NEWSದೇಶ-ವಿದೇಶನಮ್ಮರಾಜ್ಯ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಪಿಎಸ್ ಪಿಂಚಣಿಗಾರರ ಪ್ರತಿಭಟನೆ- ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಪಿಎಸ್ ಪಿಂಚಣಿದಾರರು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಲ್ಲಿ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ರಾಷ್ಟ್ರೀಯ ಸಂಘರ್ಷ ಸಮಿತಿ ಹಾಗೂ ಬಿಎಂಟಿಸಿ & ಕೆಎಸ್ಆರ್‌ಟಿಸಿ ವತಿಯಿಂದ ನಿನ್ನೆ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಂಯಮ, ಶಿಸ್ತು ಮತ್ತು ಶಾಂತಿಗೆ ಹೆಸರಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಹಾಗೂ ಇತರೆ ಹತ್ತಾರು ಕಂಪನಿಗಳ ನಿವೃತ್ತರ ನೌಕರರ ತಾಳ್ಮೆ ಪರೀಕ್ಷಿಸಬೇಡಿ ಎಂದು ಸೇರಿದ್ದ ನೂರಾರು ನಿವೃತ್ತ ನೌಕರರು ಎಚ್ಚರಿಕೆ ನೀಡಿದರು.

ನಿವೃತ್ತರ ಆಕ್ರೋಶದ ಕಟ್ಟೆ ಒಡೆದು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಚೇರಿ ಆವರಣದಲ್ಲಿ ಅಧಿಕಾರಿಗಳ ವಿರುದ್ಧ ಕೂಗಿದ ಧಿಕ್ಕಾರದ ಘೋಷಣೆ ಅಧಿಕಾರಿಗಳಲ್ಲಿ ಕ್ಷಣ ತನ್ನಣವನ್ನುಂಟು ಮಾಡಿತು.

ಇಪಿಎಫ್ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ವಿಳಂಬ ನೀತಿ ಅನುಸರಿಸುತ್ತಿದ್ದು, ನಿವೃತ್ತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಪಿಂಚಣಿ ಲೆಕ್ಕಾಚಾರದ ತಕ್ತೆ (caliculation) ನೀಡುತ್ತಿಲ್ಲ ಎಂದು ಸುಬ್ಬಣ್ಣ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯ ಸಂಯೋಜಕರಾದ ರಮಕಾಂತ ನರಗುಂದ ಮಾತನಾಡಿ, ಹಿಂದಿನ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬಂದಿದ್ದು, ಜುಲೈ 29 ಮತ್ತು 30 ರಂದು ದೇಶದ ವಿವಿಧ ರಾಜ್ಯಗಳಿಂದ ಆಗಮಿಸುವ ಎಲ್ಲ ಎನ್ಎಸಿ ಮುಖಂಡರು ದೆಹಲಿಯಲ್ಲಿ ಒಗ್ಗೂಡಿ, ಕೇಂದ್ರ ಸರ್ಕಾರದ ಉನ್ನತ ಮಟ್ಟದ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ, ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಯಾಧ್ಯಕ್ಷ ನಂಜುಂಡೇಗೌಡ ಮಾತನಾಡಿ, ಸರ್ವೋಚ್ಚ ನ್ಯಾಯಾಲಯವು ನೀಡಿರುವ ತೀರ್ಪನ್ನು ಇಪಿಎಫ್ಒ ಅಧಿಕಾರಿಗಳು ಧಿಕ್ಕರಿಸಿ, ಇಪಿಎಸ್ ನಿವೃತ್ತರ ಬದುಕಿನ ಜತೆ ಇವರು ಚೆಲ್ಲಾಟವಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನ್ಯಾಯಾಲಯ ನಿಂದನಾ ಅರ್ಜಿಯಲ್ಲಿ ಇವರಿಗೆ ತಕ್ಕ ಶಾಸ್ತಿ ಆಗಲಿದೆ ಎಂದು ಎಚ್ಚರಿಕೆ ನೀಡಿ, ಎಲ್ಲ ಇಪಿಎಸ್ ನಿವೃತ್ತರಿಗೆ ಕನಿಷ್ಠ ಹೆಚ್ಚುವರಿ ಪಿಂಚಣಿ ರೂ.7,500 + ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯವನ್ನು ವಿಸ್ತರಿಸಬೇಕೆಂದು ಆಗ್ರಹಿಸಿದರು.

ಎಲ್ಲ ನಿವೃತ್ತರು ಒಗ್ಗಟ್ಟು ಪ್ರದರ್ಶಿಸಬೇಕು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಿವೃತ್ತರು ಪ್ರತಿಭಟನಾ ಸಭೆಗೆ ಆಗಮಿಸಬೇಕು, ಸರ್ಕಾರದ ಗಮನ ಸೆಳೆಯಬೇಕು ಎಂದು ಅಧ್ಯಕ್ಷ ಶಂಕರ್ ಕುಮಾರ್ ಕರೆ ನೀಡಿದರು.

ಕಮಾಂಡರ್ ಅಶೋಕ್ ರಾಹುತ್ ರವರ ನೇತೃತ್ವದಲ್ಲಿ ಸ್ಥಾಪನೆಗೊಂಡಿರುವ ಎನ್‌ಎಸಿ ಸಂಘಟನೆ ಅತ್ಯಂತ ಬಲಿಷ್ಠವಾಗಿದ್ದು, ತಾವೆಲ್ಲರೂ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಲಪಡಿಸಬೇಕೆಂದು ಎನ್ಎಸಿ ಉಪಾಧ್ಯಕ್ಷ ವೀರ ಕುಮಾರ್ ಗಡದ್ ಸಲಹೆ ನೀಡಿದರು.

ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯ್ಡು ಮಾತನಾಡಿ, ಇಪಿಎಫ್ಒ ಅಧಿಕಾರಿಗಳು ನಿವೃತ್ತರ ಬಗ್ಗೆ ತಳೆದಿರುವ ಧೋರಣೆ ಅಸಹನೀಯವಾಗಿದ್ದು, ಇದಕ್ಕೆ ಇತಿಶ್ರೀ ಹಾಡಲೇ ಬೇಕು ಎಂದರು.

ಪ್ರತಿಭಟನ ನಿರತರಿಂದ ಮನವಿ ಪತ್ರ ಸ್ವೀಕರಿಸಲು ಸ್ಥಳಕ್ಕಾಗಮಿಸಿದ ಇಪಿಎಫ್ಒ ಅಧಿಕಾರಿಗಳಿಗೆ ಈ ವರೆಗಿನ ಎಲ್ಲ ಬೆಳವಣಿಗೆಗಳನ್ನು ತಿಳಿಸುವಂತೆ ಮುಖಂಡರು ಕೇಳಿದ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರಿಸಲಾಗದೆ ತಬ್ಬಿಬ್ಬಾದರು.

ಸಂಘದ ಪ್ರಧಾನ ಕಾರ್ಯದರ್ಶಿ ಡೋಲಪ್ಪನವರು ಹೋರಾಟದ ರೂಪುರೇಷೆ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ಪದಾಧಿಕಾರಿಗಳಾದ ನಾಗರಾಜು ಹಾಗೂ ಮನೋಹರ್ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ