CrimeNEWSನಮ್ಮರಾಜ್ಯಸಂಸ್ಕೃತಿ

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮನಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ

ವಿಜಯಪಥ ಸಮಗ್ರ ಸುದ್ದಿ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಖ್ಯಾತಿಗೆ ಪಾತ್ರವಾಗಿರುವ ಬಲರಾಮ (67) ಆನೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರೆವೇರಿಸಲಾಯಿತು.

ನಾಗರಹೊಳೆ ಉದ್ಯಾನದ ಹುಣಸೂರು ವಲಯದ ಭೀಮನಕಟ್ಟೆ ಆನೆಕ್ಯಾಂಪಿನಲ್ಲಿ ಭಾನುವಾರ ಅನಾರೋಗ್ಯದಿಂದ ಮೃತಪಟ್ಟಿದ್ದ ಬಲರಾಮ.

ಹುಣಸೂರು ವಲಯದ ಭೀನಮಕಟ್ಟೆ ಸಾಕಾನೆ ಶಿಬಿರದಲ್ಲಿ ಕ್ಷಯರೋಗದಿಂದ ಮೃತಪಟ್ಟ ಬಲರಾಮ ಆನೆಯನ್ನು ಹುಣಸೂರು ವನ್ಯಜೀವಿ ವಲಯದ ಕಾರೆಕಟ್ಟೆ ಅರಣ್ಯ ಪ್ರದೇಶದಲ್ಲಿ ಪೂಜೆ, ವಿಧಿವಿಧಾನ ನೆರವೇರಿಸಿ, ಸರ್ಕಾರಿ ಗೌರವ ಸಲ್ಲಿಸಿ, ಮೂರು ಸುತ್ತು ಕುಶಲತೋಪು ಹಾರಿಸಿದ ನಂತರ ಮಣ್ಣಿನಲ್ಲಿ ಹೂಳುವ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಅರಮನೆ ಗೌರವ: ಮೈಸೂರು ಅರಸರ ಕುಟುಂಬದ ಶೃತಿ ಕೀರ್ತಿದೇವಿ ಅರಸು ಅವರು ಅರಮನೆಯ ಪುರೋಹಿತರೊಂದಿಗೆ ಆಗಮಿಸಿ ಶಾಸ್ತ್ರೋಕ್ತವಾಗಿ ಆನೆಗೆ ಅಂತಿಮ, ಪೂಜೆ ಮತ್ತು ವಿಧಿವಿಧಾನಗಳನ್ನು ನೆರವೇರಿಸಿದರು.

ಭಾವುಕ ವಿದಾಯ: ಬಲರಾಮನ ಅಂತ್ಯ ಸಂಸ್ಕಾರದ ವೇಳೆ ಮಾವುತ, ಅರಣ್ಯ ಇಲಾಖೆಯ ಸಿಬ್ಬಂದಿ, ಪಶು ವೈದ್ಯರು ಭಾವುಕರಾಗಿದ್ದರು. ಸೌಮ್ಯ ಸ್ವಭಾವದ ಬಲರಾಮನನ್ನು ನೆನೆದು ಸಿಬ್ಬಂದಿ ವರ್ಗ ಕೆಲಕಾಲ ಗದ್ಗರಿತರಾದರು.

ಅತ್ಯಂತ ಸೌಮ್ಯ ಸ್ವಭಾವಿಯಾಗಿದ್ದ ಬಲರಾಮ ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರವಲ್ಲದೆ, ಸಾರ್ವಜನಿಕರ ಗಮನವನ್ನು ಸೆಳೆದಿತ್ತು. 1999ರಿಂದ 2011ರವರೆಗೆ ಸತತ 14 ಬಾರಿ ಚಿನ್ನದ ಅಂಬಾರಿಯನ್ನು ನಿರಾಯಾಸವಾಗಿ ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಹೊತ್ತು, ಪ್ರೀತಿಗೆ ಪಾತ್ರವಾಗಿತ್ತು.

ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯ, ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷಕುಮಾರ ಚಿಕ್ಕನರಗುಂದ, ಡಿ.ಸಿ.ಎಫ್. ಸೀಮಾಪಿ.ಎ, ಸೌರಭ್ ಕುಮಾರ್, ಶರಣ ಬಸಪ್ಪ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎಲ್ಲ ಸಹಾಯಕ ಅರಣ್ಯ ಸಂರಕ್ಷಣಾಕಾರಿಗಳು ಜೊತೆಗೆ ಬಲರಾಮ ಆನೆಯ ಮಾವುತ ತಿಮ್ಮ ಹಾಗೂ ಕುಟುಂಬಸ್ಥರು, ಕಾವಾಡಿ ಮಂಜುನಾಥ ಹಾಗೂ ಬಲರಾಮ ಆನೆಯನ್ನು ಹಲವುದಿನಗಳಿಂದ ಆರೈಕೆ ಮಾಡಿದ ಪಶುವೈದ್ಯರಾದ ಡಾ.ರಮೇಶ್, ಡಾ.ನಾಗರಾಜು ಹಾಗೂ ಡಾ.ಮುಜೀಬ್ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?