NEWSದೇಶ-ವಿದೇಶ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಭಾರತ ತಂಡ ಪ್ರಕಟ: ಶಾರ್ದೂಲ್ ಠಾಕೂರ್, ಅಜಿಂಕ್ಯ ರಹಾನೆ ವಾಪಸ್‌- ಸೂರ್ಯಕುಮಾರ್ ಯಾದವ್‌ಗೆ ಶಾಕ್‌

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಬಿಸಿಸಿಐ ಇಂದು 15 ಜನರ ತಂಡ ಪ್ರಕಟಿಸಿದ್ದು, ನಿರೀಕ್ಷೆಯಂತೆ ರಿಷಭ್ ಪಂತ್, ಶ್ರೇಯಸ್ ಅಯ್ಯರ್ ಮತ್ತು ಜಸ್ಪ್ರೀತ್ ಬುಮ್ರಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ, ಸೂರ್ಯಕುಮಾರ್ ಯಾದವ್‌ ಅವರನ್ನು ತಂಡದಿಂದ ಕೈಬಿಟ್ಟಿದ್ದು, ಶಾರ್ದೂಲ್ ಠಾಕೂರ್ ಮತ್ತು ಅಜಿಂಕ್ಯ ರಹಾನೆ ತಂಡಕ್ಕೆ ವಾಪಸಾಗಿದ್ದಾರೆ.

ತಂಡದಿಂದ ಹೊರಬಿದ್ದಿದ್ದ ಮಧ್ಯಮ ಕ್ರಮಾಂಕದ ಆಟಗಾರ ಅಜಿಂಕ್ಯ ರಹಾನೆ ಅವರನ್ನು ಫೈನಲ್ ತಂಡಕ್ಕೆ ಸೇರಿಸಲಾಗಿದೆ. ರಹಾನೆ ಅವರು 15 ತಿಂಗಳ ಬಳಿಕ ರಾಷ್ಟ್ರೀಯ ತಂಡದ ಕರೆ ಪಡೆದಿದ್ದಾರೆ. ಅಯ್ಯರ್ ಅಲಭ್ಯತೆಯ ಕಾರಣದಿಂದ ರಹಾನೆ ಅವರನ್ನು ಕರೆತರಲಾಗಿದೆ.

ಜೂನ್ 7ರಿಂದ 11ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಪ್ರತಿಷ್ಟಿತ ಕಪ್‌ಗಾಗಿ, ಇಂಗ್ಲೆಂಡ್‌ನ ಓವಲ್‌ನಲ್ಲಿ ಸೆಣೆಸಲಿವೆ. ಸತತ ಎರಡನೇ ಫೈನಲ್ ಆಡುತ್ತಿರುವ ಭಾರತವು ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

ನಂಬರ್ 1 ಟಿ20 ಬ್ಯಾಟರ್ ಸೂರ್ಯಕುಮಾರ್ ಯಾದವ್‌ ಅವರನ್ನು ಟೆಸ್ಟ್‌ ತಂಡದಿಂದ ಕೈಬಿಡಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವಕಾಶ ಪಡೆದುಕೊಂಡಿದ್ದ ಅವರು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು. ಅಲ್ಲದೆ ಏಕದಿನ ಸರಣಿ ಮತ್ತು ಐಪಿಎಲ್‌ನಲ್ಲಿ ಕೂಡ ನಿರೀಕ್ಷಿತ ಪ್ರದರ್ಶನ ನೀಡದ ಕಾರಣ ಅವರು ಅವಕಾಶ ಕಳೆದುಕೊಂಡಿದ್ದಾರೆ.

ಐಪಿಎಲ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಅಜಿಂಕ್ಯ ರಹಾನೆ ಮತ್ತೆ ಭಾರತ ತಂಡಕ್ಕೆ ವಾಪಸಾಗಿದ್ದಾರೆ. 2023ರ ಐಪಿಎಲ್‌ನಲ್ಲಿ 5 ಪಂದ್ಯಗಳನ್ನು ಆಡಿರುವ ರಹಾನೆ, 52.25 ಸರಾಸರಿಯಲ್ಲಿ ಮತ್ತು 199.04 ಸ್ಟ್ರೈಕ್‌ರೇಟ್‌ನಲ್ಲಿ 209 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಅರ್ಧಶತಕ ಕೂಡ ಸೇರಿದೆ. ರಹಾನೆ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಇಂಗ್ಲೆಂಡ್‌ನಲ್ಲಿ ಆಡಿದ ಅನುಭವ ಕೂಡ ಇರುವುದರಿಂದ ಅವರನ್ನು ಆಯ್ಕೆ ಮಾಡಲಾಗಿದೆ.

ಅವಕಾಶ ಪಡೆದ ಶಾರ್ದೂಲ್ ಠಾಕೂರ್: ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದ ಬಳಲುತ್ತಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಕೂಡ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಅಲಭ್ಯರಾಗಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಲವನ್ನು ಹೆಚ್ಚಿಸಲು ಅಜಿಂಕ್ಯ ರಹಾನೆಗೆ ಅವಕಾಶ ನೀಡಲಾಗಿದೆ.

ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಕೂಡ ಭಾರತ ಟೆಸ್ಟ್ ತಂಡಕ್ಕೆ ವಾಪಸಾಗಿದ್ದಾರೆ. ಇಂಗ್ಲೆಂಡ್‌ನ ಪಿಚ್‌ನಲ್ಲಿ ಶ್ರೇಯಸ್ ಅಯ್ಯರ್ ಪರಿಣಾಮಕಾರಿಯಾಗುವ ಸಾಮರ್ಥ್ಯ ಹೊಂದಿದ್ದಾರೆ ಮಾತ್ರವಲ್ಲದೆ ಬ್ಯಾಟಿಂಗ್ ಕೂಡ ಮಾಡುವ ಸಾಮರ್ಥ್ಯ ಹೊಂದಿರುವದನ್ನು ಪರಿಗಣಿಸಿ ಅವರಿಗೆ ಅವಕಾಶ ನೀಡಲಾಗಿದೆ. ಇವರಿಬ್ಬರನ್ನು ಹೊರತುಪಡಿಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಗೆದ್ದಿದ್ದ ತಂಡವನ್ನೆ ಉಳಿಸಿಕೊಳ್ಳಲಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿ.ಕೀ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?