NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಸ್ತೆಯಲ್ಲೇ ಕುಳಿತ ರೈತರು – ಪೊಲೀಸರೊಂದಿಗೆ ಮಾತಿನ ಚಕಮಕಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ರೈತರು ಯತ್ನಿಸಿದಾಗ ತಡೆದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಪ್ರತಿಭಟನಾ ಸ್ಥಳಕ್ಕೆ ಬಂದ ಅಪಾರ ಜಿಲ್ಲಾಧಿಕಾರಿ ಕವಿತಾ ರಾಜರಾವ್ ಒತ್ತಾಯ ಪತ್ರ ಸ್ವೀಕರಿಸಿ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮಸ್ಯೆಗಳಿಗೆ ಉತ್ತರ ಹೇಳುತ್ತಾರೆ ಎಂದಾಗ ರೈತರು ಒಪ್ಪಲಿಲ್ಲ ಜಿಲ್ಲಾಧಿಕಾರಿಗಳ ಸಮಕ್ಷಮ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳೇ ಹಾಜರಿದ್ದು ಉತ್ತರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳು ಮೂರು ದಿನದೊಳಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳ ಸಭೆ ನಡೆಸಿ ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದ ನಂತರ ಚಳವಳಿಯನ್ನು ಕೈ ಬಿಡಲಾಯಿತು.

ಚಳುವಳಿಯ ನೇತೃತ್ವ ವಹಿಸಿದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಮಾತನಾಡಿ, ಎಲ್ಲ ಸರ್ಕಾರಗಳು ರೈತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಿವೆ, ತಿನ್ನುವ ಅನ್ನಕ್ಕೆ ಕಷ್ಟ ಬಂದಾಗ ರೈತರ ಬಗ್ಗೆ ಗೌರವ ಬರುತ್ತದೆ, ಈಗ ಪಾಕಿಸ್ತಾನದಲ್ಲಿ ಬಂದಿದೆ, ರೈತರು ಎಂದಿಗೂ ಯಾರಿಗೂ ಹೆದರಬಾರದು. ರೈತರ ಮೇಲೆ ದಬ್ಬಾಳಿಕೆ ನಡೆಸುವ ಯಾರೇ ಆದರೂ ಅವರನ್ನು ಮಟ್ಟ ಹಾಕಲು ಸಂಘಟಿತರಾಗಬೇಕು. ಸರ್ಕಾರ ಮಾಡಿದ ಆದೇಶವನ್ನು ಗಾಳಿಗೆ ತೂರಿ ರೈತರನ್ನು ವಂಚಿಸುವ ಸಕ್ಕರೆ ಕಾರ್ಖಾನೆ ಮಾಲೀಕರ ಷಡ್ಯಂತರ ಮಟ್ಟ ಹಾಕಲು ಹೋರಾಟ ಅವಶ್ಯಕತೆ ಎಂದರು.

ಇಂದಿನ ಒತ್ತಾಯಗಳು: ರಾಜ್ಯ ಕಬ್ಬು ಬೆಳೆಗಾರರ ಸಂಘದ ಸತತ 39 ದಿನಗಳ ಹೋರಾಟದ ಪರಿಣಾಮ ಕಬ್ಬಿಗೆ ರೂ. 150 ಹೆಚ್ಚುವರಿ ಆದೇಶ ಮಾಡಿದ್ದರು. ಬಣ್ಣಾರಿ ಸಕ್ಕರೆ ಕಾರ್ಖಾನೆ ಹೆಚ್ಚುವರಿ ಹಣ ಪಾವತಿಸದೆ ಇರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದರೂ ಯಾವುದೇ ಕ್ರಮ ಜಾರಿಯಾಗಿಲ್ಲ. ಕೂಡಲೇ ಕ್ರಮ ಕೈಗೊಂಡು ರೈತರಿಗೆ ಸಲ್ಲಬೇಕರಿವುದನ್ನು ಕೊಡಬೇಕು.

ಅರಿಶಿಣ ಬೆಳೆಗೆ ಬೆಲೆ ಕುಸಿತವಾಗಿದ್ದು ಉತ್ಪಾದನಾ ವೆಚ್ಚವು ಸಿಗುತ್ತಿಲ್ಲ, ಕನಿಷ್ಠ ಬೆಂಬಲ ಬೆಲೆ ಕ್ವಿಂಟಲ್‌ಗೆ 17,500 ರೂ. ನಿಗದಿ ಮಾಡಬೇಕು. ಕಾವೇರಿ – ಕಬಿನಿ ಅಚ್ಚುಕಟ್ಟು ನಾಲೆಗಳ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಕಬ್ಬು, ಬಾಳೆ ಇನ್ನಿತರ ಬೆಳೆಗಳ ರಕ್ಷಣೆಗಾಗಿ, ಬೇಸಿಗೆಯಲ್ಲಿ ದನ ಕರುಗಳ ಕುಡಿಯುವ ನೀರಿಗಾಗಿ ಕೆರೆ ಕಟ್ಟೆಗಳನ್ನು ತುಂಬಿಸಲು ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು.

ಕೃಷಿ ಪಂಪ್‌ಸೆಟ್‌ಗಳಿಗೆ ಬೆಳಗ್ಗೆ 6 ರಿಂದ ಸಂಜೆ 6 ರವರಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ನೀಡಬೇಕು. ಕಾಡುಪ್ರಾಣಿಗಳ ದಾಳಿಯಿಂದ ರೈತರು ಭಯ ಭೀತರಾಗಿರುವ ಕಾರಣ ಹಗಲು ವೇಳೆ ವಿದ್ಯುತ್ ನೀಡಬೇಕು. ಕನಿಷ್ಠ ಬೆಂಬಲ ಬೆಲೆ ಭತ್ತ, ರಾಗಿ ಇತರೆ ಉತ್ಪನ್ನಗಳ ಖರೀದಿ ಕೇಂದ್ರಗಳಲ್ಲಿ, ರೈತರಿಂದ ಖರೀದಿ ಮಿತಿ ವಿಧಿಸಿರುವುದನ್ನು ರದ್ದುಗೊಳಿಸಬೇಕು.

ಪ್ರಧಾನಿ ಫಸಲ್ ಭೀಮಾ ಬೆಳೆವಿಮೆ ಪದ್ಧತಿ ರೈತರಿಗೆ ಸಹಕಾರಿಯಲ್ಲ, ಕಂಪನಿಗಳಿಗೆ ಲಾಭ ತರುವ ಯೋಜನೆಯಾಗಿದೆ, ಇನ್ನಾದರೂ ರೈತರ ಅನುಕೂಲಕ್ಕೆ ತಕ್ಕಂತೆ ನಿಯಮಗಳನ್ನು ಬದಲಾಯಿಸಬೇಕು. ಬ್ಯಾಂಕ್‌ಗಳಲ್ಲಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಮಾನದಂಡ ನೀತಿ ಕೈ ಬಿಡಬೇಕು. ಕೃಷಿ ಸಾಲ ನೀತಿ ಬದಲಾಗಬೇಕು. ರಸಗೊಬ್ಬರ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ, ಕೆಲವು ಕಡೆ ಕಳಪೆ ರಸಗೊಬ್ಬರ ಕೀಟನಾಶಕ ಮಾರಾಟ ಮಾಡುವುದನ್ನು ತಡೆಗಟ್ಟಬೇಕು.

ಜಿಲ್ಲೆಯಲ್ಲಿ ಸಾವಿರಾರು ರೈತರು ಹತ್ತಾರು ವರ್ಷಗಳಿಂದಲೂ ಸಾಗುವಳಿ ಮಾಡಿಕೊಂಡು ಹೋಗುತ್ತಿರುವ ಜಮೀನುಗಳಿಗೆ ಸಾಗುವಳಿ ಪತ್ರವನ್ನು ನೀಡದೆ ನಿರ್ಲಕ್ಷ ವಹಿಸುತ್ತಿದ್ದಾರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ರೈತರಿಗೆ ನ್ಯಾಯಬದ್ಧವಾಗಿ ಸಾಗುವಳಿ ಪತ್ರವನ್ನು ನೀಡಬೇಕು.

ಕಾಡು ಪ್ರಾಣಿಗಳ ಹಾವಳಿಯಿಂದ ನಾಶವಾಗುವ ಪರಿಹಾರ ಧನ ಸಂಪೂರ್ಣ ನಷ್ಟ ಭರಿಸಬೇಕು, ಜೀವ ಹಾನಿಗೆ ಕನಿಷ್ಠ 50 ಲಕ್ಷ ಪರಿಹಾರ ನೀಡಬೇಕು. ಕಾಡಂಚಿನಲ್ಲಿ ಪ್ರಾಣಿಗಳ ಸಾವಿಗೆ ರೈತರನ್ನ ಬಂಧಿಸಿ ಜೈಲಿಗೆ ಕಳಿಸುವ, ರೈತರನ್ನ ಭಯೋತ್ಪಾದಕರಂತೆ ಬಿಂಬಿಸುವ ಅರಣ್ಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಜಿಲ್ಲಾಧ್ಯಕ್ಷ ಪಿ.ಸೋಮಶೇಖರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಕಿರಗಸೂರ ಶಂಕರ ಕೆರೆಹುಂಡಿ ರಾಜಣ್ಣ, ಮಹಿಳಾ ಜಿಲ್ಲಾಧ್ಯಕ್ಷೆ ಕಮಲಮ್ಮ ತಾಲೂಕು ಅಧ್ಯಕ್ಷರಾದ ಕುರುಬೂರು ಸಿದ್ದೇಶ್, ಲಕ್ಷ್ಮೀಪುರ ವೆಂಕಟೇಶ್, ಕೋಟೆ ರಾಜೇಶ್, ಹಾಡ್ಯರವಿ, ಪಟೇಲ್ ಶಿವಮೂರ್ತಿ, ರೂಪ, ದೇವಮಣಿ, ಬಿದರಹಳ್ಳಿ ಮಾದಪ್ಪ, ಮುಖಂಡರಾದ, ಪ್ರಸಾದ್ ನಾಯ್ಕ, ಕುರುಬೂರು ಪ್ರದೀಪ್, ಗೌರಿಶಂಕರ್, ಹಾಲಿನ ನಾಗರಾಜ್, ಅಂಬಳೆ ಮಂಜುನಾಥ್, ಪಿ.ರಾಜು, ಉಡಿಗಾಲ ಮಂಜುನಾಥ್, ಕೋಟೆ ಸುನಿಲ್ ಕುಮಾರ್, ರೇವಣ್ಣ, ಮಹದೇವಸ್ವಾಮಿ ಸೇರಿದಂತೆ ನೂರಾರು ರೈತ, ರೈತಮಹಿಳೆಯರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು