NEWSನಮ್ಮಜಿಲ್ಲೆ

ವಲಸೆ ಕಾರ್ಮಿಕರ ತಾಣಗಳಿಗೆ ನ್ಯಾ. ಚಿನ್ನಣ್ಣವರ ಭೇಟಿ

ಆಶ್ರಯತಾಣಗಳಲ್ಲಿರುವವರ ಆರೋಗ್ಯ ವಿಚಾರಣೆ l ಸೌಲಭ್ಯ ನೀಡಿರುವ ಬಗ್ಗೆ ಮಾಹಿತಿ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಾಗಿರುವ ಈ ಅವಧಿಯಲ್ಲಿ ದೇಶದ ವಿವಿಧ ಭಾಗಗಳು ಮತ್ತು ರಾಜ್ಯದ ನಾನಾ ಜಿಲ್ಲೆಗಳ ವಲಸೆ ಕಾರ್ಮಿಕರು ನಿರಾಶ್ರಿತರಾಗಬಾರದು ಎಂಬ ಕಾಳಜಿಯೊಂದಿಗೆ ಸರ್ಕಾರ ವಿವಿಧ ಹಾಸ್ಟೆಲ್ ಗಳಲ್ಲಿ ಪ್ರಾರಂಭಿಸಿರುವ ವಲಸೆ ಕಾರ್ಮಿಕರ ಆಶ್ರಯತಾಣಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್. ಚಿನ್ನಣ್ಣವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯ ವಿವಿಧ 9 ಸ್ಥಳಗಳಲ್ಲಿ 315 ವಲಸೆ ಕಾರ್ಮಿಕರಿಗೆ ಊಟ, ವಸತಿ ಸೌಕರ್ಯ ಕಲ್ಪಿಸಲಾಗಿದ್ದು ಸಪ್ತಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕರ (ಗೌರಿಶಂಕರ) ಹಾಸ್ಟೆಲ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ( ಆದರ್ಶ) ಹಾಸ್ಟೆಲ್ ಹಾಗೂ ರಂಗಾಯಣಕ್ಕೆ ಚಿನ್ನಣ್ಣವರ ಭೇಟಿ ನೀಡಿದರು.

ಒಂದೇ ಕೊಠಡಿಯಲ್ಲಿ ಬಹಳ ಜನ ಇರಬಾರದು, ನಿಗದಿಪಡಿಸಿದವರು ಮಾತ್ರ ಇರಬೇಕು. ಅನಗತ್ಯವಾಗಿ ಎಲ್ಲರೂ ಒಂದೇ ಕಡೆ ಸೇರಬಾರದು ಎಂದು ಸಲಹೆ ನೀಡಿದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು‌‌. ಹಾಸ್ಟೆಲ್ ಸಿಬ್ಬಂದಿ ಕೂಡ ತಮ್ಮ ವೈಯಕ್ತಿಕ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕು ಎಂದು ಕಿವಿ ಮಾತು ಹೇಳಿದರು.

ರಂಗಾಯಣದಲ್ಲಿರುವ 69 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರನ್ನು  ಬಿಸಿಎಂ ಹಾಸ್ಟೆಲ್ಗೆ ಸ್ಥಳಾಂತರಿಸಲು ಸೂಚಿಸಿದರು.  ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ, ವಾರ್ಡನ್ ಗಳಾದ ಅಸ್ಕರ್ ಅಲಿ ಹಿರೇಮನಿ, ಕುಸುಗಲ್ ಮತ್ತಿತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ