರು ಬಾರಿ ಸಂಖ್ಯೆಯಲ್ಲಿ ಜಿಲ್ಲೆಯೊಳಗೆ ಬರುತ್ತಿದ್ದು, ಇದನ್ನು ತಡೆಗಟ್ಟಲು, ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಎಲ್ಲಾ ಮಾರ್ಗದಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಇಂದು ಕೊರೊನಾ ವೈರಾಣು (ಕೋವಿಡ್-19) ಹರಡುವಿಕೆ ತಡೆಗಟ್ಟುವ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಲಾಕ್ ಡಾನ್ ಹಿನ್ನೆಲೆ ಕೆಲಸ-ಕಾರ್ಯಗಳು ಸ್ಥಗಿತಗೊಂಡಿರುವುದರಿಂದ ಕಾರ್ಮಿಕರು ಆತಂಕದಲ್ಲಿ ತಮ್ಮ ಊರುಗಳಿಗೆ ಹಿಂದಿರುಗುತ್ತಿದ್ದು, ಇದನ್ನು ತಡೆಗಟ್ಟುವುದು ಅವಶ್ಯವಾಗಿದೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಗರ ಪ್ರದೇಶದಲ್ಲಿರುವ ಕಾರ್ಮಿಕರಿಗೆ ಸಮುದಾಯ ಭವನದಲ್ಲಿ ವಾಸ ಹಾಗೂ ಊಟಕ್ಕೆ ವ್ಯವಸ್ಥೆ ಮಾಡಬೇಕು. ಈ ಸಂಬಂಧ ತಾಲ್ಲೂಕುಗಳ ತಹಶೀಲ್ದಾರ್ ಗಳು, ಕಾರ್ಮಿಕ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಹಕಾರ ಪಡೆದು ಯಾವುದೇ ಕಾರ್ಮಿಕರು ಮೂಲಭೂತ ಸೌಕರ್ಯದಿಂದ ವಂಚಿತವಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಅಲ್ಲದೇ ಗ್ರಾಮಾಂತರ ಪ್ರದೇಶದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯತಿ ಮಟ್ಟದ ಸಮಿತಿಗಳ ಮೂಲಕ ಅಕ್ಷರ ದಾಸೋಹ ಕಚೇರಿಗಳಲ್ಲಿ ಕಾರ್ಮಿಕರಿಗೆ ಊಟ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಲಭ್ಯವಿರುವ ಹಣ್ಣು, ತರಕಾರಿ ಹಾಗೂ ದಿನಸಿಗಳ ಬಗ್ಗೆ ಕೃಷಿ ಉತ್ಪನ್ನಗಳ ಮಾರುಕಟ್ಟೆಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಬೇಕು. ರೈತರು ಬೆಳೆದಿರುವ ಹಣ್ಣು ಹಾಗೂ ತರಕಾರಿಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ತೋಟಗಾರಿಕೆ ಅಧಿಕಾರಿಗಳು ಕೃಷಿ ಉತ್ಪನ್ನಗಳ ಮಾರುಕಟ್ಟೆ ಅಧಿಕಾರಿಗಳು ಕ್ರಮವಹಿಸಬೇಕು. ರೈತರು ಬೆಳೆದಿರುವ ಯಾವುದೇ ಪದಾರ್ಥಗಳಿಗೆ ಮಾರುಕಟ್ಟೆ ಇಲ್ಲದಂತೆ ಆಗಬಾರದು ಎಂದು ತಿಳಿಸಿದರು.
ಹಾಲು, ಹಣ್ಣು, ತರಕಾರಿ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳು ಹಾಗೂ ಔಷಧಿಗಳನ್ನು ಸಾಗಿಸುವ ವಾಹನಗಳಿಗೆ ಯಾವುದೇ ನಿರ್ಬಂಧ ಇರಬಾರದು. ಅಗತ್ಯ ಸೇವೆಯಲ್ಲಿರುವ ಸರ್ಕಾರಿ ವಾಹನಗಳು, ನೌಕರರನ್ನು ಹೊರತುಪಡಿಸಿ, ಗುಂಪು-ಗುಂಪಾಗಿ ಜನರನ್ನು ಸಾಗಣೆ ಮಾಡುವ ವಾಹನಗಳಿಗೆ ಸಂಚರಿಸಲು ಅವಕಾಶ ಕಲ್ಪಿಸಬಾರದು. ಸಾಮಾಜಿಕ ಅಂತರ ಕಾಯ್ದುಕೊಂಡು ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಸಾರ್ವಜನಿಕರು ಸರ್ಕಾರದೊಂದಿಗೆ ಕೈಜೋಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.
ಸಾಮಾಜಿಕ ಜಾಲತಾಣಗಳು ಸುಳ್ಳು ಸುದ್ದಿ ಪ್ರಕಟಿಸುವ ಮೂಲಕ ಸಮಾಜದಲ್ಲಿ ಗೊಂದಲ ಉಂಟು ಮಾಡುತ್ತಿವೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜನರು ವದಂತಿಗಳಿಗೆ ಕಿವಿಗೊಡದೇ ಸರ್ಕಾರದ ಸೂಚನೆ ಮೇರೆಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಹಕರಿಂದ ಹೆಚ್ಚಿನ ದರ ಪಡೆದಲ್ಲಿ ಹಾಗೂ ಕೃತಕ ಅಭಾವ ಮತ್ತು ಅನಧಿಕೃತವಾಗಿ ದಾಸ್ತಾನು ಕಂಡುಬಂದಲ್ಲಿ ಅಂತವರ ವಿರುದ್ದ ವಸ್ತುಗಳ ಕಾಯ್ದೆಯಡಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಮಂಜುನಾಥ, ಉಪ ಪೊಲೀಸ್ ಅಧೀಕ್ಷಕ ರಂಗಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Related
You Might Also Like
ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (77) ಇಂದು ಬಾರದ ಲೋಕಕ್ಕೆ ಪಯಾಣ ಬೆಳೆಸಿದ್ದಾರೆ. ಇತ್ತೀಚೆಗಷ್ಟೇ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4...
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ
ಬೆಳಗಾವಿ: ಕಾರಿಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ...
BMTC ಕಂಡಕ್ಟರ್: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ – ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನುತ್ತಿರುವ ಕಿರಾತಕ
ಬೆಂಗಳೂರು: ಎಂ.ಎಸ್.ಪಾಳ್ಯದಿಂದ-ಯಲಹಂಕ ಮಾರ್ಗದಲ್ಲಿ ಟಿಕೆಟ್ ಕೊಡುತ್ತಲೇ ಮುಗ್ದ ಯುವತಿಯನ್ನು ಕಂಡಕ್ಟರ್ ಪಟಾಯಿಸಿದ್ದು, ಮದುವೆಯಾದ ಮೂರೇ ತಿಂಗಳಿಗೆ ಾತನ ಅಸಲಿ ಮುಖ ಬಯಲಾಗಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ....
KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿ, ಅಂದರೆ ಚಾಲಕ ನಿರ್ವಾಹಕರು ಪ್ರಾಮಾಣಿಕತೆ ಮೆರೆಯು ಮೂಲಕ ಇತರರಿಗೆ ಮಾದರಿಯಾಗುತ್ತಿರುವುದು ನಿರಂತರವಾಗಿದೆ. ಇದು ಒಂದು ರೀತಿ...
ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬಂಧನ
ಮೈಸೂರು: ರೈತ ವಿರೋಧಿ ಕೇಂದ್ರ ಸರ್ಕಾರದ ವರ್ತನೆ ಖಂಡಿಸಿ ದಲೈವಾಲ ಹೋರಾಟವನ್ನು ಬೆಂಬಲಿಸಿ ಪ್ರಧಾನ ಮಂತ್ರಿ ಹಾಗೂ ಕೃಷಿ ಮಂತ್ರಿಗಳ ಪ್ರತಿಕೃತಿ ದಹನ ಮಾಡಲು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ...
ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್
ಬೆಂಗಳೂರು: ಯುವ ದಿನ, ಜನವರಿ 12 ರಂದು, ಸ್ವಾಮಿ ವಿವೇಕಾನಂದರ ಪ್ರೇರಣಾದಾಯಕ ಜೀವನ ಮತ್ತು ಉಪದೇಶಗಳನ್ನು ಆಚರಿಸುತ್ತದೆ. ಅವರ ಉಪದೇಶಗಳು ಪೀಳಿಗೆಗಳನ್ನು ಪ್ರೇರೇಪಿಸುತ್ತಿವೆ ಎಂದು ಏಮ್ಸ್ ಮತ್ತು...
ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ
ಹುಬ್ಬಳ್ಳಿ: ಚುನಾವಣಾ ಪೂರ್ವ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗ ಮಾದರಿಯಲ್ಲಿ) ನೀಡುವಂತೆ...
“ಕೆಎಸ್‌ಆರ್‌ಟಿಸಿ ಆರೋಗ್ಯ” ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯದಿಂದ ಇರಬೇಕು ಎಂಬ ಸದುದ್ದೇಶದಿಂದ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು...
BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ನೀಡುವುದಕ್ಕೆ ಬೇಕಾದ ದಾಖಲೆಗಳನ್ನು ಸಂಗ್ರಹಿಸಲು ಮೂವರು ಅಧಿಕಾರಿಗಳನ್ನೊಳಗಂಡ ಮೇಲ್ವಿಚಾರಣೆ ತಂಡಗಳನ್ನು ರಚಿಸಿ ವ್ಯವಸ್ಥಾಪಕ...
ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ
ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಬೆಂಗಳೂರು: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ...